
ಕೆಎಲ್ ರಾಹುಲ್ ಬ್ಯಾಟಿಂಗ್ ಮಾಡುವ ಅಗತ್ಯವಿದೆ
ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಶುಭಮನ್ ಗಿಲ್ ಮತ್ತು ಶಿಖರ್ ಧವನ್ ಕ್ರಮವಾಗಿ 82 ಮತ್ತು 81 ರನ್ ಗಳಿಸಿ ಪ್ರವಾಸಿ ತಂಡಕ್ಕೆ ಗೆಲುವಿನ ಗಡಿ ದಾಟಿಸಲು ನೆರವಾದರು. ಇದಕ್ಕೂ ಮೊದಲು ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ ಮತ್ತು ಅಕ್ಷರ್ ಪಟೇಲ್ ತಲಾ ಮೂರು ವಿಕೆಟ್‌ಗಳೊಂದಿಗೆ ಅತಿಥೇಯ ಜಿಂಬಾಬ್ವೆಯನ್ನು 41 ಓವರ್‌ಗಳಲ್ಲಿ 189 ರನ್‌ಗಳಿಗೆ ಆಲೌಟ್ ಮಾಡಿದರು.
ಇದೇ ವೇಳೆ ಸುದೀರ್ಘ ಗಾಯದ ನಂತರ ಹಿಂತಿರುಗುತ್ತಿರುವ ನಾಯಕ ಕೆಎಲ್ ರಾಹುಲ್ ಅವರಿಗೆ ಏಷ್ಯಾ ಕಪ್ ಹಾಗೂ ಟಿ20 ವಿಶ್ವಕಪ್‌ಗೂ ಮುನ್ನ ಹೆಚ್ಚು ಅಗತ್ಯವಿರುವ ಬ್ಯಾಟಿಂಗ್ ಸಮಯವನ್ನು ನೀಡಲು, ಟಾಸ್ ಗೆದ್ದರೆ ಮೊದಲು ಬ್ಯಾಟಿಂಗ್ ಮಾಡಲು ಟೀಮ್ ಇಂಡಿಯಾ ನಿರ್ಧರಿಸುತ್ತಾರೆಯೇ ಎಂದು ಕಾದು ನೋಡಬೇಕಿದೆ.

2ನೇ ಏಕದಿನ ಪಂದ್ಯದ ಸಮಯ
ಭಾರತ vs ಜಿಂಬಾಬ್ವೆ 2ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ vs ಜಿಂಬಾಬ್ವೆ, 2ನೇ ಏಕದಿನ ಪಂದ್ಯವು ಆಗಸ್ಟ್ 20ರ ಶನಿವಾರದಂದು ನಡೆಯಲಿದೆ.
ಭಾರತ vs ಜಿಂಬಾಬ್ವೆ 2ನೇ ಏಕಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಜಿಂಬಾಬ್ವೆ ನಡುವಿನ 2ನೇ ಏಕದಿನ ಪಂದ್ಯವು ಜಿಂಬಾಬ್ವೆಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿದೆ.
ಭಾರತ vs ಜಿಂಬಾಬ್ವೆ 2ನೇ ಏಕದಿನ ಪಂದ್ಯದ ಸಮಯವೇನು?
ಭಾರತ vs ಜಿಂಬಾಬ್ವೆ, 2ನೇ ಏಕದಿನ ಪಂದ್ಯವು ಭಾರತೀಯ ಕಾಲಮಾನ 12:45 PMಕ್ಕೆ ಪ್ರಾರಂಭವಾಗುತ್ತದೆ.

2ನೇ ಏಕದಿನ ಪಂದ್ಯ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ
ಯಾವ ಟಿವಿ ಚಾನೆಲ್‌ಗಳು ಭಾರತ vs ಜಿಂಬಾಬ್ವೆ 2ನೇ ಏಕದಿನ ಪಂದ್ಯವನ್ನು ಪ್ರಸಾರ ಮಾಡುತ್ತವೆ?
ಭಾರತ vs ಜಿಂಬಾಬ್ವೆ 2ನೇ ಏಕದಿನ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.
ಭಾರತ vs ಜಿಂಬಾಬ್ವೆ 2ನೇ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ಅನುಸರಿಸಬೇಕು?
ಭಾರತ vs ಜಿಂಬಾಬ್ವೆ 2ನೇ ಏಕದಿನ ಪಂದ್ಯವನ್ನು SonyLiv ಅಪ್ಲಿಕೇಶನ್‌ನಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ.

ಭಾರತ vs ಜಿಂಬಾಬ್ವೆ ಸಂಭಾವ್ಯ ತಂಡಗಳು
ನಾಳೆ(ಶನಿವಾರ, ಆಗಸ್ಟ್ 20) ನಡೆಯಲಿರುವ ಉಭಯ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಎರಡೂ ತಂಡಗಳ ಸಂಭಾವ್ಯ ಆಡುವ ಬಳಗ ಹೀಗಿದೆ.
ಭಾರತ: ಕೆಎಲ್ ರಾಹುಲ್(ನಾಯಕ), ಶಿಖರ್ ಧವನ್ (ಉಪನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ದೀಪಕ್ ಚಾಹರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್
ಬೆಂಚ್: ರಾಹುಲ್ ತ್ರಿಪಾಠಿ, ಶಾರ್ದೂಲ್ ಠಾಕೂರ್, ಅವೇಶ್ ಖಾನ್, ಶಬಾಜ್ ನದೀಮ್, ರುತುರಾಜ್ ಗಾಯಕ್ವಾಡ್
ಜಿಂಬಾಬ್ವೆ: ತಡಿವಾನಾಶೆ ಮರುಮನಿ, ಇನೋಸೆಂಟ್ ಕೈಯಾ, ಸೀನ್ ವಿಲಿಯಮ್ಸ್, ವೆಸ್ಲಿ ಮಾಧೆವೆರೆ, ಸಿಕಂದರ್ ರಾಜಾ, ರೆಗಿಸ್ ಚಕಬ್ವಾ(ನಾಯಕ ಮತ್ತು ವಿಕೆಟ್ ಕೀಪರ್), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯುಚಿ, ರಿಚರ್ಡ್ ನ್ಗರವ
ಬೆಂಚ್: ತಕುಡ್ಜ್ವಾನಾಶೆ ಕೈಟಾನೊ, ಮಿಲ್ಟನ್ ಶುಂಬಾ, ಡೊನಾಲ್ಡ್ ತಿರಿಪಾನೊ, ಕ್ಲೈವ್ ಮದಂಡೆ, ಜಾನ್ ಮಸಾರಾ, ಟೋನಿ ಮುನ್ಯೊಂಗಾ, ತನಕಾ ಚಿವಂಗಾ


Click it and Unblock the Notifications
