ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind W vs Aus W: 3ನೇ ಟಿ20 ಪಂದ್ಯ, ಟಾಸ್ ವರದಿ ಹಾಗೂ ಆಡುವ ಬಳಗ

India Women vs Australia Women: 3rd t20, Toss report Live score and playing XI details

ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ಟಿ20 ಸರಣಿಯ ಮೂರನೇ ಪಂದ್ಯ ಇಂದು ನಡೆಯುತ್ತಿದೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಿದ್ದು ಮೊದಲ ಆತಿಥೇಯ ಭಾರತ ತಂಡ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆಸಿಸ್ ವನಿತೆಯರು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದ್ದಾರೆ.

ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಮೇಘ್ನಾ ಬದಲಿಗೆ ರಾಜೇಶ್ವರ್ ಗಾಯಕ್ವಾಡ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆ ಮಾಡಿಕೊಳ್ಳಲಾಗಿದ್ದು ಹ್ಯಾರಿಸ್ ಹಾಗೂ ಬ್ರೌನ್ ಆಡುವ ಬಳಗದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಇನ್ನು ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಎರಡು ತಂಡಳು ಕೂಡ ಸೋಲು ಗೆಲುವಿನ ರುಚಿ ಕಂಡಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ 9 ವಿಕೆಟ್‌ಗಳ ಅಂತರದ ಅಮೋಘ ಗೆಲುವು ಸಾಧಿಸಿದರೆ ಎರಡನೇ ಪಂದ್ಯ ಟೈನಲ್ಲಿ ಅಂತ್ಯವಾಗಿತ್ತು. ಹೀಗಾಗಿ ಸೂಪರ್ ಓವರ್‌ನಲ್ಲಿ ಭಾರತೀಯ ಮಹಿಳಾ ತಂಡ ಗೆಲುವು ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಐದು ಪಂದ್ಯಗಳ ಸರಣಿಯಾಗಿದ್ದು ಈ ಪಂದ್ಯದಲ್ಲಿ ಗೆದ್ದು ಯಾವ ತಂಡ ಮುನ್ನಡೆ ಸಾಧಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಭಾರತ ತಂಡ ಹೀಗಿದೆ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ದೇವಿಕಾ ವೈದ್ಯ, ರಾಧಾ ಯಾದವ್, ಅಂಜಲಿ ಸರ್ವಾಣಿ, ರೇಣುಕಾ ಠಾಕೂರ್ ಸಿಂಗ್, ರಾಜೇಶ್ವರಿ ಗಾಯಕ್ವಾಡ್
ಬೆಂಚ್: ಸಬ್ಬಿನೇನಿ ಮೇಘನಾ, ಹರ್ಲೀನ್ ಡಿಯೋಲ್, ಯಾಸ್ತಿಕಾ ಭಾಟಿಯಾ, ಮೇಘನಾ ಸಿಂಗ್

ಆಸ್ಟ್ರೇಲಿಯಾ: ಅಲಿಸ್ಸಾ ಹೀಲಿ (ನಾಯಕಿ & ವಿಕೆಟ್ ಕೀಪರ್), ಬೆತ್ ಮೂನಿ, ತಹ್ಲಿಯಾ ಮೆಕ್‌ಗ್ರಾತ್, ಆಶ್ಲೀ ಗಾರ್ಡ್ನರ್, ಎಲ್ಲಿಸ್ ಪೆರ್ರಿ, ಗ್ರೇಸ್ ಹ್ಯಾರಿಸ್, ಅನ್ನಾಬೆಲ್ ಸದರ್ಲ್ಯಾಂಡ್, ನಿಕೋಲಾ ಕ್ಯಾರಿ, ಅಲಾನಾ ಕಿಂಗ್, ಮೇಗನ್ ಶುಟ್, ಡಾರ್ಸಿ ಬ್ರೌನ್
ಬೆಂಚ್: ಅಮಂಡಾ ವೆಲ್ಲಿಂಗ್ಟನ್, ಫೋಬೆ ಲಿಚ್ಫೀಲ್ಡ್, ಹೀದರ್ ಗ್ರಹಾಂ, ಕಿಮ್ ಗಾರ್ತ್

Story first published: Wednesday, December 14, 2022, 19:26 [IST]
Other articles published on Dec 14, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X