ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs Eng 2nd ODI: ಹರ್ಮನ್ ಪ್ರೀತ್ ಕೌರ್ ಭರ್ಜರಿ ಶತಕ, ಇಂಗ್ಲೆಂಡ್‌ಗೆ 334 ರನ್‌ಗಳ ಗುರಿ ನೀಡಿದ ಭಾರತದ ವನಿತೆಯರು

ಕೆಂಟ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ವನಿತೆಯರ ನಡುವಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ವನಿತೆಯರು 334 ರನ್‌ಗಳ ಗುರಿ ನೀಡಿದ್ದಾರೆ.

ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ ಪ್ರೀತ್ ಕೌರ್ ಭರ್ಜರಿ ಶತಕ ದಾಖಲಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತದ ವನಿತೆಯರು ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.

ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ 51 ಎಸೆತಗಳಲ್ಲಿ 40 ರನ್ ಗಳಿಸುವ ಮೂಲಕ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು. ಯಾಸ್ತಿಕಾ ಭಾಟಿಯಾ 34 ಎಸೆತಗಳಲ್ಲಿ 26 ರನ್ ಗಳಿಸಿದರೆ. ನಾಯಕಿ ಹರ್ಮನ್ ಪ್ರೀತ್ ಕೌರ್ ಭರ್ಜರಿ ಶತಕ ದಾಖಲಿಸಿದರು. 111 ಎಸೆತಗಳನ್ನು ಎದುರಿಸಿದ ನಾಯಕಿ ಕೌರ್, 18 ಬೌಂಡರಿ 4 ಭರ್ಜರಿ ಸಿಕ್ಸರ್ ನೆರವಿನಿಂದ ಅಜೇಯ 143 ರನ್ ಗಳಿಸಿ, ಇಂಗ್ಲೆಂಡ್‌ ಬೌಲರ್ ಗಳ ಬೆವರಿಳಿಸಿದರು.

ಟೀಂ ಇಂಡಿಯಾ ಹೊಸ ಜೆರ್ಸಿ ಅನಾವರಣ: ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ಹೊಸ ಜೆರ್ಸಿಯಲ್ಲಿ ಕಣಕ್ಕೆಟೀಂ ಇಂಡಿಯಾ ಹೊಸ ಜೆರ್ಸಿ ಅನಾವರಣ: ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ಹೊಸ ಜೆರ್ಸಿಯಲ್ಲಿ ಕಣಕ್ಕೆ

ಹರ್ಲೀನ್ ಡಿಯೋಲ್ 72 ಎಸೆತಗಳಲ್ಲಿ 58 ರನ್ ಗಳಿಸಿ ನಾಯಕಿಗೆ ಉತ್ತಮವಾಗಿ ಬೆಂಬಲ ನೀಡಿದರು, ನಂತರ ಬಂದ ಪೂಜಾ ವಸ್ತ್ರಾಕರ್ 16 ಎಸೆತಗಳಲ್ಲಿ 18ರನ್ ಗಳಿಸಿ ಔಟಾದರು. ಅಂತಿಮವಾಗಿ ಭಾರತದ ವನಿತೆಯರು ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 333 ರನ್‌ಗಳನ್ನು ಗಳಿಸಿತು.

 India Women Scored 333 Runs Against England In Second ODI At Kent

ಇಂಗ್ಲೆಂಡ್ ಮಹಿಳೆಯರು (ಪ್ಲೇಯಿಂಗ್ 11): ಎಮ್ಮಾ ಲ್ಯಾಂಬ್, ಟಮ್ಮಿ ಬ್ಯೂಮಾಂಟ್, ಸೋಫಿಯಾ ಡಂಕ್ಲಿ, ಆಲಿಸ್ ಕ್ಯಾಪ್ಸೆ, ಡೇನಿಯಲ್ ವ್ಯಾಟ್, ಆಮಿ ಜೋನ್ಸ್ (ನಾಯಕಿ ಮತ್ತು ವಿಕೆಟ್ ಕೀಪರ್), ಫ್ರೇಯಾ ಕೆಂಪ್, ಸೋಫಿ ಎಕ್ಲೆಸ್ಟೋನ್, ಷಾರ್ಲೆಟ್ ಡೀನ್, ಕೇಟ್ ಕ್ರಾಸ್, ಲಾರೆನ್ ಬೆಲ್

ಭಾರತ ಮಹಿಳೆಯರು (ಪ್ಲೇಯಿಂಗ್ 11): ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಜೂಲನ್ ಗೋಸ್ವಾಮಿ, ರಾಜೇಶ್ವರಿ ಗಾಯಕ್ವಾಡ್, ರೇಣುಕಾ ಸಿಂಗ್.

Story first published: Wednesday, September 21, 2022, 21:18 [IST]
Other articles published on Sep 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X