ಭಾರತ ಸದ್ಯ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಆಟವನ್ನು ಆಡುತ್ತಿದೆ. ಈ ಸರಣಿಯ ಬಳಿಕ ಭಾರತ ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಭಾರತ ತಂಡವನ್ನು ಇನ್ನೇನು ಕೆಲವೇ ದಿನಗಳಲ್ಲಿ ಟೀಮ್ ಇಂಡಿಯಾವನ್ನು ಪ್ರಕಟಿಸುವ ಸಾಧ್ಯತೆ ಇದೆ. ಈ ವೇಳೆ ಟೀಮ್ ಇಂಡಿಯಾ ಕ್ಯಾಂಪ್‌ನಿಂದ ಒಂದು ಸುದ್ದಿ ಬಂದಿದ್ದು, ಅಭಿಮಾನಿಗಳ ಚಿಂತೆಯನ್ನು ದ್ವಿಗುಣ ಗೊಳಿಸಿದೆ.
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅಬ್ಬರಿಸಿದ್ದರು. ಇವರು ಮ್ಯಾಂಚೆಸ್ಟರ್‌ನಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ರಿಷಭ್ ಪಂತ್ ಗಾಯಕ್ಕೆ ತುತ್ತಾಗಿದ್ದರು. ಇವರು ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಕ್ರಿಸ್ ವೋಕ್ಸ್ ಎಸೆತವನ್ನು ಎದುರಿಸಲು ಹೋಗಿ ಪಾದಕ್ಕೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಇವರು ಆಂಡರ್ಸನ್, ತೆಂಡೂಲ್ಕರ್ ಸರಣಿಯ ಕೊನೆಯ ಪಂದ್ಯದಿಂದ ಹೊರಗುಳಿದಿದ್ದರು.

ರಿಷಭ್ ಪಂತ್ ಅವರ ಗಾಯದ ಚೇತರಿಕೆ ಆರು ವಾರಗಳ ಬೇಕಾಗುತ್ತದೆ ಎಂದು ಅಂದಾಜಿಸಲಾಗುತ್ತದೆ. ಇದರಿಂದಾಗಿ ಇವರು ಏಷ್ಯಾ ಕಪ್ ಟಿ20 ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದರು. ಇವರು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಮೈದಾನಕ್ಕೆ ಇಳಿಯಬಹುದು ಎಂದು ಲೆಕ್ಕಾಚಾರ ಹಾಕಿಕೊಳ್ಳಲಾಗಿತ್ತು. ಆದರೆ ಈ ಆಸೆ ಕಮರಿದಂತೆ ಕಾಣುತ್ತಿದೆ. ಆದರೆ ಈ ಬಗ್ಗೆ ಇನ್ನು ಯಾವುದೇ ಅಧಿಕೃತ ಘೋಷಣೆ ಬಂದಿಲ್ಲ.
ಇನ್ನೇನು ಕೆಲವೇ ದಿನಗಳಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಇನ್ನೇನು ಕೆಲವೇ ದಿನಗಳಲ್ಲಿ ತಂಡವನ್ನು ಪ್ರಕಟಿಸಬೇಕಿದೆ. ರಿಷಭ್ ಪಂತ್ ಅವರ ಆರೋಗ್ಯದ ಮೇಲೆ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಚಿತ್ತ ನೆಟ್ಟಿದೆ. ಪಂತ್ ಇನ್ನು ಚೇತರಿಕೆಯ ಹಂತದಲ್ಲಿದ್ದು, ಇವರನ್ನು ತಂಡಕ್ಕೆ ಆಯ್ಕೆ ಮಾಡಿಕೊಳ್ಳುವುದು ಡೌಟ್. ಪಂತ್ ಯಾವಾಗ ಮರಳುತ್ತಾರೆ ಎಂದು ಹೇಳುವುದು ಕಷ್ಟ. ಪಂತ್‌ನಂತಹ ಬಲಿಷ್ಠ ಆಟಗಾರ ವೆಸ್ಟ್ ಇಂಡೀಸ್ ವಿರುದ್ಧ ಆಡಲು ಸಾಧ್ಯವಾಗದಿದ್ದರೆ, ಅದು ಭಾರತ ತಂಡಕ್ಕೆ ಹಿನ್ನಡೆಯಾಗುತ್ತದೆ,

ರಿಷಭ್ ಪಂತ್ ಗಾಯಕ್ಕೆ ತುತ್ತಾದರೆ ಟೀಮ್ ಇಂಡಿಯದಲ್ಲಿ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುವುದು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದ ಧ್ರುವ್ ಜುರೇಲ್ ಅವರಿಗೆ ತಂಡದಲ್ಲಿ ಸ್ಥಾನ ಸಿಗುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಇವರು ಭಾರತ "ಎ" ಪರ ಇತ್ತೀಚಿಗೆ ನಡೆದ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದರು. ಅಲ್ಲದೆ ಇವರು ದುಲೀಪ್ ಟ್ರೋಫಿ ಪಂದ್ಯದಲ್ಲೂ ಅಮೋಘ ಆಟವನ್ನು ಆಡಿದ್ದರು. ಎನ್. ಜಗದೀಶನ್ ಅವರನ್ನು ಸಹ ವಿಂಡೀಸ್ ವಿರುದ್ಧದ ಸರಣಿಗೆ ಪರಿಗಣಿಸಬಹುದಾಗಿದೆ. ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 2 ರಂದು ಅಹಮದಾಬಾದ್‌ನಲ್ಲಿ ಆಡಲಿದೆ.