Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಲಾರ್ಡ್ಸ್‌ನಲ್ಲಿ ಇತಿಹಾಸ ಬರೆದ ಭಾರತ; ಇಂಗ್ಲೆಂಡ್‌ 270 ರನ್‌ ಸೋಲು

ಭಾರತ ಮಹಿಳಾ ತಂಡ ಲಾರ್ಡ್ಸ್‌ ಅಂಗಳದಲ್ಲಿ ನಡೆದ ಏಕೈಕ ಟೆಸ್ಟ್‌ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಇಂಗ್ಲೆಂಡ್‌ ಮಹಿಳಾ ತಂಡದ ವಿರುದ್ಧದ ಐತಿಹಾಸಿಕ ಟೆಸ್ಟ್‌ ಪಂದ್ಯದಲ್ಲಿ ಭಾರತ 270 ರನ್‌ ಗೆಲುವಿನ ನಗೆ ಬೀರಿದೆ.

ಸೋಮವಾರ ಎರಡನೇ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್‌ 6 ವಿಕೆಟ್‌ಗೆ 130 ರನ್‌ಗಳಿಂದ ಆಟ ಮುಂದುವರಿಸಿತು. ಆಮಿ ಜೋನ್ಸ್ ನಾಲ್ಕನೇ ದಿನದಾಟದಲ್ಲಿ ಕೇವಲ 2 ರನ್‌ ಸೇರಿಸಿ 54 ರನ್‌ಗಳಿಗೆ ವಿಕೆಟ್‌ ಒಪ್ಪಿಸಿದರು. ಮಧ್ಯಮ ಕ್ರಮಾಂಕದ ಭರವಸೆಯ ಆಟಗಾರ್ತಿ ಸೋಫಿ ಎಕ್ಲೆಸ್ಟೋನ್ 66 ಎಸೆತಗಳಲ್ಲಿ 6 ಬೌಂಡರಿ ನೆರವಿನಿಂದ 50 ರನ್‌ ಬಾರಿಸಿ ಔಟ್ ಆದರು. ಉಳಿದಂತೆ ಕೆಳ ಕ್ರಮಾಂಕದಲ್ಲಿ ಆಟಗಾರ್ತಿಯರು ರನ್‌ ಕಲೆ ಹಾಕುವಲ್ಲಿ ಎಡವಿದರು.

India Women s Create History

ಅಂತಿಮವಾಗಿ ಇಂಗ್ಲೆಂಡ್‌ ತಂಡ ಎರಡನೇ ಇನಿಂಗ್ಸ್‌ನಲ್ಲಿ 62.5 ಓವರ್‌ಗಳಲ್ಲಿ 186 ರನ್‌ಗಳಿಗೆ ಆಲೌಟ್ ಆಯಿತು. ಎರಡನೇ ಇನಿಂಗ್ಸ್‌ನಲ್ಲಿ ಭಾರತದ ಪರ ಸ್ನೇಹಾ ರಾಣಾ ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ತಂಡಕ್ಕೆ ಆಧಾರವಾದರು. ಇವರು 42 ರನ್‌ ನೀಡಿ 4 ವಿಕೆಟ್‌ ಕಬಳಿಸಿದರು. ಉಳಿದಂತೆ ಕ್ರಾಂತಿ ಗೌಡ, ಸಯಾಲಿ ಸತ್ಘರೆ ತಲಾ 2 ವಿಕೆಟ್‌ ಪಡೆದರು.

22 ವರ್ಷದ ಯುವ ವೇಗದ ಬೌಲರ್‌ ಕ್ರಾಂತಿ ಗೌಡ ಅವರು ಬಿಗುವಿನ ದಾಳಿ ನಡೆಸಿ ಅಬ್ಬರಿಸಿದರು. ಇವರು ಮೊದಲ ಇನಿಂಗ್ಸ್‌ನಲ್ಲಿ 5 ಹಾಗೂ ಎರಡನೇ ಇನಿಂಗ್ಸ್‌ನಲ್ಲಿ 2 ವಿಕೆಟ್‌ ಕಬಳಿಸಿದ ಪರಿಣಾಮ ಇವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದೆ. ಭಾರತ ತಂಡವು ಬ್ಯಾಟಿಂಗ್ ಮತ್ತು ಬೌಲಿಂಗ್‌ ಎರಡರಲ್ಲೂ ಅತ್ಯುತ್ತಮ ಪ್ರದರ್ಶನವನ್ನು ನೀಡಿ ಲಾರ್ಡ್ಸ್‌ನಲ್ಲಿ ಹೊಸ ದಾಖಲೆಯನ್ನು ಸ್ಥಾಪಿಸಿತು.

ಪಂದ್ಯದ ಚಿತ್ರಣ

ಟಾಸ್‌ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 285 ರನ್‌ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್‌ನಲ್ಲಿ ಸ್ಮೃತಿ 83, ಹರ್ಮನ್‌ಪ್ರೀತ್ ಕೌರ್‌ 58, ದೀಪ್ತಿ ಶರ್ಮಾ 57 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಮೊದಲ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್‌ 170 ರನ್‌ಗಳಿಗೆ ಸರ್ವಪತನ ಕಂಡಿತು. ಇಂಗ್ಲೆಂಡ್‌ ಪರ ನ್ಯಾಟ್ ಸ್ಕೀವರ್-ಬ್ರಂಟ್ 44 ಹಾಗೂ ಆಮಿ ಜೋನ್ಸ್ 52 ರನ್‌ ಸಿಡಿಸಿದರು. ಎರಡನೇ ಇನಿಂಗ್ಸ್‌ನಲ್ಲಿ ಭಾರತದ ಆರಂಭಿಕ ಆಟಗಾರ್ತಿ 70 ರನ್‌ ಬಾರಿಸಿದರೆ, ಯಾಸ್ತಿಕಾ ಭಾಟಿಯಾ 113 ರನ್‌ ಬಾರಿಸಿದರು. ಪರಿಣಾಮ ಭಾರತ 341 ರನ್‌ಗೆ 7 ವಿಕೆಟ್‌ ಕಳೆದುಕೊಂಡಿದ್ದಾಗ ಡಿಕ್ಲೇರ್ ಮಾಡಿಕೊಂಡಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಬ್ಯಾಟರ್‌ಗಳು ಎರಡನೇ ಇನಿಂಗ್ಸ್‌ ಜವಾಬ್ದಾರಿ ಮರೆತಿದ್ದರಿಂದ ಸೋಲು ಕಂಡಿತು.

Story first published: Monday, July 13, 2026, 18:56 [IST]
Other articles published on Jul 13, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+