ಇತ್ತೀಚಿಗೆ ಶ್ರೀಲಂಕಾದಲ್ಲಿ ನಡೆದ ತ್ರಿಕೋನ ಏಕದಿನ ಸರಣಿಯಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಭಾರತ ಮಹಿಳಾ ತಂಡ ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಲಿದೆ. ಜೂನ್ ಅಂತ್ಯದಲ್ಲಿ ನಡೆಯಲಿರುವ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಪ್ರವಾಸದಲ್ಲಿ ಭಾರತ ಮಹಿಳಾ ತಂಡ ಇಂಗ್ಲೆಂಡ್ ವಿರುದ್ಧ ಸೀಮಿತ ಓವರ್‌ಗಳ ಸರಣಿ ಆಡಲಿದೆ. ಐದು ಪಂದ್ಯಗಳ ಟಿ20 ಸರಣಿ ಜೂನ್ 28 ರಿಂದ ಆರಂಭವಾಗಲಿದೆ.
ಏಕದಿನ ಮತ್ತು ಟಿ20 ಸರಣಿಗಳಿಗೆ ಅನುಭವಿ ಆಟಗಾರ್ತಿ ಹರ್ಮನ್‌ಪ್ರೀತ್ ಕೌರ್ ಅವರನ್ನು ನಾಯಕಿಯಾಗಿ ಆಯ್ಕೆಮಾಡಲಾಗಿದೆ. ಈ ಸರಣಿಯಲ್ಲಿ ಸ್ಮೃತಿ ಮಂಧನಾ ಅವರು ಉಪನಾಯಕಿ ಪಟ್ಟವನ್ನು ನೀಡಲಾಗಿದೆ. ಈ ವೇಳೆ ಟೀಮ್ ಇಂಡಿಯಾ ಎರಡೂ ಸರಣಿಗಳನ್ನು ಗೆಲ್ಲುವ ಕನಸು ಕಾಣುತ್ತಿದೆ. ಈ ಸರಣಿಯಲ್ಲಿ ಯುವ ಆಟಗಾರರಿಗೆ ಆಡುವ ಅವಕಾಶ ಸಿಗುತ್ತದೋ ಎಂಬುದನ್ನು ಕಾದು ನೋಡಬೇಕಿದೆ.

ಮಹಿಳಾ ಪ್ರೀಮಿಯರ್ ಲೀಗ್ ವೇಳೆ ಗಾಯಕ್ಕೆ ತುತ್ತಾಗಿದ್ದ ಶ್ರೇಯಾಂಕ್ ಪಾಟೀಲ್ ಈ ಸರಣಿಯಿಂದಲೂ ಮಿಸ್ ಆಗುತ್ತಿದ್ದಾರೆ. ಇವರು ತ್ರಿಕೋನ್ ಸರಣಿಯಲ್ಲೂ ಸ್ಥಾನ ಪಡೆಯುವ ಅವಕಾಶವನ್ನು ಪಡೆದಿರಲಿಲ್ಲ. ಶ್ರೇಯಾಂಕ ಪಾಟೀಲ್ ಹಾಗೂ ರೇಣುಕಾ ಸಿಂಗ್ ಅವರು ಇನ್ನು ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡಿಲ್ಲ. ಹೀಗಾಗಿ ಇವರು ಈ ಸರಣಿಯಿಂದಲೂ ಮಿಸ್ ಆಗಲಿದ್ದಾರೆ. ಈಗ ಈ ಆಟಗಾರ್ತಿಯರು ವಿಶ್ವಕಪ್ ವೇಳೆಗೆ ಫಿಟ್ ಅಗುತ್ತಾರೋ ಇಲ್ಲವೋ ಎಂಬ ಬಗ್ಗೆ ಅನುಮಾನಗಳು ಮೂಡಲು ಆರಂಭಿಸಿವೆ. ಶಫಾಲಿ ವರ್ಮಾ ಹಾಗೂ ಸ್ನೇಹಾ ರಾಣಾ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಫಲರಾಗುದ್ದಾರೆ.
ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್‌ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್‌ಕೀಪರ್), ತೇಜಲ್ ಹಸಬ್ನಿಸ್, ದೀಪ್ತಿ ರಣಹೂ, ಶ್ರೀಪಾಧ್ಯಾ, ಶ್ರೀಪಾಧ್ಯಾ, ಸ್ನೇಹ್ ಕೌರ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ಸಯಾಲಿ.
ಟಿ-20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್‌ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್‌ಕೀಪರ್), ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಸ್ನೇಹ ರಾಣಾ, ಶ್ರೀ ಚರಣಿ, ಅರುಣ್ಧಾ ರೆಡ್ಡಿ, ಶುಚಿ ಗೌರ್, ಸಯಾಲಿ,