ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇದು ಅರ್ಥವೇ ಆಗುತ್ತಿಲ್ಲ: ಮಿಂಚಿದ ಆಟಗಾರನಿಗೆ ಅವಕಾಶ ನೀಡದ್ದಕ್ಕೆ ಸಬಾ ಕರೀಮ್ ಕಿಡಿ

India vs Zimbabwe:Deepak Chahars exclusion Difficult to understand Said Saba Karim

ಭಾರತ ಹಾಗೂ ಜಿಂಬಾಬ್ವೆ ವಿರುದ್ಧದ ಎರಡನೇ ಏಕದಿನ ಪಂದ್ಯ ಹರಾರೆಯಲ್ಲಿ ಮುಕ್ತಾಯವಾಗಿದ್ದು ಈ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ. ಎರಡನೇ ಪಂದ್ಯದಲ್ಲಿಯೂ ಭಾರತ ತಂಡದ ಬೌಲಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡುವ ಮೂಲಕ ಆತಿಥೇಯ ಜಿಂಬಾಬ್ವೆ ಸುಲಭ ಸವಾಲು ನೀಡಲು ಕಾರಣವಾದರು. ಆದರೆ ಈ ಪಂದ್ಯದಲ್ಲಿ ಮಾಡಿಕೊಂಡ ಒಂದು ಬದಲಾವಣೆ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚರಿಯುಂಟು ಮಾಡಿದೆ.

ಜಿಂಬಾಬ್ವೆ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬೌಲಿಂಗ್ ದಾಳಿಯಲ್ಲಿ ಭಾರತದ ವೇಗಿ ದೀಪಕ್ ಚಾಹರ್ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದರು. ಗಾಯದಿಂದ ಹೊರಗುಳಿದಿದ್ದ ದೀಪಕ್ ಚಾಹರ್ ಸುದೀರ್ಘ ಕಾಲದ ಬಳಿಕ ಭಾರತ ತಂಡದಲ್ಲಿ ಆಡುವ ಅವಕಾಶಗಿಟ್ಟಿಸಿಕೊಂಡು ಮತ್ತೆ ಸಾಮರ್ಥ್ಯವನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಎರಡನೇ ಪಂದ್ಯದಲ್ಲಿ ದೀಪಕ್ ಚಾಹರ್ ಅವರನ್ನು ಆಡುವ ಬಳಗದಿಂದಲೇ ಹೊರಗಿಟ್ಟಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಈ ಬದಲಾವಣೆ ಬಗ್ಗೆ ಮಾಜಿ ಕ್ರಿಕೆಟಿಗ ಸಬಾ ಕರೀಮ್ ಮಾತನಾಡಿದ್ದು ಈ ಬದಲಾವಣೆಗೆ ಕಾರಣ ನನಗೆ ಅರ್ಥವೇ ಆಗುತ್ತಿಲ್ಲ ಎಂದಿದ್ದಾರೆ.

Maharaja Trophy: ಪ್ಲೇಆಫ್ ಆರಂಭಕ್ಕೆ 6 ಪಂದ್ಯಗಳಷ್ಟೇ ಬಾಕಿ; ಅಂಕಪಟ್ಟಿಯಲ್ಲಿ ಬೆಂಗಳೂರು ಟಾಪ್!Maharaja Trophy: ಪ್ಲೇಆಫ್ ಆರಂಭಕ್ಕೆ 6 ಪಂದ್ಯಗಳಷ್ಟೇ ಬಾಕಿ; ಅಂಕಪಟ್ಟಿಯಲ್ಲಿ ಬೆಂಗಳೂರು ಟಾಪ್!

ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ

ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ

ಸ್ಪೋನಿ ಸ್ಪೋರ್ಟ್ಸ್ ಜೊತೆಗೆ ಮಾತನಾಡಿದ ಮಾಜಿ ಕ್ರಿಕೆಟಿಗ ಸಬಾ ಕರೀಮ್ ಈ ನಿರ್ಧಾರದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. "ಈ ನಿರ್ಧಾರವನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆಟಗಾರನ ಕಾರ್ಯದ ಒತ್ತಡವನ್ನು ಕಡಿಮೆ ಮಾಡುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ದೈಹಿಕವಾಗಿ ಹೆಚ್ಚು ಒತ್ತಡ ಬೀಳದಂತೆ ಮಾಡುವ ದೃಷ್ಟಿಯಿಮದ ಈ ನಿರ್ಧಾರವನ್ನು ಮಾಡಿದ್ದರೆ ಒಪ್ಪಿಕೊಳ್ಳಬಹುದು. ಯಾಕೆಂದರೆ ವೇಗದ ಬೌಲರ್‌ಗೆ ಗಾಯದಿಂದ ಚೇತರಿಸಿಕೊಂಡು ಪಂದ್ಯಕ್ಕೆ ಮರಳುವುದು ಸುಲಭವಿಲ್ಲ" ಎಂದಿದ್ದಾರೆ.

ಮಿಂಚಿದ ಶಾರ್ದೂಲ್ ಠಾಕೂರ್

ಮಿಂಚಿದ ಶಾರ್ದೂಲ್ ಠಾಕೂರ್

ಇನ್ನು ದೀಪಕ್ ಚಾಹರ್ ಬದಲಿಗೆ ಇಂದಿನ ಪಮದ್ಯದಲ್ಲಿ ಶಾರ್ದೂಲ್ ಠಾಕೂರ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದರು. ಈ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಕೂಡ ಬೌಲಿಂಗ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಮಿಂಚಿದ್ದಾರೆ. 7 ಓವರ್‌ಗಳ ಬೌಲಿಂಗ್ ದಾಳಿ ನಡೆಸಿದ ಶಾರ್ದೂಲ್ ಠಾಕೂರ್ 38 ರನ್‌ ನೀಡಿ 3 ವಿಕೆಟ್ ಪಡೆದು ಮಿಂಚಿದ್ದಾರೆ.

ಸರಣಿ ವಶಕ್ಕೆ ಪಡೆದ ಭಾರತ

ಸರಣಿ ವಶಕ್ಕೆ ಪಡೆದ ಭಾರತ

ಜಿಂಬಾಬ್ವೆ ವಿರುದ್ಧದ ಎರಡನೇ ಪಂದ್ಯದಲ್ಲಿಯೂ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದ್ದು ಭರ್ಜರಿ ಗೆಲುವು ಸಾಧಿಸಿದೆ. ಜಿಂಬಾಬ್ವೆ ತಂಡ ನೀಡಿದ 162 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಐದು ವಿಕೆಟ್ ಕಳೆದುಕೊಂಡು ಈ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದೆ. ನಾಯಕ ಕೆಎಲ್ ರಾಹುಲ್ ಕೇವಲ ಒಂದು ರನ್‌ಗಳಿಗೆ ಔಟಾದರೂ ಶಿಖರ್ ಧವನ್, ಶುಬ್ಮನ್ ಗಿಲ್, ಸಂಜು ಸ್ಯಾಮ್ಸನ್ ಅದ್ಭುತ ಪ್ರದರ್ಶನದಿಂದಾಗಿ ಭಾರತ ವಿಕೆಟ್‌ಗಳ ಅಂತರದಿಂದ ಸುಲಭವಾಗಿ ಪಂದ್ಯವನ್ನು ಗೆದ್ದುಕೊಂಡಿದೆ. ಇದರ ಪರಿಣಾಮವಾಗಿ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ.

ಆಡುವ ಬಳಗ ಹೀಗಿದೆ

ಆಡುವ ಬಳಗ ಹೀಗಿದೆ

ಜಿಂಬಾಬ್ವೆ: ಇನೋಸೆಂಟ್ ಕೈಯಾ, ತಕುದ್ಜ್ವಾನಾಶೆ ಕೈಟಾನೊ, ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ರೆಗಿಸ್ ಚಕಬ್ವಾ (ನಾಯಕ & ವಿಕೆಟ್ ಕೀಪರ್), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯಾಯುಚಿ, ತನಕಾ ಚಿವಂಗಾ
ಬೆಂಚ್: ಡೊನಾಲ್ಡ್ ತಿರಿಪಾನೊ, ಮಿಲ್ಟನ್ ಶುಂಬಾ, ಟೋನಿ ಮುನ್ಯೊಂಗಾ, ಕ್ಲೈವ್ ಮದಂಡೆ, ಜಾನ್ ಮಸಾರ, ತಡಿವಾನಾಶೆ ಮರುಮನಿ, ರಿಚರ್ಡ್ ನಾಗರವ

ಭಾರತ ತಂಡ: ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್ (ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್‌ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್
ಬೆಂಚ್: ಶಹಬಾಜ್ ಅಹಮದ್, ಆವೇಶ್ ಖಾನ್, ಋತುರಾಜ್ ಗಾಯಕ್ವಾಡ್, ರಾಹುಲ್ ತ್ರಿಪಾಠಿ, ದೀಪಕ್ ಚಹಾರ್

Story first published: Saturday, August 20, 2022, 18:45 [IST]
Other articles published on Aug 20, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X