
ಟಿ20 ವಿಶ್ವಕಪ್‌ಗೂ ಮುನ್ನ ಟೀಮ್ ಇಂಡಿಯಾ ಎರಡನೇ ಅನಧಿಕೃತ ಅಭ್ಯಾಸ ಪಂದ್ಯಕ್ಕೆ ಸಜ್ಜಾಗುತ್ತಿದೆ. ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧ ಮೊದಲ ಅಭ್ಯಾಸ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನಿಡಿದ್ದ ಭಾರತ ತಂಡ ಈಗ ಎರಡನೇ ಪಂದ್ಯದಲ್ಲಿ ಕಣಕ್ಕಿಳಿಯಲು ಸಿದ್ಧವಾಗಿದೆ. ಈ ಮೂಲಕ ಚುಟುಕು ವಿಶ್ವಕಪ್‌ಗೆ ಸಂಪೂರ್ಣ ಸಜ್ಜಾಗುತ್ತಿದೆ ಭಾರತ ತಂಡ.
ಮೊದಲ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡಕ್ಕೆ ವೆಸ್ಟರ್ನ್ ಆಸ್ಟ್ರೇಲಿಯಾ ತಂಡ ಭರ್ಜರಿ ಪೈಪೋಟಿ ನೀಡಿತ್ತು. ಈ ಪಂದ್ಯದಲ್ಲಿ 13 ರನ್‌ಗಳ ಅಂತರದಿಂದ ಭಾರತ ಗೆಲುವು ಸಾಧಿಸಿತ್ತು. ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿ ಮಿಂಚಿದ್ದರು. ಹಾರ್ದಿಕ್ ಪಾಂಡ್ಯ ಹಾಗೂ ದೀಪಕ್ ಹೂಡಾ ಕೂಡ ಉತ್ತಮ ಕೊಡುಗೆ ನೀಡಿದ್ದರು.
ಪಂದ್ಯದ ದಿನಾಂಕ ಹಾಗೂ ಸಮಯ: ವೆಸ್ಟರ್ನ್ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳ ನಡುವಿನ ಎರಡನೇ ಅಭ್ಯಾಸ ಪಂದ್ಯ ಅಕ್ಟೋಬರ್ 13ರಂದು ನಡೆಯಲಿದ್ದು ಪರ್ತ್‌ನ ವಾಕಾ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಪರ್ತ್‌ನಲ್ಲಿ ನಡೆಯಲಿರುವ ಈ ಪಂದ್ಯ ಬ್ಯಾಟರ್‌ಗಳ ಪಾಲಿಗೆ ಸವಾಲಿನ ಪಂದ್ಯವಾಗಿರಲಿದೆ. ಅದರಲ್ಲಿ ಹೊಸ ಚೆಂಡಿನಲ್ಲಿ ರನ್‌ಗಳಿಸುವುದು ಬ್ಯಾಟರ್‌ಗಳ ಪಾಲಿಗೆ ಅತ್ಯಂತ ಕಠಿಣವಾಗಿರಲಿದೆ. ಟಾಸ್ ಗೆದ್ದು ಬ್ಯಾಟಿಂಗ್ ನಡೆಸುವುದು ಉತ್ತಮ ನಿರ್ಧಾರವಾಗಬಹುದು.
ಹವಾಮಾನ ವರದಿ: ಗುರುವಾರ ಪರ್ತ್‌ನಲ್ಲಿ 16 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನವಿರಲಿದ್ದು ಆಟಕ್ಕೆ ಅನುಕೂಲಕರ ವಾತಾವರಣವಿದೆ. ಸದ್ಯಕ್ಕೆ ಪರ್ತ್‌ನಲ್ಲಿ ಮಳೆಯಾಗುವ ಸಾಧ್ಯತೆಯಿಲ್ಲ ಎಂದ ಹವಾಮಾನ ವರದಿ ಮಾಹಿತಿ ನೀಡುತ್ತಿದೆ.
ಭಾರತ ಸ್ಕ್ವಾಡ್ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ ಮತ್ತು ಅರ್ಷದೀಪ್ ಸಿಂಗ್.
ವೆಸ್ಟರ್ನ್ ಆಸ್ಟ್ರೇಲಿಯಾ ಸ್ಕ್ವಾಡ್: ಡಿ ಆರ್ಸಿ ಶಾರ್ಟ್, ನಿಕ್ ಹಾಬ್ಸನ್, ಆರನ್ ಹಾರ್ಡಿ, ಕ್ಯಾಮೆರಾನ್ ಬ್ಯಾಂಕ್ರಾಫ್ಟ್ (ವಿಕೆಟ್ ಕೀಪರ್), ಆಷ್ಟನ್ ಟರ್ನರ್ (ನಾಯಕ), ಸ್ಯಾಮ್ ಫಾನ್ನಿಂಗ್, ಹ್ಯಾಮಿಶ್ ಮೆಕೆಂಜಿ, ಝೈ ರಿಚರ್ಡ್ಸನ್, ಆಂಡ್ರ್ಯೂ ಟೈ, ಜೇಸನ್ ಬೆಹ್ರೆನ್ಡಾರ್ಫ್, ಮ್ಯಾಥ್ಯೂ ಕೆಲ್ಲಿ.