For Quick Alerts
ALLOW NOTIFICATIONS  
For Daily Alerts
 

ಭಾರತ vs ವಿಂಡೀಸ್: ಮಹತ್ವದ ಮೈಲಿಗಲ್ಲು ಸಾಧಿಸಿದ ಚಾಹಲ್: ಏಕದಿನ ಕ್ರಿಕೆಟ್‌ನಲ್ಲಿ ಶತಕ ಸಾಧನೆ

India vs West Indies: Yuzvendra Chahal completed 100 wicket in ODI

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯಲ್ಲಿ ಭಾರತ ಉತ್ತಮ ಬೌಲಿಂಗ್ ದಾಳಿಯನ್ನು ನಡೆಸಿದೆ. ಸ್ಪೋಟಕ ಆಟಗಾರರ ದಂಡನ್ನೇ ಹೊಂದಿರುವ ವೆಸ್ಟ್ ಇಂಡೀಸ್ ಪಡೆಗೆ ಭಾರತೀಯ ಬೌಲಿಂಗ್ ಪಡೆ ಭಾರೀ ಆಘಾತವನ್ನೇ ನೀಡಿದೆ. ಅದರಲ್ಲೂ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಮಧ್ಯಮ ಕ್ರಮಾಂಕವನ್ನು ಸಂಪೂರ್ಣವಾಗಿ ಕೆಡವಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಯುಜುವೇಂದ್ರ ಚಾಹಲ್ ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯುಜುವೇಂದ್ರ ಚಾಹಲ್ ಏಕದಿನ ಕ್ರಿಕೆಟ್ ಮಾದರಿಯಲ್ಲಿ 100ನೇ ವಿಕೆಟ್ ಸಂಪಾದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವೆಸ್ಟ್ ಇಂಡಿಸ್ ತಂಡದ ಉಪ ನಾಯಕ ನಿಕೋಲಸ್ ಪೂರನ್ ವಿಕೆಟ್ ಕಬಳಿಸುವ ಮೂಲಕ ಚಾಹಲ್ ಈ ಮೈಲಿಗಲ್ಲು ತಲುಪಿದರು.

ವೆಸ್ಟ್ ಇಂಡೀಸ್ ತಂಡದ ಅಗ್ರ ಕ್ರಮಾಂಕಕ್ಕೆ ವೇಗಿ ಸಿರಾಜ್ ಹಾಗೂ ಸ್ಪಿನ್ನರ್ ವಾಶಿಂಗ್ಟನ್ ಸುಂದರ್ ಆಘಾತ ನೀಡಿದ ಕಾರಣ 70 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು ವೆಸ್ಟ್ ಇಂಡೀಸ್. ಈ ಸಂದರ್ಭದಲ್ಲಿ ಭಾರತ ತಂಡಕ್ಕೆ ನೂತನವಾಗಿ ನೇಮಕವಾಗಿರುವ ನಾಯಕ ರೋಹಿತ್ ಶರ್ಮಾ ಯುಜುವೇಂದ್ರ ಚಾಹಲ್ ಅವರನ್ನು ಕಣಕ್ಕಿಳಿಸಿದರು. ತನ್ನ ಮೊದಲನೇ ಓವರ್‌ನ ಮೂರನೇ ಎಸೆತದಲ್ಲಿಯೇ ಚಾಹಲ್ ಪೂರನ್ ವಿಕೆಟ್ ಸಂಪಾದಿಸುವಲ್ಲಿ ಯಶಸ್ವಿಯಾದರು.

ಈ ವಿಕೆಟ್ ಸಂಪಾದಿಸುವ ಮೂಲಕ ಚಾಹಲ್ ಏಕದಿನ ಕ್ರಿಕೆಟ್ ಮಾದರಿಯಲ್ಲಿ ವೇಗವಾಗಿ 100 ವಿಕೆಟ್ ಕಬಳಿಸಿದ ಭಾರತದ 5ನೇ ಬೌಲರ್ ಎನಿಸಿದರು. ಇನ್ನು ಸ್ಪಿನ್ನರ್‌ಗಳ ಪಟ್ಟಿಯಲ್ಲಿ ವೇಗವಾಗಿ ಈ ಸಾಧನೆ ಮಾಡಿದ 2ನೇ ಬೌಲರ್ ಎನಿಸಿದ್ದಾರೆ. ಮೊದಲನೇ ಸ್ಥಾನದಲ್ಲಿ ವೇಗಿ ಮೊಹಮ್ಮದ್ ಶಮಿ ಇದ್ದರೆ ಜಸ್ಪ್ರೀತ್ ಬೂಮ್ರಾ 2ನೇ ಸ್ಥಾನದಲ್ಲಿ, ಕುಲ್ದೀಪ್ ಯಾದವ್ 3 ಹಾಗೂ ಇರ್ಫಾನ್ ಪಠಾಣ್ 4ನೇ ಸ್ಥಾನದಲ್ಲಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಭಾರತ ದ ಸ್ಪಿನ್ ಬೌಲಿಂಗ್ ವಿರುದ್ಧ ವೆಸ್ಟ್ ಇಂಡೀಸ್ ದಾಂಡಿಗರು ಸಂಪೂರ್ಭವಾಗಿ ಸ್ಥಬ್ಧವಾಗಿದ್ದಾರೆ. ವಾಶಿಂಗ್ಟನ್ ಸುಂದರ್ ಹಾಗೂ ಯುಜುವೇಂದ್ರ ಚಾಹಲ್ ಜೋಡಿ ಎದುರಾಳಿಯ ವಿಕೆಟ್‌ಗಳ ಕೆಡವುತ್ತಾ ಸಾಗಿದ್ದಾರೆ.

ಭಾರತ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್, ಪ್ರಸಿದ್ಧ್ ಕೃಷ್ಣ
ಬೆಂಚ್: ರವಿ ಬಿಷ್ಣೋಯ್, ಅವೇಶ್ ಖಾನ್, ಶಾರುಖ್ ಖಾನ್, ದೀಪಕ್ ಚಾಹರ್, ಕುಲದೀಪ್ ಯಾದವ್

ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರ್ಯಾಂಡನ್ ಕಿಂಗ್, ಶಾಯ್ ಹೋಪ್ (ವಿಕೆಟ್ ಕೀಪರ್), ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ನಿಕೋಲಸ್ ಪೂರನ್, ಕೀರಾನ್ ಪೊಲಾರ್ಡ್ (ನಾಯಕ), ಜೇಸನ್ ಹೋಲ್ಡರ್, ಫ್ಯಾಬಿಯನ್ ಅಲೆನ್, ಅಲ್ಜಾರಿ ಜೋಸೆಫ್, ಅಕೇಲ್ ಹೋಸೇನ್, ಕೆಮರ್ ರೋಚ್
ಬೆಂಚ್: ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್, ಹೇಡನ್ ವಾಲ್ಷ್, ಎನ್ಕ್ರುಮಾ ಬೋನರ್

Story first published: Monday, February 7, 2022, 9:57 [IST]
Other articles published on Feb 7, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+