ಭಾರತ vs ಇಂಗ್ಲೆಂಡ್ ಮಹಿಳಾ ಟಿ20 ಸರಣಿ: ಮೊದಲ ಪಂದ್ಯದ ಸಂಪೂರ್ಣ ಮಾಹಿತಿ

ನಾರ್ಥಾಂಪ್ಟನ್, ಜುಲೈ 8: ಟೆಸ್ಟ್ ಹಾಗೂ ಏಕದಿನ ಸರಣಿಯ ನಂತರ ಭಾರತ ಹಾಗೂ ಇಂಗ್ಲೆಂಡ್ ಮಹಿಳೆಯರ ತಂಡ ಚುಟುಕು ಕ್ರಿಕೆಟ್‌ನಲ್ಲಿ ಮುಖಾಮುಖಿಯಾಗಲು ಸಜ್ಜಾಗಿವೆ. ಮೂರು ಪಂದ್ಯಗಳ ಟಿ20 ಸರಣಿ ಇದಾಗಿದ್ದು ಶುಕ್ರವಾರ ಮೊದಲ ಪಂದ್ಯ ನಡೆಯಲಿದೆ.

ಇಂಗ್ಲೆಂಡ್ ವಿರುದ್ಧದ ಒಂದು ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ಭಾರತ ಇಂಗ್ಲೆಂಡ್‌ಗೆ 1-2 ಅಂತರದಿಂದ ಶರಣಾಗಿತ್ತು. ಏಕದಿನ ಸರಣಿಯಲ್ಲಿ ಭಾರತದ ಬ್ಯಾಟಿಂಗ್ ವಿಭಾಗ ನೀರಸ ಪ್ರದರ್ಶನವನ್ನು ನೀಡಿತ್ತು. ಏಕದಿನ ಸರಣಿಯಲ್ಲಿ ಮಾಡಿದ ತಪ್ಪುಗಳನ್ನು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸರಿ ಮಾಡಿಕೊಂಡರೆ ಮಾತ್ರವೇ ಭಾರತದ ವನಿತೆಯರ ತಂಡಕ್ಕೆ ಚುಟುಕು ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವನಿತೆಯರ ವಿರುದ್ಧ ಮೇಲುಗೈ ಸಾಧಿಸುವ ಅವಕಾಶ ದೊರೆಯಲಿದೆ.

ಎಂಎಸ್ ಧೋನಿ ಹುಟ್ಟುಹಬ್ಬ: ಮಾಹಿ ಕ್ರಿಕೆಟ್ ಜೀವನದ ಐದು ಸ್ಮರಣೀಯ ಇನ್ನಿಂಗ್ಸ್‌ಗಳ ಮೆಲುಕುಎಂಎಸ್ ಧೋನಿ ಹುಟ್ಟುಹಬ್ಬ: ಮಾಹಿ ಕ್ರಿಕೆಟ್ ಜೀವನದ ಐದು ಸ್ಮರಣೀಯ ಇನ್ನಿಂಗ್ಸ್‌ಗಳ ಮೆಲುಕು

ಇನ್ನು ಮತ್ತೊಂದು ಪ್ರಮುಖ ಅಂಶವೆಂದರೆ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರವಾಗಿ ಅದ್ಭುತ ಪ್ರದರ್ಶನ ನೀಡಿದ ಅನುಭವಿಗಳಾದ ಮಿಥಾಲಿ ರಾಜ್ ಹಾಗೂ ಜೂಲನ್ ಗೋಸ್ವಾಮಿ ಟಿ20 ಸರಣಿ ಭಾಗವಾಗಿಲ್ಲ. ಹೀಗಾಗಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡದ ಮುಂದೆ ದೊಡ್ಡ ಸವಾಲಿದೆ.

ಸ್ವತಃ ನಾಯಕಿ ಹರ್ಮನ್‌ಪ್ರೀತ್ ಕೌರ್ 2018ರ ನವೆಂಬರ್ ನಂತರ ಚುಟುಕು ಕ್ರಿಕೆಟ್‌ನಲ್ಲಿ ಅರ್ಧ ಶತಕವನ್ನು ದಾಖಲಿಸಿಲ್ಲ. ಈ ಸರಣಿಯಲ್ಲಿ ಜವಾಬ್ಧಾರಿಯುತ ಪ್ರದರ್ಶನವನನ್ಉ ನಾಯಕಿಯಿಂದ ನಿರೀಕ್ಷಿಸಲಾಗುತ್ತಿದೆ. ಇನ್ನು ಆರಂಭಿಕರಾದ ಶಫಾಲಿ ವರ್ಮ ಹಾಗೂ ಸ್ಮೃತಿ ಮಂಧಾನ ಉತ್ತಮ ಲಯದಲ್ಲಿದ್ದಾರೆ. ಆದರೆ ಸ್ಥಿರ ಪ್ರದರ್ಶನದ ಕೊರತೆ ತಂಡಕ್ಕೆ ಕಾಡುತ್ತಿದೆ. ಇನ್ನು ಈ ಇಂಗ್ಲೆಂಡ್‌ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಸ್ನೇಹ್ ರಾಣಾ 2016ರ ಫೆಬ್ರವರಿ ಬಳಿಕ ತಮ್ಮ ಮೊದಲ ಟಿ20 ಪಂದ್ಯವನ್ನು ಆಡಲು ಸಜ್ಜಾಗಿದ್ದಾರೆ.

ಭಾರತ ಮಹಿಳೆಯರ ಸಂಪೂರ್ಣ ಸ್ಕ್ವಾಡ್: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ಶಫಾಲಿ ವರ್ಮಾ, ರಿಚಾ ಘೋಷ್, ಹರ್ಲೀನ್ ಡಿಯೋಲ್, ಸ್ನೇಹ್ ರಾಣಾ, ತಾನಿಯಾ ಭಾಟಿಯಾ, ಇಂದ್ರಾನಿ ರಾಯ್, ಶಿಖಾ ಪಾಂಡೆ, ಪೂಜಾ ವಸ್ತ್ರಕರ್, ಅರುಂಧತಿ ರೆಡ್ಡಾ , ಸಿಮರನ್ ದಿಲ್ ಬಹದ್ದೂರ್.

ಇಂಗ್ಲೆಂಡ್ ಮಹಿಳೆಯರ ಸಂಪೂರ್ಣ ಸ್ಕ್ವಾಡ್: ಹೀದರ್ ನೈಟ್ (ನಾಯಕಿ), ಟಮ್ಮಿ ಬ್ಯೂಮಾಂಟ್, ಕ್ಯಾಥರೀನ್ ಬ್ರಂಟ್, ಫ್ರೇಯಾ ಡೇವಿಸ್, ಸೋಫಿಯಾ ಡಂಕ್ಲೆ, ಸೋಫಿ ಎಕ್ಲೆಸ್ಟೋನ್, ಟ್ಯಾಶ್ ಫಾರ್ರಂಟ್, ಸಾರಾ ಗ್ಲೆನ್, ಆಮಿ ಜೋನ್ಸ್, ನ್ಯಾಟ್ ಸ್ಕಿವರ್, ಅನ್ಯಾ ಶ್ರಬ್ಸೋಲ್, ಮ್ಯಾಡಿ ವಿಲಿಯರ್ಸ್, ಫ್ರಾನ್ ವಿಲ್ಸನ್, ಡ್ಯಾನಿ ವ್ಯಾಟ್.

ನೇರಪ್ರಸಾರದ ಮಾಹಿತಿ:

ಪಂದ್ಯದ ದಿನಾಂಕ: 9/7/2021
ಪಂದ್ಯದ ಸಮಯ: ಭಾರತೀಯ ಕಾಲಮಾನ ರಾತ್ರಿ 11 ಗಂಟೆ
ನೇರಪ್ರಸಾರ: ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್
ಲೈವ್ ಸ್ಟ್ರೀಮಿಂಗ್: ಸೋನಿ ಲಿವ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Thursday, July 8, 2021, 18:11 [IST]
Other articles published on Jul 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X