ವಿಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯದಿಂದ ಕೆ.ಎಲ್ ರಾಹುಲ್ ಏಕೆ ಹೊರಗುಳಿದಿದ್ದಾರೆ?

ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯವನ್ನಾಡಲು ಟೀಂ ಇಂಡಿಯಾ ಸಜ್ಜಾಗಿದೆ. ಫೆಬ್ರವರಿ 6ರಂದು ಅಹಮದಾಬಾದ್‌ನಲ್ಲಿ ಕೆರಿಬಿಯನ್ನರು ಟೀಂ ಇಂಡಿಯಾಗೆ ಸವಾಲೆಸೆಯಲಿದ್ದಾರೆ. ಆದ್ರೆ ಅದಕ್ಕೂ ಮೊದಲು ಟೀಂ ಇಂಡಿಯಾ ಪ್ರಮುಖ ಆಟಗಾರರು ಕೋವಿಡ್-19 ಪಾಸಿಟಿವ್ ಆಗಿರುವುದು ತಂಡಕ್ಕೆ ಕೊಂಚ ಹಿನ್ನಡೆಯಾಗಿದೆ.
ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್ ಜೊತೆಗೆ ಇತರೆ ಸಹಾಯಕ ಸಿಬ್ಬಂದಿ ಸೋಂಕಿಗೆ ಒಳಗಾಗಿದ್ದಾರೆ. ಹೀಗಾಗಿ ಮೊದಲ ಏಕದಿನ ಪಂದ್ಯದಿಂದ ಈ ಆಟಗಾರರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಇದಲ್ಲದೆ ಈಗಾಗಲೇ ಮೊದಲ ಪಂದ್ಯದಿಂದ ಓಪನರ್ ಕೆ.ಎಲ್ ರಾಹುಲ್ ಹೊರಗುಳಿದಿದ್ರು. ಎರಡನೇ ಏಕದಿನ ಪಂದ್ಯದಲ್ಲಿ ರಾಹುಲ್ ಟೀಂ ಇಂಡಿಯಾವನ್ನ ಸೇರಿಕೊಳ್ಳಲಿದ್ದಾರೆ.
ಆದ್ರೆ ಕೆ.ಎಲ್ ರಾಹುಲ್ ಮೊದಲ ಪಂದ್ಯದಿಂದ ಏಕೆ ಹೊರಗುಳಿದಿದ್ರೂ ಎಂಬ ವಿಚಾರಕ್ಕೆ ಉತ್ತರ ಸಿಕ್ಕಿದೆ. ಕೆ.ಎಲ್ ರಾಹುಲ್ ಸಹೋದರಿ ಮದುವೆ ಹಿನ್ನಲೆಯಲ್ಲಿ ರಾಹುಲ್ ಮೊದಲ ಪಂದ್ಯವನ್ನು ಆಡುತ್ತಿಲ್ಲ. ಮೊದಲ ಏಕದಿನ ಪಂದ್ಯ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಕೆ.ಎಲ್ ರಾಹುಲ್ ಮೊದಲ ಪಂದ್ಯದಿಂದ ಮಿಸ್ ಆದ ಪರಿಣಾಮ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಉಪನಾಯಕತ್ವ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
"ನೀವು ಮುಂದಿನ ಸಾಲನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ರಿಷಬ್ ಉತ್ತಮ ನಾಯಕನಾಗುತ್ತಾನೆ ಎಂದು ನಾನು ಹೇಳುತ್ತಿಲ್ಲ. ಆದರೆ ನೀವು ಸಂಭಾವ್ಯ ಆಯ್ಕೆಗಳನ್ನು ನೋಡಬೇಕು ಮತ್ತು ಅವುಗಳನ್ನು ಸಿದ್ಧಪಡಿಸಬೇಕು. ಸದ್ಯಕ್ಕೆ, ಕೆಎಲ್ ಮತ್ತು ರಿಷಬ್ ಇಬ್ಬರೂ ಉತ್ತಮ ಆಯ್ಕೆಯಾಗಿದ್ದು, ಅವರು ತಂಡದಲ್ಲಿ ಖಚಿತವಾದ ಸ್ಥಾನವನ್ನು ಹೊಂದಿದ್ದಾರೆ. ಕೆ.ಎಲ್ ಕೂಡ ಹಿಡಿತ ಸಾಧಿಸುತ್ತಿರುವಾಗ ರಿಷಭ್ ಪ್ರಬುದ್ಧತೆಯನ್ನು ತೋರಿಸಿದ್ದಾರೆ" ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ಫೆಬ್ರವರಿ 6ರಿಂದ ಆರಂಭಗೊಳ್ಳಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾ 18 ಸದಸ್ಯರ ಹೆಸರು ಈ ಕೆಳಗಿನಂತಿದೆ.
ಟೀಂ ಇಂಡಿಯಾ ಏಕದಿನ ಫಾರ್ಮೆಟ್‌ನ ಸ್ಕ್ವಾಡ್
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಯುಜವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್ , ರವಿ ಬಿಷ್ಣೋಯಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್
ಭಾರತ-ವೆಸ್ಟ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ
ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿಯ ವೇಳಾಪಟ್ಟಿ:
1ನೇ ODI, ಫೆಬ್ರವರಿ 6, ಭಾನುವಾರ, ಅಹಮದಾಬಾದ್ (1PM)
2ನೇ ODI, ಫೆಬ್ರವರಿ 9, ಬುಧವಾರ, ಅಹಮದಾಬಾದ್ (1PM)
3ನೇ ODI, ಫೆಬ್ರವರಿ 11, ಶುಕ್ರವಾರ, ಅಹಮದಾಬಾದ್ (1PM)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications