Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮಹಿಳಾ ಕ್ರಿಕೆಟ್‌ ಪಾಲಿಗೆ ಸ್ಮರಣೀಯ ವರ್ಷ

ಟೀಮ್ ಇಂಡಿಯಾದ ಅಭಿಮಾನಿಗಳ ಪಾಲಿಗೆ ಈ ವರ್ಷ ಸ್ಮರಣೀಯವಾಗಿದೆ. ಟೀಮ್ ಇಂಡಿಯಾ ಮಹಿಳಾ ತಂಡ ಈ ಹಿಂದೆ ಮಾಡದ ಸಾಧನೆಯನ್ನು ಈ ಬಾರಿ ಮಾಡಿ ಬೀಗಿದೆ. ಇಷ್ಟು ವರ್ಷಗಳ ಕಾಲ ಮಾಯಾಜಿಂಕೆಯಂತೆ ಕಾಡಿದ್ದ ಏಕದಿನ ವಿಶ್ವಕಪ್‌ಗೆ ಹರ್ಮನ್ ಪ್ರೀತ್‌ ಪಡೆ ಮುತ್ತಿಟ್ಟು ಇತಿಹಾಸ ನಿರ್ಮಿಸಿದೆ. ಟೂರ್ನಿಯಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿದೆ.

ಭಾರತ ಈ ಟೂರ್ನಿಯಲ್ಲಿ ಕಪ್‌ ಗೆಲ್ಲುವ ಹಾಟ್‌ ಫೆವರೀಟ್ ತಂಡ ಎಂದೇ ಬಿಂಬಿಸಲಾಗಿತ್ತು. ಆದರೆ ಲೀಗ್‌ ಹಂತದಲ್ಲಿ ತಂಡ ಆರಂಭಿಕ 2 ಪಂದ್ಯಗಳನ್ನು ಗೆದ್ದು, ಬಳಿಕ ಹ್ಯಾಟ್ರಿಕ್ ಸೋಲಿನ ಕಹಿಯನ್ನು ಕಂಡಿತ್ತು. ಈ ವೇಳೆ ಅಭಿಮಾನಿಗಳು ಕೊಂಚ ನಿರಾಸೆಗೊಂಡಿದ್ದರು. ಆದರೆ ಬಳಿಕ ಭರ್ಜರಿ ಕಂ ಬ್ಯಾಕ್ ಮಾಡಿದ ತಂಡ ಅಮೋಘ ಪ್ರದರ್ಶನ ನೀಡಿ ಒಂದೊಂದೆ ಗೆಲುವಿನ ಮೆಟ್ಟಿಲನ್ನು ಹತ್ತುತ್ತಾ ಸಾಗಿತು. ಲೀಗ್‌ ಹಂತದಲ್ಲಿ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದ ಭಾರತ, ಸೆಮಿಫೈನಲ್ ಹಂತವನ್ನು ಪ್ರವೇಶಿಸಿತು. ಉಪಾಂತ್ಯ ಪಂದ್ಯದಲ್ಲಿ ಭಾರತಕ್ಕೆ ಈ ಬಾರಿ ಕಠಿಣ ಸವಾಲು ಎದುರಾಗಿತ್ತು.

India Women s Cricket Team Clinches Historic Maiden ODI World Cup Title

ಸೆಮೀಸ್‌ ಪಂದ್ಯದಲ್ಲಿ ಭಾರತ ದಾಖಲೆ ಬಾರಿ ಏಕದಿನ ವಿಶ್ವಕಪ್‌ ಗೆದ್ದಿದ್ದ ಆಸ್ಟ್ರೇಲಿಯಾ ವಿರುದ್ಧ ಹೋರಾಟವನ್ನು ನಡೆಸಿತು. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್‌ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಈ ವೇಳೆ ಫೋಬೆ ಲಿಚ್‌ಫೀಲ್ಡ್ ಬಾರಿಸಿದ ಶತಕದ ಸಹಾಯದಿಂದ ಆಸೀಸ್‌, 49.5 ಓವರ್‌ಗಳಲ್ಲಿ 338 ರನ್‌ಗಳಿಗೆ ಆಲೌಟ್ ಆಯಿತು. ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 59 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. 3ನೇ ವಿಕೆಟ್‌ಗೆ ಜೆಮಿಮಾ ರೋಡ್ರಿಗಸ್ ಹಾಗೂ ಹರ್ಮನ್ ಪ್ರೀತ್ ಕೌರ್ ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದರು. ಹರ್ಮನ್‌ 89 ರನ್‌ಗಳಿಗೆ ಔಟ್ ಆದರು. ಆದರೆ ಜೆಮಿಮಾ ತಂಡಕ್ಕೆ ಜಯದ ಮಾಲೆ ತೊಡಿಸುವವೆಗೂ ಕ್ರೀಸ್‌ ಕಚ್ಚಿನಿಂತರು. ಭಾರತ 48.3 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 341 ರನ್‌ ಸೇರಿಸಿ ಜಯ ಸಾಧಿಸಿ ಫೈನಲ್‌ ಪ್ರವೇಶಿಸಿತು.

ದಕ್ಷಿಣ ಆಫ್ರಿಕಾ ಸವಾಲು ಗೆದ್ದ ಭಾರತ

ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಹರ್ಮನ್ ಪ್ರೀತ್ ಪಡೆ ಅಮೋಘ ಪ್ರದರ್ಶನ ನೀಡಿತು. ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 298 ರನ್‌ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 45.3 ಓವರ್‌ಗಳಲ್ಲಿ 246 ರನ್‌ಗಳಿಗೆ ಆಲೌಟ್ ಆಯಿತು. ಡಿವೈ ಪಾಟೀಲ್‌ ಮೈದಾನದಲ್ಲಿ ಭಾರತ ಚೊಚ್ಚಲ ಬಾರಿಗೆ ಮಹಿಳಾ ಏಕದಿನ ವಿಶ್ವಕಪ್ ಗೆದ್ದ ಸಾಧನೆ ಮಾಡಿತು. ಟೂರ್ನಿಯುದ್ದಕ್ಕೂ ಶ್ರೇಷ್ಠ ಪ್ರದರ್ಶನ ನೀಡಿದ ದೀಪ್ತಿ ಶರ್ಮಾ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದು ಬೀಗಿದರು.

Story first published: Monday, December 8, 2025, 13:34 [IST]
Other articles published on Dec 8, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+