Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind W vs Aus W: 4ನೇ ಟಿ20 ಪಂದ್ಯ, ಟಾಸ್ ವರದಿ ಹಾಗೂ ಆಡುವ ಬಳಗ

India Women vs Australia Women: 4th t20, Toss report and playing XI details

ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ತಂಡಗಳ ಐದು ಪಂದ್ಯಗಳ ಟಿ20 ಸರಣಿ ನಡೆಯತ್ತಿದೆ. ಮುಂಬೈನಲ್ಲಿ ಇಂದು ನಾಲ್ಕನೇ ಪಂದ್ಯ ಆರಂಭವಾಗಿದ್ದು ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಿದೆ. ಈ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆಸಿಸ್ ವನಿತೆಯರು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿದೆ. ಹರ್ಲಿನ್ ಡಿಯೋಲ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದು ರಾಜೇಶ್ವರಿ ಗಾಯಕ್ವಾಡ್ ಆಡುವ ಬಳಗದಿಂದ ಹೊರಗುಳಿದಿದ್ದಾರೆ. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡದಲ್ಲಿಯೂ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ.

ಇನ್ನು ಈ ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಭಾರತ ಒಂದು ಪಂದ್ಯದಲ್ಲಿ ಮಾತ್ರವೇ ಗೆಲುವು ಕಂಡಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ 9 ವಿಕೆಟ್‌ಗಳ ಅಂತರದ ಅಮೋಘ ಗೆಲುವು ಸಾಧಿಸಿದರೆ ಎರಡನೇ ಪಂದ್ಯ ಟೈನಲ್ಲಿ ಅಂತ್ಯವಾಗಿತ್ತು. ಹೀಗಾಗಿ ಸೂಪರ್ ಓವರ್‌ನಲ್ಲಿ ಭಾರತೀಯ ಮಹಿಳಾ ತಂಡ ಗೆಲುವು ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 21 ರನ್‌ಗಳ ಅಂತರದ ಗೆಲುವು ಸಾಧಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಹಾಗಾಗಿ ಈ ಪಂದ್ಯದಲ್ಲಿ ಭಾರತ ಗೆದ್ದು ಸರಣಿ ಸಮಬಲಗೊಳಿಸುವ ಒತ್ತಡದಲ್ಲಿದೆ.

ಭಾರತ ತಂಡ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ದೇವಿಕಾ ವೈದ್ಯ, ರಿಚಾ ಘೋಷ್ (ವಿಕೆಟ್ ಕೀಪರ್), ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ರಾಧಾ ಯಾದವ್, ಅಂಜಲಿ ಸರ್ವಾಣಿ, ರೇಣುಕಾ ಠಾಕೂರ್ ಸಿಂಗ್
ಬೆಂಚ್: ಸಬ್ಬಿನೇನಿ ಮೇಘನಾ, ಮೇಘನಾ ಸಿಂಗ್, ಯಾಸ್ತಿಕಾ ಭಾಟಿಯಾ, ರಾಜೇಶ್ವರಿ ಗಾಯಕ್ವಾಡ್

ಆಸ್ಟ್ರೇಲಿಯಾ ಆಡುವ ಬಳಗ: ಅಲಿಸ್ಸಾ ಹೀಲಿ (ನಾಯಕಿ & ವಿಕೆಟ್ ಕೀಪರ್), ಬೆತ್ ಮೂನಿ, ತಹ್ಲಿಯಾ ಮೆಕ್‌ಗ್ರಾತ್, ಎಲ್ಲಿಸ್ ಪೆರ್ರಿ, ಆಶ್ಲೀ ಗಾರ್ಡ್ನರ್, ಗ್ರೇಸ್ ಹ್ಯಾರಿಸ್, ಅನ್ನಾಬೆಲ್ ಸದರ್‌ಲ್ಯಾಂಡ್, ಹೀದರ್ ಗ್ರಹಾಂ, ಅಲಾನಾ ಕಿಂಗ್, ಮೇಗನ್ ಶುಟ್, ಡಾರ್ಸಿ ಬ್ರೌನ್
ಬೆಂಚ್: ಅಮಂಡಾ ವೆಲ್ಲಿಂಗ್ಟನ್, ಫೋಬೆ ಲಿಚ್ಫೀಲ್ಡ್, ಕಿಮ್ ಗಾರ್ತ್, ನಿಕೋಲಾ ಕ್ಯಾರಿ

Story first published: Saturday, December 17, 2022, 19:06 [IST]
Other articles published on Dec 17, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+