Ind vs Eng 2nd ODI: ಹರ್ಮನ್ ಪ್ರೀತ್ ಕೌರ್ ಭರ್ಜರಿ ಶತಕ, ಇಂಗ್ಲೆಂಡ್‌ಗೆ 334 ರನ್‌ಗಳ ಗುರಿ ನೀಡಿದ ಭಾರತದ ವನಿತೆಯರು
ಕೆಂಟ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ವನಿತೆಯರ ನಡುವಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ವನಿತೆಯರು 334 ರನ್‌ಗಳ ಗುರಿ ನೀಡಿದ್ದಾರೆ.
ಭಾರತ ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಭರ್ಜರಿ ಶತಕ ದಾಖಲಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತದ ವನಿತೆಯರು ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.
ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ 51 ಎಸೆತಗಳಲ್ಲಿ 40 ರನ್ ಗಳಿಸುವ ಮೂಲಕ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು. ಯಾಸ್ತಿಕಾ ಭಾಟಿಯಾ 34 ಎಸೆತಗಳಲ್ಲಿ 26 ರನ್ ಗಳಿಸಿದರೆ. ನಾಯಕಿ ಹರ್ಮನ್ ಪ್ರೀತ್ ಕೌರ್ ಭರ್ಜರಿ ಶತಕ ದಾಖಲಿಸಿದರು. 111 ಎಸೆತಗಳನ್ನು ಎದುರಿಸಿದ ನಾಯಕಿ ಕೌರ್, 18 ಬೌಂಡರಿ 4 ಭರ್ಜರಿ ಸಿಕ್ಸರ್ ನೆರವಿನಿಂದ ಅಜೇಯ 143 ರನ್ ಗಳಿಸಿ, ಇಂಗ್ಲೆಂಡ್ ಬೌಲರ್ ಗಳ ಬೆವರಿಳಿಸಿದರು.
ಹರ್ಲೀನ್ ಡಿಯೋಲ್ 72 ಎಸೆತಗಳಲ್ಲಿ 58 ರನ್ ಗಳಿಸಿ ನಾಯಕಿಗೆ ಉತ್ತಮವಾಗಿ ಬೆಂಬಲ ನೀಡಿದರು, ನಂತರ ಬಂದ ಪೂಜಾ ವಸ್ತ್ರಾಕರ್ 16 ಎಸೆತಗಳಲ್ಲಿ 18ರನ್ ಗಳಿಸಿ ಔಟಾದರು. ಅಂತಿಮವಾಗಿ ಭಾರತದ ವನಿತೆಯರು ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 333 ರನ್‌ಗಳನ್ನು ಗಳಿಸಿತು.

ಇಂಗ್ಲೆಂಡ್ ಮಹಿಳೆಯರು (ಪ್ಲೇಯಿಂಗ್ 11): ಎಮ್ಮಾ ಲ್ಯಾಂಬ್, ಟಮ್ಮಿ ಬ್ಯೂಮಾಂಟ್, ಸೋಫಿಯಾ ಡಂಕ್ಲಿ, ಆಲಿಸ್ ಕ್ಯಾಪ್ಸೆ, ಡೇನಿಯಲ್ ವ್ಯಾಟ್, ಆಮಿ ಜೋನ್ಸ್ (ನಾಯಕಿ ಮತ್ತು ವಿಕೆಟ್ ಕೀಪರ್), ಫ್ರೇಯಾ ಕೆಂಪ್, ಸೋಫಿ ಎಕ್ಲೆಸ್ಟೋನ್, ಷಾರ್ಲೆಟ್ ಡೀನ್, ಕೇಟ್ ಕ್ರಾಸ್, ಲಾರೆನ್ ಬೆಲ್
ಭಾರತ ಮಹಿಳೆಯರು (ಪ್ಲೇಯಿಂಗ್ 11): ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಜೂಲನ್ ಗೋಸ್ವಾಮಿ, ರಾಜೇಶ್ವರಿ ಗಾಯಕ್ವಾಡ್, ರೇಣುಕಾ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications