For Quick Alerts
ALLOW NOTIFICATIONS  
For Daily Alerts
 

ಆ ಇಬ್ಬರಿಗೆ ಅವಕಾಶ ಸಿಗದಿದ್ದರೆ ಅನ್ಯಾಯ ಮಾಡಿದಂತೆ: ರಾಬಿನ್ ಉತ್ತಪ್ಪ ಹೇಳಿಕೆ

India vs Zimbabwe: Robin Uthappa said It will be unfair if Gaikwad, Tripathi don’t get chance to play

ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿಯೂ ಭಾರತ ತಂಡ ಭರ್ಜರಿ ಜಯ ಗಳಿಸಿದ್ದು ಈ ಮೂಲಕ ಏಕದಿನ ಸರಣಿಯನ್ನು ವಶಕ್ಕೆ ಪಡೆದಿದೆ. ಎರಡನೇ ಪಂದ್ಯದ ಗೆಲುವಿನ ಬಳಿಕ ಹಿರಿಯ ಕ್ರಿಕೆಟಿಗ ರಾಬಿನ್ ಉತ್ತಪ್ಪ ಭಾರತದ ಬೌಲಿಂಗ್ ವಿಭಾಗದ ಪ್ರದರ್ಶನದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಈ ಸಂದರ್ಭದಲ್ಲಿ ಅಂತಿಮ ಪಂದ್ಯದಲ್ಲಿ ಯಾವೆಲ್ಲಾ ಆಟಗಾರರಿಗೆ ಅವಕಾಶ ನಿಡಬೇಕು ಎಂಬ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

"ಖಂಡಿತವಾಗಿಯೂ ಚಾಹರ್ ಮೂರನೇ ಪಂದ್ಯದಲ್ಲಿ ಮತ್ತೆ ಆಡುವ ಅವಕಾಶವನ್ನು ಪಡೆಯುವ ನಿರೀಕ್ಷೆಯಿದೆ. ಆವೇಶ್ ಖಾನ್‌ಗೆ ಅವಕಾಶ ದೊರೆಯಬಹುದು ಹಾಗೂ ಪ್ರಸಿದ್ಧ್‌ಗೆ ವಿಶ್ರಾಂತಿ ನೀಡಬಹುದು. ಸಿರಾಜ್‌ಗೆ ಕೂಡ ವಿಶ್ರಾಂತಿ ನೀಡಿ ಶಾರ್ದೂಲ್‌ಗೆ ಅವಕಾಶ ನೀಡಬಹುದು. ವೇಗಿಗಳಲ್ಲಿ ಬದಲಾಯಿಸಿಕೊಳ್ಳಬೇಕು ಎಂದು ಅವರು ನಿರ್ಧರಿಸಿದ್ದು ಎಲ್ಲರಿಗೂ ಇದರಿಂದಾಗಿ ತಾಜಾತನದಿಂದ ಇರಲು ಸಾಧ್ಯವಾಗಲಿದೆ" ಎಂದಿದ್ದಾರೆ ರಾಬಿನ್ ಉತ್ತಪ್ಪ.

ಆ ಇಬ್ಬರಿಗೆ ಅವಕಾಶ ದೊರೆಯಲೇಬೇಕು: ಮುಂದುವರಿದು ಮಾತನಾಡಿದ ರಾಬಿನ್ ಉತ್ತಪ್ಪ ಈ ಸರಣಿಯ ಅಂತಿಮ ಪಂದ್ಯದಲ್ಲಿ ರಾಹುಲ್ ತ್ರಿಪಾಠಿ ಹಾಗೂ ಋತುರಾಜ್ ಗಾಯಕ್ವಾಡ್‌ಗೆ ಅವಕಾಶ ದೊರೆಯಲೇಬೇಕು ಎಂದಿದ್ದಾರೆ. ಈ ಸರಣಿಯಲ್ಲಿ ಅವರಿಗೆ ಅವಕಾಶ ದೊರೆಯದಿದ್ದರೆ ಅದು ಅನ್ಯಾಯ ಮಾಡಿದಂತೆ ಎಂದಿದ್ದಾರೆ.

ಜಿಂಬಾಬ್ವೆ ವಿರುದ್ಧದ ಎರಡನೇ ಪಂದ್ಯದಲ್ಲಿಯೂ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದ್ದು ಭರ್ಜರಿ ಗೆಲುವು ಸಾಧಿಸಿದೆ. ಜಿಂಬಾಬ್ವೆ ತಂಡ ನೀಡಿದ 162 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಐದು ವಿಕೆಟ್ ಕಳೆದುಕೊಂಡು ಈ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದೆ. ನಾಯಕ ಕೆಎಲ್ ರಾಹುಲ್ ಕೇವಲ ಒಂದು ರನ್‌ಗಳಿಗೆ ಔಟಾದರೂ ಶಿಖರ್ ಧವನ್, ಶುಬ್ಮನ್ ಗಿಲ್, ಸಂಜು ಸ್ಯಾಮ್ಸನ್ ಅದ್ಭುತ ಪ್ರದರ್ಶನದಿಂದಾಗಿ ಭಾರತ ವಿಕೆಟ್‌ಗಳ ಅಂತರದಿಂದ ಸುಲಭವಾಗಿ ಪಂದ್ಯವನ್ನು ಗೆದ್ದುಕೊಂಡಿದೆ. ಇದರ ಪರಿಣಾಮವಾಗಿ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ.

ಆಡುವ ಬಳಗ ಹೀಗಿದೆ: ಜಿಂಬಾಬ್ವೆ: ಇನೋಸೆಂಟ್ ಕೈಯಾ, ತಕುದ್ಜ್ವಾನಾಶೆ ಕೈಟಾನೊ, ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ರೆಗಿಸ್ ಚಕಬ್ವಾ (ನಾಯಕ & ವಿಕೆಟ್ ಕೀಪರ್), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯಾಯುಚಿ, ತನಕಾ ಚಿವಂಗಾ
ಬೆಂಚ್: ಡೊನಾಲ್ಡ್ ತಿರಿಪಾನೊ, ಮಿಲ್ಟನ್ ಶುಂಬಾ, ಟೋನಿ ಮುನ್ಯೊಂಗಾ, ಕ್ಲೈವ್ ಮದಂಡೆ, ಜಾನ್ ಮಸಾರ, ತಡಿವಾನಾಶೆ ಮರುಮನಿ, ರಿಚರ್ಡ್ ನಾಗರವ

ಭಾರತ ತಂಡ: ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್ (ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್‌ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್
ಬೆಂಚ್: ಶಹಬಾಜ್ ಅಹಮದ್, ಆವೇಶ್ ಖಾನ್, ಋತುರಾಜ್ ಗಾಯಕ್ವಾಡ್, ರಾಹುಲ್ ತ್ರಿಪಾಠಿ, ದೀಪಕ್ ಚಹಾರ್

Story first published: Saturday, August 20, 2022, 23:14 [IST]
Other articles published on Aug 20, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+