ಆಸ್ಟ್ರೇಲಿಯಾ ವನಿತೆಯರಿಗೆ ಭಾರತದ ಆತಿಥ್ಯ; ಡಿ. 9ರಿಂದ 5 ಪಂದ್ಯಗಳ ಮಹಿಳಾ ಟಿ20 ಸರಣಿ

ಮುಂಬರುವ ಡಿಸೆಂಬರ್ 9ರಿಂದ 20ರವರೆಗೆ ಮುಂಬೈನಲ್ಲಿ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ, ಹಾಲಿ ಟಿ20 ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೆಣಸಾಡಲಿದೆ.
ಈ ಕುರಿತು ಪ್ರಕಟಿಸಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡವು ಭಾರತದ ಪ್ರವಾಸ ಕೈಗೊಳ್ಳಲಿದ್ದು, ಮುಂಬೈನ ಎರಡು ಮೈದಾನಗಳಲ್ಲಿ ಭಾರತ ಆತಿಥ್ಯ ವಹಿಸಲಿದೆ.
ಫೆಬ್ರವರಿ ಆರಂಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಪೂರ್ವ ತಯಾರಿ ಆಗಿರುವುದರಿಂದ ಈ ಸರಣಿಯು ಮಹತ್ವದ್ದಾಗಿದೆ. ಭಾರತ ಮಹಿಳಾ ತಂಡ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳು ಡಿಸೆಂಬರ್ 9, 11, 14, 17 ಮತ್ತು 20ರಂದು ನಡೆಯಲಿವೆ.

ಮೊದಲ ಎರಡು ಪಂದ್ಯಗಳು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದ್ದರೆ, ಉಳಿದ ಮೂರು ಪಂದ್ಯಗಳು ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿವೆ.
ಟಿ20 ವಿಶ್ವಕಪ್ ಸೋಲಿನ ನಂತರ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿ ವಜಾ
ಆಸ್ಟ್ರೇಲಿಯಾದಲ್ಲಿ ನಡೆದ 2022ರ ಟಿ 20 ವಿಶ್ವಕಪ್‌ನಿಂದ ರಾಷ್ಟ್ರೀಯ ಪುರುಷರ ತಂಡವು ಸೋತು ನಿರಾಸೆ ಅನುಭವಿಸಿದ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು(ಬಿಸಿಸಿಐ), ರಾಷ್ಟ್ರೀಯ ಆಯ್ಕೆ ಸಮಿತಿಯ ಅಧ್ಯಕ್ಷ ಚೇತನ್ ಶರ್ಮಾ ಮತ್ತು ಸಮಿತಿಯನ್ನು ವಜಾ ಮಾಡಿದೆ.
ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯಲ್ಲಿ ಹರ್ವಿಂದರ್ ಸಿಂಗ್, ಸುನಿಲ್ ಜೋಶಿ ಮತ್ತು ದೇಬಾಶಿಶ್ ಮೊಹಂತಿ ಇತರ ಸದಸ್ಯರಾಗಿದ್ದರು.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಅಡಿಲೇಡ್ ಓವಲ್‌ನಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ಗಳ ಅವಮಾನಕರ ಸೋಲಿನ ನಂತರ ಪಂದ್ಯಾವಳಿಯಿಂದ ಹೊರಬಿದ್ದಿತ್ತು.

ಇನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಶುಕ್ರವಾರ ಭಾರತ ಹಿರಿಯ ಪುರುಷರ ತಂಡಕ್ಕೆ ರಾಷ್ಟ್ರೀಯ ಆಯ್ಕೆಗಾರರ ಸ್ಥಾನಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಪ್ರಕಟಿಸಿದೆ. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 28ರ ಸಂಜೆ 6 ಗಂಟೆಗೆ ಕೊನೆಯ ದಿನಾಂಕ ಮತ್ತು ಸಮಯ ಎಂದು ಬಿಸಿಸಿಐ ಹೇಳಿದೆ.
"ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಪರಿಗಣಿಸಲು ಕೆಲವು ಮಾನದಂಡಗಳನ್ನು ಪೂರೈಸಬೇಕು' ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಏಳು ಟೆಸ್ಟ್ ಪಂದ್ಯಗಳು, 30 ಪ್ರಥಮ ದರ್ಜೆ ಪಂದ್ಯಗಳು ಅಥವಾ 10 ಏಕದಿನ ಮತ್ತು 20 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರಬೇಕು," ಎಂದು ತಿಳಿಸಲಾಗಿದೆ. ಅಲ್ಲದೆ, ಅಭ್ಯರ್ಥಿಗಳು ಕನಿಷ್ಠ ಐದು ವರ್ಷಗಳ ಹಿಂದೆ ಕ್ರಿಕೆಟ್‌ನಿಂದ ನಿವೃತ್ತರಾಗಿರಬೇಕು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications