IND vs IRE: ಸರಣಿ ಕ್ಲೀನ್ ಸ್ವೀಪ್ ಮೇಲೆ ಭಾರತ ವನಿತೆಯರ ಕಣ್ಣು
ಭಾರತ ಮತ್ತು ಐರ್ಲೆಂಡ್ ಮಹಿಳಾ ಕ್ರಿಕೆಟ್ ತಂಡಗಳ ನಡುವೆ 3 ಏಕದಿನ ಪಂದ್ಯಗಳ ಸರಣಿ ನಡೆಯುತ್ತಿದೆ. ಭಾರತ ತಂಡ ಈಗಾಗಲೇ ಎರಡೂ ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿದೆ. ಇದೀಗ ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ. ಸ್ಮೃತಿ ಮಂಧಾನ ನೇತೃತ್ವದ ಟೀಮ್ ಇಂಡಿಯಾ ಮೂರನೇ ಏಕದಿನ ಪಂದ್ಯದಲ್ಲಿ ಗ್ಯಾಬಿ ಲೂಯಿಸ್ ನಾಯಕತ್ವದ ಐರ್ಲೆಂಡ್ ತಂಡವನ್ನು ಮಣಿಸಿ ಸರಣಿ ಕ್ಲೀನ್ ಸ್ವೀಪ್ ಮಾಡುವ ಅವಕಾಶವನ್ನು ಹೊಂದಿದೆ.
ಭಾರತ ಮತ್ತು ಐರ್ಲೆಂಡ್ ಮಹಿಳಾ ತಂಡಗಳ ನಡುವೆ ಬುಧವಾರ ಅಂದರೆ ಜನವರಿ 15 ರಂದು ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ನಡೆಯಲಿದೆ. ರಾಜ್‌ಕೋಟ್‌ನ ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದಲ್ಲಿ ಭಾರತ ತಂಡದ ನಾಯಕಿ ಸ್ಮೃತಿ ಮಂಧಾನ, ಜೆಮಿಮಾ ರೋಡ್ರಿಗಸ್, ಪ್ರತೀಕಾ ರಾವಲ್ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದರೆ, ಸಯಾಲಿ ಸತ್ಘರೆ, ಸೈಮಾ ಠಾಕೋರ್ ಮತ್ತು ಟಿಟಾಸ್ ಸಾಧು ಬೌಲಿಂಗ್ ದಾಳಿ ನಡೆಸಲು ಸಜ್ಜಾಗಿದ್ದಾರೆ.

ಪಿಚ್ ಹೇಗಿದೆ?
ರಾಜ್‌ಕೋಟ್‌ನ ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನ ಪಿಚ್ ಬ್ಯಾಟರ್‌ಗಳಿಗೆ ಅತಿಹೆಚ್ಚು ರನ್ ಗಳಿಸಲು ನೆರವಾಗಲಿದೆ. ಇದೇ ಸ್ಟೇಡಿಯಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 370 ರನ್ ಗಳಿಸಿದರೆ, ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ 238 ರನ್ ಮತ್ತು ಭಾರತ 241 ರನ್ ಗಳಿಸಿತು. ಈ ಪಿಚ್ ಬ್ಯಾಟರ್‌ಗಳಿಗೆ ಸಹಾಯಕವಾಗಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ. ಜೊತೆಗೆ ಬೌಲರ್‌ಗಳಿಗೂ ಸ್ವಲ್ಪ ಸಹಾಯವಿದೆ.
ಭಾರತ ವನಿತೆಯರ ಮಿಂಚು
ಭಾರತ ತಂಡದ ಸ್ಟಾರ್ ಬ್ಯಾಟರ್ ಜೆಮಿಮಾ ರೋಡ್ರಿಗಸ್ (102) ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದ್ದರು. ಈ ಪಂದ್ಯದಲ್ಲಿ ಭಾರತ ತಂಡ ತನ್ನ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಗರಿಷ್ಠ 370 ರನ್ ಕಲೆ ಹಾಕಿತ್ತು. ಈ ಪಂದ್ಯದಲ್ಲಿ ಮಂಧಾನ 73 ರನ್, ಹರ್ಲೀನ್ ಡಿಯೋಲ್ 89, ಪ್ರತೀಕಾ ರಾವಲ್ 67 ರನ್ ಕೊಡುಗೆ ನೀಡಿದರೆ, ದೀಪ್ತಿ ಶರ್ಮಾ 3 ವಿಕೆಟ್ ಪಡೆದು ಮಿಂಚಿದ್ದರು.
ಐರ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪ್ರತೀಕಾ ರಾವಲ್ 96 ಎಸೆತಗಳಲ್ಲಿ 10 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 89 ರನ್ ಗಳಿಸಿದರು. ತೇಜಲ್ ಹಸ್ಸಾಬ್ನಿಸ್ 45 ಎಸೆತಗಳಲ್ಲಿ 9 ಬೌಂಡರಿಗಳ ನೆರವಿನಿಂದ 60 ರನ್ ಗಳಿಸಿದರು. ಸ್ಮೃತಿ ಮಂಧಾನ 29 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 41 ರನ್ ಬಾರಿಸಿದರು. ಮೊದಲ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆದ್ದ ಭಾರತ, ಎರಡನೇ ಪಂದ್ಯವನ್ನು 116 ರನ್‌ಗಳ ಬೃಹತ್ ಅಂತರದಿಂದ ಗೆದ್ದುಕೊಂಡಿತು. ಇದೀಗ ಮೂರನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡಲು ಸಜ್ಜಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications