India vs Zimbabwe T20: ಭಾರತದ ವಿರುದ್ಧ ಜಿಂಬಾಬ್ವೆ ಹೀನಾಯ ಸೋಲು
India vs Zimbabwe 1st T20: ಹರಾರೆಯಲ್ಲಿ ಗುರುವಾರ (ಜುಲೈ 23) ನಡೆದ ಮೂರು ಪಂದ್ಯಗಳ ಟಿ20 ಸರಣಿಯ ಚೊಚ್ಚಲ ಪಂದ್ಯದಲ್ಲಿ ಭಾರತ ತಂಡವು ಜಿಂಬಾಬ್ವೆ ವಿರುದ್ಧ 7 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿದೆ. 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ಈ ಜಯ ಸಾಧಿಸಿ ಶುಭಾರಂಭ ಮಾಡಿದೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಭಾರತೀಯ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಪರದಾಡಿದ ಜಿಂಬಾಬ್ವೆ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಕೇವಲ 125 ರನ್ ಗಳಿಸಲಷ್ಟೇ ಶಕ್ತವಾಯಿತು.

ತತ್ತರಿಸಿದ ಜಿಂಬಾಬ್ವೆ ಬ್ಯಾಟರ್ಸ್
ಜಿಂಬಾಬ್ವೆ ಪರ ಬ್ಯಾಟ್ ಬೀಸಿದ ವೆಸ್ಲಿ ಮಾಧವೆರೆ 39 ರನ್ (34) ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ರಿಯಾನ್ ಬುರಿ 26(35), ತಡಿವಾನಶೆ ಮರುಮಾನಿ ಅಜೇಯ 27 (20) ರನ್ ಗಳಿಸಿದರೆ, ಉಳಿದವರು ಎರಡಂಕಿ ದಾಟಲು ಪರದಾಡಿದರು. ಟೀಮ್ ಇಂಡಿಯಾ ಬೌಲರ್‌ಗಳ ದಾಳಿಗೆ ಜಿಂಬಾಬ್ವಾ ತತ್ತರಿಸಿದಂತೂ ನಿಜ.
ಟೀಮ್ ಇಂಡಿಯಾ ಪರ ಬೌಲಿಂಗ್ ದಾಳಿ ನಡೆಸಿದ ಮಯಾಂಕ್ ಯಾದವ್ 4 ಓವರ್‌ಗಳಲ್ಲಿ 18 ರನ್ ನೀಡಿ 2 ವಿಕೆಟ್ ಪಡೆದರೆ, ಪ್ರಿನ್ಸ್ ಯಾದವ್ ಕೂಡ 19 ರನ್ ನೀಡಿ 2 ವಿಕೆಟ್ ಕಿತ್ತರು. ಶಿವಂ ದುಬೆ ಹಾಗೂ ರವಿ ಬಿಷ್ಣೋಯಿ ತಲಾ 1 ವಿಕೆಟ್ ಪಡೆದು ಜಿಂಬಾಬ್ವೆಯನ್ನು 125 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶ್ವಸಿಯಾದರು.
ಮಿಂಚಿದ ವೈಭವ್ ಸೂರ್ಯವಂಶಿ
126 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ವೈಭವ್ ಸೂರ್ಯವಂಶಿ ಉತ್ತಮ ಆರಂಭ ನೀಡಿದರು. ಅವರು ಕೇವಲ 18 ಎಸೆತಗಳಲ್ಲಿ 4 ಬೌಂಡರಿ, 4 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 50 ರನ್ ಪೂರೈಸಿ 19ನೇ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಈ ಅರ್ಧಶತಕದೊಂದಿಗೆ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅರ್ಧಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಐತಿಹಾಸಿಕ ದಾಖಲೆಯನ್ನು ಮಾಡಿದ್ದಾರೆ.
ವೈಭವ್ ನೀಡಿದ ಸ್ಫೋಟಕ ಆರಂಭದ ನೆರವಿನಿಂದ ಟೀಮ್ ಇಂಡಿಯಾ 13.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 126 ರನ್ ಗಳಿಸಿ ಜಯದ ದರ ಸೇರಿತು. ಭಾರತದ ಪರ ಬ್ಯಾಟ್ ಬೀಸಿದ ವೈಭವ್ ಸೂರ್ಯವಂಶಿ 50 (19), ಇಶಾನ್ ಕಿಶನ್ 35 (24), ನಾಯಕ ಶ್ರೇಯಸ್ ಅಯ್ಯರ್ ಅಜೇಯ 28 (24) ರನ್ ಸಿಡಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications