IND vs SA: ಸೆಂಚುರಿಯನ್‌ನಲ್ಲಿ ಭಾರತಕ್ಕೆ ಗೆಲುವಿನ "ತಿಲಕ": ಸರಣಿಯಲ್ಲಿ ಮುನ್ನಡೆ
ಸೆಂಚುರಿಯನ್ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ದಕ್ಷಿಣ ಆಫ್ರಿಕಾ ವಿರುದ್ಧ 4 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ. ದಕ್ಷಿಣ ಆಫ್ರಿಕಾ ನಾಯಕ ಐಡೆನ್ ಮಾರ್ಕ್ರಾಮ್ ಮೊದಲು ಟಾಸ್ ಗೆದ್ದು ಭಾರತ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್‌ಗಳನ್ನು ಕಲೆ ಹಾಕಿತು.
ಭಾರತ ನೀಡಿದ್ದ 220 ರನ್ ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 7 ವಿಕೆಟ್ ಕಳೆದುಕೊಂಡು 208 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಇದರೊಂದಿಗೆ ಭಾರತ 11 ರನ್‌ಗಳ ಭರ್ಜರಿ ಜಯ ದಾಖಲಿಸಿ 4 ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ದಕ್ಷಿಣ ಆಫ್ರಿಕಾ ಪರ ಗೆಲುವಿಗೆ ಹೋರಾಡಿದ ಮಾರ್ಕೊ ಜಾನ್ಸೆನ್ 51 ರನ್ ಬಾರಿಸಿ ತಂಡಕ್ಕೆ ಟಾಪ್ ಸ್ಕೋರರ್ ಆದರು. ನಂತರ ಹೆನ್ರಿಚ್ ಕ್ಲಾಸೆನ್ 41, ರಯಾನ್ ರಿಕೆಲ್ಟನ್ 20, ರೀಜಾ ಹೆಂಡ್ರಿಕ್ಸ್ 21, ಎಡನ್ ಮರ್ಕ್ರಾಮ್ 29, ಡೇವಿಡ್ ಮಿಲ್ಲರ್ 18, ಟ್ರಿಸ್ಟಾನ್ ಸ್ಟಬ್ಸ್ 12, ರನ್ ಗಳಿಸಿದರು. ಆದರೂ ಮೂರನೇ ಟಿ20 ಪಂದ್ಯದಲ್ಲಿ ಹರಿಣಗಳ ಪಡೆಗಳ ಬ್ಯಾಟರ್‌ಗಳು ಟೀಮ್ ಇಂಡಿಯಾ ಬೌಲರ್‌ಗಳ ಮುಂದೆ ಬಾಲ ಬಿಚ್ಚಲಿಲ್ಲ. ಟೀಮ್ ಇಂಡಿಯಾ ಅರ್ಷದೀಪ್ ಸಿಂಗ್ 3 ಮತ್ತು ವರಣ್ ಚಕ್ರವರ್ತಿ 2 ವಿಕೆಟ್ ಕಬಳಿಸಿದರೆ, ಹಾರ್ದಿಕ್ ಪಾಂಡ್ಯಾ ಮತ್ತು ಅಕ್ಸರ್ ಪಟೇಲ್ ತಲಾ 1 ವಿಕೆಟ್ ಪಡೆದರು.
ಭಾರತದ ಇನ್ನಿಂಗ್ಸ್
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ಆರಂಭದಲ್ಲಿ ಸಂಜು ಸ್ಯಾಮ್ಸನ್ ಅವರ ವಿಕೆಟ್ ಕಳೆದುಕೊಂಡಿತ್ತು. ಮೊದಲ ಟಿ20 ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ ಸಂಜು ಮತ್ತೊಮ್ಮೆ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡರು. ನಂತರ ಒಂದಾದ ಆರಂಭಿಕ ಅಭಿಷೇಕ್ ಶರ್ಮಾ ಮತ್ತು ತಿಲಕ್ ವರ್ಮಾ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿತು. ಅಭಿಷೇಕ್ ಶರ್ಮಾ ಅರ್ಧಶತಕ ಸಿಡಿಸಿ ಮಿಂಚಿದರೆ, ತಿಲಕ್ ವರ್ಮಾ ಶತಕ ಬಾರಿಸುವ ಮೂಲಕ ದಾಖಲೆ ಬರೆದ ಮಿಂಚಿದರು. ಈ ಇಬ್ಬರ ಅದ್ಭುತ ಇನ್ನಿಂಗ್ಸ್‌ನಿಂದ ಭಾರತ ಅಂತಿಮವಾಗಿ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿತು. ಈ ಪಂದ್ಯದಲ್ಲಿ ಅಭಿಷೇಕ್ ಮತ್ತು ತಿಲಕ್ ಹೊರತಾಗಿ ಸ್ಟಾರ್ ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ 18 ರನ್ ಮತ್ತು ರಮಣದೀಪ್ ಸಿಂಗ್ 15 ರನ್ ಕೊಡುಗೆ ನೀಡಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications