Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮಹಿಳಾ ಕ್ರಿಕೆಟ್: ಭಾರತ vs ಶ್ರೀಲಂಕಾ 2ನೇ ಟಿ20 ಪಂದ್ಯದ ಟಾಸ್ ವರದಿ & ಆಡುವ ಬಳಗ

India women vs Sri Lanka women 2nd T20I toss report, playing 11 and live score

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿದ್ದ ಮಿಥಾಲಿ ರಾಜ್ ನಾಯಕತ್ವದಿಂದ ಕೆಳಗಿಳಿದ ನಂತರ ಭಾರತ ಮಹಿಳಾ ಕ್ರಿಕೆಟ್ ತಂಡ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, ಆತಿಥೇಯ ಶ್ರೀಲಂಕಾ ಮಹಿಳಾ ಕ್ರಿಕೆಟ್‍ ತಂಡದ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಗಳಲ್ಲಿ ಕಣಕ್ಕಿಳಿದಿದೆ.

ಇತ್ತಂಡಗಳ ನಡುವೆ ಮೊದಲಿಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭಗೊಂಡಿದ್ದು, ದಂಬುಲಾದ ರಣಗಿರಿ ದಂಬುಲಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಶ್ರೀಲಂಕಾ ಮಹಿಳಾ ತಂಡದ ವಿರುದ್ಧ ಭಾರತೀಯ ವನಿತೆಯರ ತಂಡ 34 ರನ್‌ಗಳ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ ಗೆಲುವಿನ ಖಾತೆ ತೆರೆದು 1-0 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಹೀಗೆ ತವರಿನಲ್ಲಿ ಪ್ರವಾಸಿ ಭಾರತ ತಂಡದ ವಿರುದ್ಧ ಸೋತಿರುವ ಶ್ರೀಲಂಕಾ ವನಿತೆಯರು ದ್ವಿತೀಯ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದ್ದು ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಇತ್ತಂಡಗಳ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯ ಇಂದು ( ಜೂನ್ 25 ) ಶ್ರೀಲಂಕಾ ದಂಬುಲಾದ ರಣ್ ಗಿರಿಯ ದಂಬುಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಭಾರತೀಯ ವನಿತೆಯರ ತಂಡದ ಆಡುವ ಬಳಗ

ಭಾರತೀಯ ವನಿತೆಯರ ತಂಡದ ಆಡುವ ಬಳಗ

ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್‌), ಜೆಮಿಮಾ ರೋಡ್ರಿಗಸ್, ಹರ್ಮನ್ಪ್ರೀತ್ ಕೌರ್ (ನಾಯಕಿ), ಸಬ್ಬಿನೇನಿ ಮೇಘನಾ, ದೀಪ್ತಿ ಶರ್ಮಾ, ಸಿಮ್ರಾನ್ ಬಹದ್ದೂರ್, ಪೂಜಾ ವಸ್ತ್ರಾಕರ್, ರೇಣುಕಾ ಸಿಂಗ್ ಮತ್ತು ರಾಧಾ ಯಾದವ್

ಶ್ರೀಲಂಕಾ ವನಿತೆಯರ ತಂಡದ ಆಡುವ ಬಳಗ

ಶ್ರೀಲಂಕಾ ವನಿತೆಯರ ತಂಡದ ಆಡುವ ಬಳಗ

ವಿಶ್ಮಿ ಗುಣರತ್ನೆ, ಚಾಮರಿ ಅಟಾಪಟ್ಟು(ನಾಯಕಿ), ಹರ್ಷಿತಾ ಮಾದವಿ, ಹಾಸಿನಿ ಪೆರೇರಾ, ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಅನುಷ್ಕಾ ಸಂಜೀವನಿ (ವಿಕೆಟ್ ಕೀಪರ್‌), ಓಷದಿ ರಣಸಿಂಗ್, ಸುಗಂದಿಕಾ ಕುಮಾರಿ, ಇನೋಕಾ ರಣವೀರ, ಉದೇಶಿಕಾ ಪ್ರಬೋಧನಿ

ನೇರಪ್ರಸಾರದ ಮಾಹಿತಿ

ನೇರಪ್ರಸಾರದ ಮಾಹಿತಿ

ಭಾರತ ವನಿತೆಯರ ತಂಡ ಹಾಗೂ ಶ್ರೀಲಂಕಾ ವನಿತೆಯರ ತಂಡಗಳ ನಡುವಿನ ಈ ದ್ವಿತೀಯ ಟಿ ಟ್ವೆಂಟಿ ಪಂದ್ಯವನ್ನು ಭಾರತದಲ್ಲಿ ಫ್ಯಾನ್ ಕೋಡ್ ಅಪ್ಲಿಕೇಶನ್‌ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದಾಗಿದೆ.

Story first published: Saturday, June 25, 2022, 17:57 [IST]
Other articles published on Jun 25, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+