For Quick Alerts
ALLOW NOTIFICATIONS  
For Daily Alerts
 

ಏಷ್ಯಾ ಕಪ್: ಭಾರತ vs ಪಾಕಿಸ್ತಾನ ಮುಖಾಮುಖಿಗೆ ಮುಹೂರ್ತ ನಿಗದಿ: ಸಮಯ, ಸ್ಥಳದ ಮಾಹಿತಿ ಇಲ್ಲಿದೆ

India will face Pakistan in Asia Cup on 28 August 2022 in Dubai at 7:30 PM IST

ಏಷ್ಯಾ ಕಪ್ ಟಿ20 ಲೀಗ್‌ನ ವೇಳಾಪಟ್ಟಿ ಇಂದು ಅಧಿಕೃತವಾಗಿ ಘೋಷಣೆಯಾಗಿದ್ದು ಆಗಸ್ಟ್ 27ರಿಂದ ಯುಎಇನಲ್ಲಿ ಈ ಟೂರ್ನಿ ಆಯೋಜನೆಯಾಗಲಿದೆ. ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ಮುಖಾಮುಖಿ ಕೂಡ ಈ ಟೂರ್ನಿಯಲ್ಲಿ ನಡೆಯಲಿದ್ದು ಕುತೂಹಲ ಮೂಡಿಸಿದೆ.

ಕಳೆದ ವರ್ಷ ಟಿ20 ವಿಶ್ವಕಪ್‌ನ ಲೀಗ್ ಹಂತದಲ್ಲಿ ಮುಖಾಮುಖಿಯಾದ ಬಳಿಕ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗುತ್ತಿರುವುದು ಎರಡು ತಂಡಗಳ ಕ್ರಿಕೆಟ್ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಎರಡು ತಂಡಗಳು ಇತ್ತೀಚೆಗೆ ಅದ್ಭುತ ಪ್ರದರ್ಶನ ನೀಡುತ್ತಿರುವುದರಿಂದಾಗಿ ಮತ್ತೊಂದು ರೋಚಕ ಹಣಾಹಣಿಗೆ ಅಭಿಮಾನಿಗಳು ಸಿದ್ಧವಾಗಿದ್ದಾರೆ.

ಭಾರತ vs ಪಾಕಿಸ್ತಾನ ಮುಖಾಮುಖಿ ಯಾವಾಗ

ಭಾರತ vs ಪಾಕಿಸ್ತಾನ ಮುಖಾಮುಖಿ ಯಾವಾಗ

ಭಾರತ ಹಾಗೂ ಪಾಕಿಸ್ತಾನ ತಂಡಗಳು ಏಷ್ಯಾ ಕಪ್‌ನಲ್ಲಿ ಆಗಸ್ಟ್ 28ರಂದು ಭಾನುವಾರ ಮುಖಾಮುಖಿಯಾಗಲಿದೆ. ಈ ಮೂಲಕ ಈ ಪ್ರತಿಷ್ಠಿತ ಟೂರ್ನಿಯಲ್ಲಿ ಎರಡು ತಂಡಗಳು ಅಭಿಯಾನ ಆರಂಭಿಸಲಿದೆ. ದುಬೈನಲ್ಲಿರುವ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದ್ದು ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದೆ.

ಎರಡು ಬಾರಿ ಮುಖಾಮುಖಿ?

ಎರಡು ಬಾರಿ ಮುಖಾಮುಖಿ?

ಭಾರತ ಹಾಗೂ ಪಾಕಿಸ್ತಾನ ತಂಡಗಳು ಏಷ್ಯಾ ಕಪ್‌ನಲ್ಲಿ ಆಗಸ್ಟ್ 28ರಂದು ಭಾನುವಾರ ಮುಖಾಮುಖಿಯಾಗಲಿದೆ. ಈ ಮೂಲಕ ಈ ಪ್ರತಿಷ್ಠಿತ ಟೂರ್ನಿಯಲ್ಲಿ ಎರಡು ತಂಡಗಳು ಅಭಿಯಾನ ಆರಂಭಿಸಲಿದೆ. ದುಬೈನಲ್ಲಿರುವ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದ್ದು ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದೆ.

ದುಬೈ ಹಾಗೂ ಶಾರ್ಜಾದಲ್ಲಿ ಏಷ್ಯಾಕಪ್

ದುಬೈ ಹಾಗೂ ಶಾರ್ಜಾದಲ್ಲಿ ಏಷ್ಯಾಕಪ್

ಈ ಬಾರಿಯ ಏಷ್ಯಾ ಕಪ್ ದುಬೈ ಹಾಗೂ ಶಾರ್ಜಾದಲ್ಲಿ ಆಗಸ್ಟ್ 27ರಿಂದ ಸೆಪ್ಟೆಂಬರ್ 11ರ ಮಧ್ಯೆ ನಡೆಯಲಿದೆ. ಶ್ರೀಲಂಕಾದಲ್ಲಿ ಆಯೋಜನೆಯಾಗಬೇಕಿದ್ದ ಈ ಬಾರಿಯ ಏಷ್ಯಾಕಪ್ ಟೂರ್ನಿ ಅಲ್ಲಿನ ರಾಜಕೀಯ ಹಾಗೂ ಆರ್ಥಿಕ ಅಸ್ಥಿರತೆಯ ಕಾರಣದಿಂದಾಗಿ ದುಬೈಗೆ ಸ್ಥಳಾಂತರವಾಗಿದೆ. ಆದರೆ ಆತಿಥ್ಯದ ಹಕ್ಕನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿಯೇ ಹೊಂದಿದೆ. ಆರು ತಂಡಗಳು ಭಾಗಿಯಾಗುವ ಈ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಎ ಗುಂಪಿನಲ್ಲಿದ್ದು ಒಂದು ತಂಡ ಅರ್ಹತೆ ಪಡೆದು ಪ್ರವೇಶಿಸಲಿದೆ. ಇನ್ನು ಗ್ರೂಪ್ ಬಿಯಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ತಂಡಗಳಿದೆ.

ಮೆಕಾಯ್ ಆಟಕ್ಕೆ ನಡುಗಿದ ಭಾರತ, ಇವತ್ತು ಸೇಡು ತೀರಿಸಿಕೊಳ್ಳುತ್ತಾರೆ!! | Oneindia Kannada
ವಿಶ್ವಕಪ್ ಸೋಲಿನ ಸೇಡು

ವಿಶ್ವಕಪ್ ಸೋಲಿನ ಸೇಡು

ಭಾರತ ಕಳೆದ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಿದ್ದಾಗ ಭಾರೀ ಅಂತರದಿಂದ ಸೋಲು ಅನುಭವಿಸಿತ್ತು. ಈ ಮೂಲಕ ಐಸಿಸಿ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತ ಪಾಕಿಸ್ತಾನ ತಂಡದ ವಿರುದ್ಧ ಸೋಲು ಕಂಡು ಭಾರತ ಲೀಗ್ ಹಂತದಿಂದಲೇ ಹೊರಬಿದ್ದು ಮುಖಭಂಗಕ್ಕೆ ಒಳಗಾಗಿತ್ತು. ಈ ಸೋಲಿನ ಸೇಡು ತೀರಿಸಿಕೊಳ್ಳುವ ಅವಕಾಶ ಭಾರತ ತಂಡಕ್ಕಿದ್ದು ಅಭಿಮಾನಿಗಳು ಈ ಮುಖಾಮುಖಿಯನ್ನು ಕುತೂಹಲದಿಂದ ಕಾಯುತ್ತಿದ್ದಾರೆ.

Story first published: Tuesday, August 2, 2022, 18:35 [IST]
Other articles published on Aug 2, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+