For Quick Alerts
ALLOW NOTIFICATIONS  
For Daily Alerts
 

Ind vs Zim: ಭಾರತ-ಜಿಂಬಾಬ್ವೆ ಮೊದಲ ಟಿ20 ಪಂದ್ಯದ ಟಾಸ್‌ ವರದಿ, ಪ್ಲೇಯಿಂಗ್‌-11

ಜುಲೈ 6 ಶನಿವಾರ, ಭಾರತ ಮತ್ತು ಜಿಂಬಾಬ್ವೆ ನಡುವೆ ಟಿ20 ಸರಣಿಯ ಮೊದಲ ಪಂದ್ಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಆರಂಭವಾಗಿದೆ.

ಈ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌ ಇಂಡಿಯಾ ನಾಯಕ ಶುಭಮನ್‌ ಗಿಲ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಿಂಕದರ್‌ ರಜಾ ಮುನ್ನೆಡೆಸುತ್ತಿರುವ ಜಿಂಬಾಬ್ವೆ ಮೊದಲು ಬ್ಯಾಟಿಂಗ್‌ ಮಾಡಲಿದೆ.

ಟಿ20 ವಿಶ್ವಕಪ್ ಗೆಲುವಿನ ಬಳಿಕ ಭಾರತ ತಂಡದ ಹಿರಿಯ ಆಟಗಾರರಿಗೆ ಈ ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬಿಸಿಸಿಐ ಈ ಪ್ರವಾಸಕ್ಕೆ ಯುವ ತಂಡವನ್ನು ಕಳುಹಿಸಿದೆ. ತಂಡದ ನಾಯಕತ್ವವನ್ನು ಶುಭಮನ್ ಗಿಲ್‌ ಅವರಿಗೆ ವಹಿಸಲಾಗಿದೆ.

Spain squad are an example for the country says De la Fuente

ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಮತ್ತು ಧ್ರುವ್ ಜುರೆಲ್ ಅವರು ಟೀಮ್‌ ಇಂಡಿಯಾ ತಮ್ಮ ಚೊಚ್ಚಲ ಟಿ20 ಪಂದ್ಯ ಆಡುತ್ತಿದ್ದಾರೆ. ಈ ಯುವ ಆಟಗಾರು ಐಪಿಎಲ್‌ 2024ರಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಈ ಆಧಾರದ ಮೇಲೆ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ ಮಾಡಲಾಗಿದೆ.

ಉಭಯ ತಂಡಗಳ ನಡುವಿನ ಅಂಕಿ-ಅಂಶಗಳನ್ನು ನೋಡುವುದಾದರೇ, ಭಾರತ ಮತ್ತು ಜಿಂಬಾಬ್ವೆ ನಡುವೆ ಇದುವರೆಗೆ 6 ಟಿ20 ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ ಭಾರತ 4 ಬಾರಿ ಗೆದ್ದಿದ್ದು, ಜಿಂಬಾಬ್ವೆ 2ರಲ್ಲಿ ಗೆಲುವಿನ ನಗೆ ಬೀರಿದೆ.

ಈ ಋತುವಿನ ಜಿಂಬಾಬ್ವೆ ಪ್ರವಾಸದಲ್ಲಿ ಭಾರತದ ಯುವ ತಂಡ ಇಂದು ಹೇಗೆ ಪ್ರದರ್ಶನ ನೀಡಲಿದೆ? ಎಂಬುದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಉಭಯ ತಂಡಗಳ ನಡುವೆ ಇಂದು ತೀವ್ರ ಪೈಪೋಟಿ ಏರ್ಪಡುವ ನಿರೀಕ್ಷೆ ಇದೆ.

ಭಾರತ vs ಜಿಂಬಾಬ್ವೆ ಪ್ಲೇಯಿಂಗ್‌-11

ಭಾರತ: ಶುಭಮನ್ ಗಿಲ್(ನಾಯಕ), ಅಭಿಷೇಕ್ ಶರ್ಮಾ, ಋತುರಾಜ್ ಗಾಯಕ್ವಾಡ್, ರಿಯಾನ್ ಪರಾಗ್, ರಿಂಕು ಸಿಂಗ್, ಧ್ರುವ್ ಜುರೆಲ್(ವಿಕೆಟ್‌ ಕೀಪರ್‌), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್, ಖಲೀಲ್ ಅಹ್ಮದ್.

ಜಿಂಬಾಬ್ವೆ: ತಡಿವಾನಾಶೆ ಮರುಮಣಿ, ಇನೋಸೆಂಟ್ ಕೈಯಾ, ಬ್ರಿಯಾನ್ ಬೆನೆಟ್, ಸಿಕಂದರ್ ರಜಾ(ನಾಯಕ), ಡಿಯೋನ್ ಮೈಯರ್ಸ್, ಜೊನಾಥನ್ ಕ್ಯಾಂಪ್‌ಬೆಲ್, ಕ್ಲೈವ್ ಮದಂಡೆ(ವಿಕೆಟ್‌ಕೀಪರ್‌), ವೆಸ್ಲಿ ಮಾಧೆವೆರೆ, ಲ್ಯೂಕ್ ಜೊಂಗ್ವೆ, ಬ್ಲೆಸ್ಸಿಂಗ್ ಮುಜರಾಬಾನಿ, ಟೆಂಡೈ ಚಟಾರಾ

Story first published: Saturday, July 6, 2024, 16:16 [IST]
Other articles published on Jul 6, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+