ಟೀಮ್ ಇಂಡಿಯಾ ಮಹಿಳಾ ತಂಡ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಶ್ರೀಲಂಕಾವನ್ನು 8 ವಿಕೆಟ್‌ಗಳಿಂದ ಮಣಿಸಿ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದೆ. ಇನ್ನು ಎರಡೂ ಪಂದ್ಯ ಬಾಕಿ ಇರುವಂತೆ ಭಾರತ ಸರಣಿಯನ್ನು ವಶಕ್ಕೆ ಪಡೆದಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕಿ ಹರ್ಮನ್ ಪ್ರೀತ್ ಕೌರ್ ಹಾಗೂ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ದೊಡ್ಡ ದಾಖಲೆ ಬರೆದಿದ್ದಾರೆ. ಆ ದಾಖಲೆಗಳ ಬಗ್ಗೆ ವರದಿ ಇಲ್ಲಿದೆ.
ತಿರುವನಂತಪುರಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 112 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಟೀಮ್ ಇಂಡಿಯಾ 13.2 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 115 ರನ್ ಸೇರಿಸಿ ಜಯ ಸಾಧಿಸಿತು. ಈ ಮೂಲಕ ಭಾರತ ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ದೀಪ್ತಿ ಶರ್ಮಾ ಸ್ಥಿರ ಪ್ರದರ್ಶನ ನೀಡಿ ದಾಖಲೆಯ ಪುಟಕ್ಕೆ ಎಂಟ್ರಿ ಪಡೆದಿದ್ದಾರೆ.

ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ದೀಪ್ತಿ ಶರ್ಮಾ ಅವರ ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಶ್ರೀಲಂಕಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ದೀಪ್ತಿ ಶರ್ಮಾ 4 ಓವರ್‌ಗಳಲ್ಲಿ ಕೇವಲ 18 ರನ್ ನೀಡಿ 3 ವಿಕೆಟ್ ಕಬಳಿಸಿದರು. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 3 ವಿಕೆಟ್ ಪಡೆಯುತ್ತಲೇ ದೀಪ್ತಿ ಶರ್ಮಾ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ 150 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು.
ದೀಪ್ತಿ ಮೂಲಕ ಇವರು ಆಸ್ಟ್ರೇಲಿಯಾದ ಮೇಗನ್ ಶುಟ್ ಅವರ ದಾಖಲೆಯನ್ನು ಸರಿಗಟ್ಟಿದ್ದರು. ವಿಶ್ವ ಕ್ರಿಕೆಟ್‌ನಲ್ಲಿ ಮೇಗನ್ ಶುಟ್ ಈ ಮೊದಲು 150ಕ್ಕೂ ಹೆಚ್ಚು ವಿಕೆಟ್ ಪಡೆದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದರು. ಟಿ20 ಕ್ರಿಕೆಟ್‌ನಲ್ಲಿ 150ಕ್ಕೂ ಹೆಚ್ಚು ವಿಕೆಟ್ ಪಡೆದ ಎರಡನೇ ಆಟಗರ್ತಿ ಎಂಬ ಹಿರಿಮೆ ದೀಪ್ತಿ ಅವರ ಪಾಲಗಿದೆ. ಭಾರತದ ಪರ ಪುರುಷ ಮತ್ತು ಮಹಿಳಾ ತಂಡಗಳ ಪರ 150ಕ್ಕೂ ಹೆಚ್ಚು ವಿಕೆಟ್ ಪಡೆದ ಮೊದಲ ಆಟಗಾರ್ತಿ ಎಂಬ ಶ್ರೇಯ ತಮ್ಮದಾಗಿಸಿಕೊಂಡಿದ್ದಾರೆ.

ಶ್ರೀಲಂಕಾ ವಿರುದ್ಧದ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸುತ್ತಲೇ ಹರ್ಮನ್ ಪ್ರೀತ್ ಕೌರ್ ಸಹ ದೊಡ್ಡ ದಾಖಲೆಯನ್ನು ಬರೆದರು. ಮಹಿಳಾ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ದಾಖಲೆಯನ್ನು ಹರ್ಮನ್ ಪ್ರೀತ್ ಕೌರ್ ಸರಿಗಟ್ಟಿದ್ದಾರೆ. ಇವರು ಒಟ್ಟಾರೆ 130 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದು, ಈ ವೇಳೆ ತಂಡ 76 ಜಯ ದಾಖಲಿಸಿದೆ. ಈ ಮೂಲಕ ಹರ್ಮನ್ ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್ ಅವರ ದಾಖಲೆಯ ಸಮಕ್ಕೆ ನಿಂತರು. ಇವರು ಆಸೀಸ್ ತಂಡವನ್ನು 100 ಪಂದ್ಯಗಳಲ್ಲಿ ಮುನ್ನಡೆಸಿ 76 ರಲ್ಲಿ ಜಯ ಸಾಧಿಸಿದ್ದರು.