ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs ZIM: ಮೊದಲ ಏಕದಿನ ಪಂದ್ಯಕ್ಕೆ ಭಾರತದ ಆಡುವ 11ರ ಬಳಗ; ಪ್ರಸಿದ್ಧ್‌ಗೆ ಸ್ಥಾನ?

India vs Zimbabwe: Indias Predicted Playing XI For 1st ODI; Prasidh Krishna Will Get Place?

ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಗುರುವಾರ (ಆಗಸ್ಟ್) ನಡೆಯಲಿರುವ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಜಿಂಬಾಬ್ವೆಯನ್ನು ಎದುರಿಸಲು ಸಜ್ಜಾಗಿದೆ.

Independence Day ಪ್ರಯುಕ್ತ ವಿದೇಶಿ ಕ್ರಿಕೆಟಿಗರ ವಿಶೇಷ ಉಡುಗೊರೆ | *Cricket | Oneindia Kannada

ಈ ಹಿಂದೆ ಶಿಖರ್ ಧವನ್‌ಗೆ ನಾಯಕತ್ವ ನೀಡಲಾಗಿತ್ತು, ಆದರೆ ಕನ್ನಡಿಗ ಕೆಎಲ್ ರಾಹುಲ್ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದರಿಂದ ಅವರಿಗೆ ನಾಯಕತ್ವ ನೀಡಿ, ಶಿಖರ್ ಧವನ್ ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ.

IND vs PAK: ಪಾಕಿಸ್ತಾನದಲ್ಲಿ 2023ರ ಏಷ್ಯಾಕಪ್, 2025ರ ಚಾಂಪಿಯನ್ಸ್ ಟ್ರೋಫಿ; ಭಾರತದ ನಿಲುವೇನು?IND vs PAK: ಪಾಕಿಸ್ತಾನದಲ್ಲಿ 2023ರ ಏಷ್ಯಾಕಪ್, 2025ರ ಚಾಂಪಿಯನ್ಸ್ ಟ್ರೋಫಿ; ಭಾರತದ ನಿಲುವೇನು?

ಕೆಎಲ್ ರಾಹುಲ್ ನಾಯಕತ್ವದ ಭಾರತ ತಂಡ ಮುಂಬರುವ ಏಷ್ಯಾ ಕಪ್‌ಗೆ ಸಿದ್ಧವಾಗಲು ಏಕದಿನ ಸರಣಿಯಲ್ಲಿ ಮುನ್ನಡೆ ಸಾಧಿಸಲು ಎದುರು ನೋಡುತ್ತಿದೆ. ಜಿಂಬಾಬ್ವೆ ಸರಣಿಯ ಮೂಲಕ ಕೆಎಲ್ ರಾಹುಲ್ ತಂಡಕ್ಕೆ ಮರಳಿದ್ದು, ಉತ್ತಮ ಪ್ರದರ್ಶನ ನೀಡುವ ತವಕದಲ್ಲಿದ್ದಾರೆ. ಈ ಹಿಂದೆ ಕೆಎಲ್ ರಾಹುಲ್‌ರನ್ನು ಗಾಯದ ಕಾರಣ ಮತ್ತು ಕೋವಿಡ್-19 ದೃಢಪಟ್ಟ ಕಾರಣದಿಂದ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ಸರಣಿಗಳಿಗೆ ವಿಶ್ರಾಂತಿ ನೀಡಲಾಗಿತ್ತು.

ಟೀಂ ಇಂಡಿಯಾ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಮತ್ತು ಇನ್ನೊಬ್ಬ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರಿಗೆ ತಂಡದ ಆಡುವ 11ರ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆಯೇ ಎಂಬುದು ಕುತೂಹಲಕಾರಿಯಾಗಿದೆ.

ಮೊದಲ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಆಡುವ 11ರ ಬಳಗ

ಮೊದಲ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಆಡುವ 11ರ ಬಳಗ

ಕೆಎಲ್ ರಾಹುಲ್: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಮತ್ತೆ ತಂಡದಲ್ಲಿ ಕಾಣಿಸಿಕೊಂಡಿದ್ದು, ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ಬಹಳ ಸಮಯದಿಂದ ಕಾಯುತ್ತಿದ್ದರು. ಕೆಎಲ್ ರಾಹುಲ್ ಅವರು ಪ್ಲೇಯಿಂಗ್ ಇಲೆವೆನ್‌ನಲ್ಲಿ ಖಂಡಿತವಾಗಿಯೂ ಸ್ಥಾನವನ್ನು ಪಡೆಯುತ್ತಾರೆ. ಏಕೆಂದರೆ ನಾಯಕನಾಗಿರುವ ಅವರು ಆರಂಭಿಕ ಓವರ್‌ಗಳಲ್ಲಿ ತಂಡಕ್ಕೆ ಬಲವಾದ ಜೊತೆಯಾಟವನ್ನು ಒದಗಿಸುತ್ತಾರೆ.

ಶಿಖರ್ ಧವನ್: ಕೆಎಲ್ ರಾಹುಲ್ ಹೊರತಾಗಿ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಜೋಡಿಯಾಗಿ ಉಪನಾಯಕ ಶಿಖರ್ ಧವನ್ ಆಡಲಿದ್ದಾರೆ. ಎಡಗೈ ಬ್ಯಾಟರ್ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 99 ಎಸೆತಗಳಲ್ಲಿ 97 ರನ್‌ಗಳ ಗರಿಷ್ಠ ಸ್ಕೋರ್‌ನೊಂದಿಗೆ 168 ರನ್ ಗಳಿಸಿದ್ದರು.

ಶುಭ್‌ಮನ್ ಗಿಲ್: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಶುಭ್‌ಮನ್ ಗಿಲ್ 205 ರನ್ ಗಳಿಸಿದರು ಮತ್ತು ಮೂರನೇ ಏಕದಿನ ಪಂದ್ಯದಲ್ಲಿ 98 ರನ್‌ಗಳನ್ನು ಗಳಿಸಿದ ಕಾರಣ, ಟೀಮ್ ಇಂಡಿಯಾ ಗಿಲ್ ಅವರನ್ನು ಆಡುವ 11ರ ಬಳಗದಲ್ಲಿ ಸೇರಿಸಿಕೊಳ್ಳಬಹುದು.

ಮೊದಲ ಏಕದಿನ ಪಂದ್ಯದಲ್ಲಿ ಸ್ಥಾನ ಪಡೆಯುವ ದೀಪಕ್ ಹೂಡಾ

ಮೊದಲ ಏಕದಿನ ಪಂದ್ಯದಲ್ಲಿ ಸ್ಥಾನ ಪಡೆಯುವ ದೀಪಕ್ ಹೂಡಾ

ದೀಪಕ್ ಹೂಡಾ: ಬ್ಯಾಟಿಂಗ್ ಆಲ್‌ರೌಂಡರ್ ದೀಪಕ್ ಹೂಡಾ ಖಂಡಿತವಾಗಿಯೂ ಮೊದಲ ಏಕದಿನ ಪಂದ್ಯದಲ್ಲಿ ಸ್ಥಾನವನ್ನು ಕಂಡುಕೊಳ್ಳುತ್ತಾರೆ. ವೈವಿಧ್ಯಮಯ ಬ್ಯಾಟಿಂಗ್ ಮೂಲಕ ಮಧ್ಯಮ ಕ್ರಮಾಂಕದಲ್ಲಿ ರನ್ ಶಿಖರ್ ನಿರ್ಮಿಸುವ ಮತ್ತು ತಂಡಕ್ಕೆ ಆಸರೆಯಾಗಲಿದ್ದಾರೆ.

ಸಂಜು ಸ್ಯಾಮ್ಸನ್: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಸಂಜು ಸ್ಯಾಮ್ಸನ್ ಕಳಪೆ ಪ್ರದರ್ಶನ ನೀಡಿದ್ದರೂ, ವೆಸ್ಟ್ ಇಂಡೀಸ್ ವಿರುದ್ಧ ಅರ್ಧ ಶತಕವನ್ನು ಸಹ ಬಾರಿಸಿದರು. ಟೀಂ ಇಂಡಿಯಾ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುತ್ತದೆಯೇ ಅಥವಾ ಅವರ ಸ್ಥಾನವನ್ನು ಇಶಾನ್ ಕಿಶನ್‌ಗೆ ನೀಡುತ್ತಾರೆಯೇ ಎಂಬುದು ಕುತೂಹಲಕಾರಿಯಾಗಿದೆ.

ಶಾರ್ದೂಲ್ ಠಾಕೂರ್ ಆಲ್‌ರೌಂಡ್ ಪ್ರದರ್ಶನ ನೀಡುವ ಸಾಧ್ಯತೆ

ಶಾರ್ದೂಲ್ ಠಾಕೂರ್ ಆಲ್‌ರೌಂಡ್ ಪ್ರದರ್ಶನ ನೀಡುವ ಸಾಧ್ಯತೆ

ಶಾರ್ದೂಲ್ ಠಾಕೂರ್: ಬೌಲಿಂಗ್‌ನಲ್ಲಿ ಶಾರ್ದೂಲ್ ಠಾಕೂರ್ ಕೂಡ ಪ್ರಮುಖ ಆಟಗಾರರಲ್ಲಿ ಒಬ್ಬರು. ಅವರು ಆಡುವ 11ರ ಬಳಗದಲ್ಲಿ ಸ್ಥಾನ ಪಡೆಯಬಹುದು, ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಆಲ್‌ರೌಂಡ್ ಪ್ರದರ್ಶನ ನೀಡುವ ಸಾಧ್ಯತೆ ಇದೆ. ಶಾರ್ದೂಲ್ ಠಾಕೂರ್ ವೆಸ್ಟ್ ಇಂಡೀಸ್ ವಿರುದ್ಧ ಏಳು ವಿಕೆಟ್‌ಗಳನ್ನು ಉರುಳಿಸಿದರು ಮತ್ತು ಉತ್ತಮ ಎಕಾನಮಿಯನ್ನು ಹೊಂದಿದ್ದರು.

ಅಕ್ಷರ್ ಪಟೇಲ್: ಗುಜರಾತ್‌ನ ಅಕ್ಷರ್ ಪಟೇಲ್ ಅವರು ಉತ್ತಮ ಸ್ಪಿನ್ ದಾಳಿ ಹೊಂದಿರುವುದರಿಂದ ಟೀಮ್ ಇಂಡಿಯಾಕ್ಕೆ ಮತ್ತೊಂದು ಆಲ್‌ರೌಂಡ್ ಆಯ್ಕೆಯನ್ನು ನೀಡಬಹುದು. ಅಕ್ಷರ್ ಪಟೇಲ್ ಅವರು ವೆಸ್ಟ್ ಇಂಡೀಸ್ ವಿರುದ್ಧ ಅಮೋಘ ಆಟವಾಡಿದ್ದರು. ನಿರ್ಣಾಯಕ ಪಂದ್ಯದಲ್ಲಿ ಅಕ್ಷರ್ 35 ಎಸೆತಗಳಲ್ಲಿ 64 ರನ್ ಗಳಿಸಿದರು.

ದೀಪಕ್ ಚಹಾರ್: ಇನ್ನು ಕೆಎಲ್ ರಾಹುಲ್ ಜೊತೆಗೆ ಜಿಂಬಾಬ್ವೆ ಸರಣಿಗೆ ಗಾಯದಿಂದ ಚೇತರಿಸಿಕೊಂಡಿರುವ ವೇಗಿ ದೀಪಕ್ ಚಹಾರ್ ಅವರು ತಂಡಕ್ಕೆ ಪುನರಾಗಮನ ಮಾಡಲಿದ್ದಾರೆ. ಅವರು ತಮ್ಮ ಅದ್ಭುತ ವೇಗದ ಬೌಲಿಂಗ್ ಮತ್ತು ಬ್ಯಾಟಿಂಗ್ ಮೂಲಕ ಮೈದಾನದಲ್ಲಿ ಹೇಗೆ ಪುನರಾಗಮನ ಮಾಡುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ಸರಾಸರಿ ಪ್ರದರ್ಶನ ನೀಡಿದ್ದ ಪ್ರಸಿದ್ಧ್ ಕೃಷ್ಣ

ಸರಾಸರಿ ಪ್ರದರ್ಶನ ನೀಡಿದ್ದ ಪ್ರಸಿದ್ಧ್ ಕೃಷ್ಣ

ಕುಲದೀಪ್ ಯಾದವ್: ಸ್ಪಿನ್ನರ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಫೆಬ್ರವರಿ 2022ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಡಿದ್ದರು. ಅಲ್ಲಿ ಅವರು ಎಂಟು ಓವರ್‌ಗಳಲ್ಲಿ ಎರಡು ವಿಕೆಟ್‌ಗಳನ್ನು ಪಡೆದರು. ಅಕ್ಷರ್ ಪಟೇಲ್ ಜೊತೆಗೆ ಸ್ಪಿನ್‌ಗೆ ಉತ್ತಮ ಆಯ್ಕೆಯಾಗಬಹುದು.

ಮೊಹಮ್ಮದ್ ಸಿರಾಜ್: ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಸರಣಿಯಲ್ಲಿ ಬಲಗೈ ವೇಗಿ ನಾಲ್ಕು ವಿಕೆಟ್ ಕಬಳಿಸಿದ್ದಾರೆ. ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ, ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾದ ವೇಗದ ದಾಳಿಯನ್ನು ಮುನ್ನಡೆಸಬಹುದು.

ಪ್ರಸಿದ್ಧ್ ಕೃಷ್ಣ: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಯುವ ವೇಗಿ ಸರಾಸರಿ ಪ್ರದರ್ಶನ ನೀಡಿದ್ದಾರೆ. ವೆಸ್ಟ್ ಇಂಡೀಸ್‌ನಲ್ಲಿ ಅವರು ಎರಡು ಪಂದ್ಯಗಳನ್ನು ಆಡಿದರು ಮತ್ತು ಕೇವಲ ಒಂದು ವಿಕೆಟ್ ಪಡೆದರು. ಬಲವಾದ ವೇಗದ ಆಯ್ಕೆಯನ್ನು ಇರಿಸಿಕೊಳ್ಳಲು ಟೀಮ್ ಇಂಡಿಯಾ ಪ್ರಸಿದ್ಧ್ ಬದಲು ಅವೇಶ್ ಖಾನ್ ಅವರನ್ನು ಸೇರಿಸಿಕೊಳ್ಳಬಹುದು.

Story first published: Wednesday, August 17, 2022, 16:49 [IST]
Other articles published on Aug 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X