IND-W vs AUS-W: ಭಾರತ vs ಆಸ್ಟ್ರೇಲಿಯಾ 2ನೇ ಟಿ20 ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ

ಭಾರತ ಮಹಿಳಾ ಕ್ರಿಕೆಟ್ ತಂಡವು ಇಂದು (ಭಾನುವಾರ, ಡಿಸೆಂಬರ್ 11) ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಐದು ಟಿ20 ಪಂದ್ಯಗಳ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡವನ್ನು ಎದುರಿಸುತ್ತಿದ್ದು, ಈ ಪಂದ್ಯದಲ್ಲಿ ಗೆದ್ದು ಮೊದಲ ಪಂದ್ಯದ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಎದುರು ನೋಡುತ್ತಿದೆ.
ಟಾಸ್ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬೌಲಿಂಗ್ ಆಯ್ದುಕೊಂಡರೆ, ಅಲಿಸ್ಸಾ ಹೀಲಿ ನಾಯಕತ್ವದ ಆಸ್ಟ್ರೇಲಿಯಾ ಮಹಿಳಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಅಲಿಸ್ಸಾ ಹೀಲಿ ಆಸ್ಟ್ರೇಲಿಯನ್ ತಂಡವನ್ನು ಮುನ್ನಡೆಸುತ್ತಿದ್ದು, ತಮ್ಮ ತಂಡವು ನಾಗಾಲೋಟವನ್ನು ಮುಂದುವರಿಸಲು ಪ್ರಯತ್ನಸಲಿದ್ದಾರೆ. ವಿಶ್ವ ಚಾಂಪಿಯನ್ ತಂಡವು ಆತಿಥೇಯ ಭಾರತದ ವಿರುದ್ಧ ಮೊದಲ ಪಂದ್ಯದಲ್ಲಿ 9 ವಿಕೆಟ್‌ಗಳ ಬೃಹತ್ ವಿಜಯ ಸಾಧಿಸಿದರು.
ಮತ್ತೊಂದೆಡೆ, ಭಾರತ ತಂಡ ಬ್ಯಾಟಿಂಗ್‌ನಲ್ಲಿ ಆಕ್ರಮಣಕಾರಿ ಕ್ರಿಕೆಟ್ ಆಡುತ್ತಿದೆ. ರಿಚಾ ಘೋಷ್ ಮತ್ತು ದೀಪ್ತಿ ಶರ್ಮಾ ಮೊದಲ ಟಿ20 ಪಂದ್ಯದಲ್ಲಿ ಉತ್ತಮವಾಗಿ ಸ್ಕೋರ್ ಮಾಡಿದರು ಮತ್ತು ನಿಗದಿತ 20 ಓವರ್‌ಗಳಲ್ಲಿ 172 ರನ್ ತಲುಪಿಸಿದರು.
ಹಿರಿಯ ಆಟಗಾರ್ತಿಯರಾದ ಹರ್ಮನ್‌ಪ್ರೀತ್ ಕೌರ್ ಮತ್ತು ಸ್ಮೃತಿ ಮಂಧಾನ ಅವರಿಂದ ದೊಡ್ಡ ಸ್ಕೋರ್ ಬರಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.
ಈ ಪಂದ್ಯದಲ್ಲಿ ಭಾರತ ತಂಡ ಯಾವುದೇ ಬದಲಾವಣೆ ಮಾಡಿಲ್ಲ, ಆದರೆ ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ.
ಭಾರತ vs ಆಸ್ಟ್ರೇಲಿಯಾ ಮಹಿಳಾ ತಂಡಗಳ ಸಂಭಾವ್ಯ 11ರ ಬಳಗ
ಭಾರತ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ದೇವಿಕಾ ವೈದ್ಯ, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ರಾಧಾ ಯಾದವ್, ಅಂಜಲಿ ಸರ್ವಾನಿ, ಮೇಘನಾ ಸಿಂಗ್, ರೇಣುಕಾ ಸಿಂಗ್,
ಆಸ್ಟ್ರೇಲಿಯಾ: ಅಲಿಸ್ಸಾ ಹೀಲಿ (ನಾಯಕಿ), ಬೆತ್ ಮೂನಿ, ಎಲಿಸ್ಸೆ ಪೆರ್ರಿ, ಆಶ್ಲೀಗ್ ಗಾರ್ಡ್ನರ್, ತಾಲಿಯಾ ಮೆಕ್‌ಗ್ರಾತ್, ಫೋಬೆ ಲಿಚ್‌ಫೀಲ್ಡ್, ಅನ್ನಾಬೆಲ್ ಸದರ್ಲ್ಯಾಂಡ್, ಹೀಥರ್ ಗ್ರಹಾಂ, ಅಲಾನಾ ಕಿಂಗ್, ಕಿಮ್ ಗಾರ್ತ್, ಮೇಗನ್ ಶುಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications