ಭಾರತದ ಮಹಿಳಾ ತಂಡ ಮೈದಾನಕ್ಕೆ ಇಳಿಯುವುದು ಯಾವಾಗ?
ಭಾರತದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ಮುಗಿದಿದೆ. ಭಾನುವಾರ ತಡ ರಾತ್ರಿ ನವಿ ಮುಂಬೈನ ಡಿವೈ ಪಾಟೀಲ್ ಅಂಗಳದಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ 52 ರನ್‌ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಅಬ್ಬರಿಸಿದೆ. ಟೀಮ್ ಇಂಡಿಯಾದ ವನಿತೆಯರು ಟೂರ್ನಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿದೆ. ಈ ಗೆಲುವಿನ ಬಳಿಕ ಟೀಮ್ ಇಂಡಿಯಾದ ಅಭಿಮಾನಿಗಳ ಮನಸ್ಸಿನಲ್ಲಿ ಮೂಡುವುದ ಒಂದೇ ಪ್ರಶ್ನೆ, ಇನ್ನು ಟೀಮ್ ಇಂಡಿಯಾ ಮೈದಾನಕ್ಕೆ ಇಳಿಯುವುದು ಯಾವಾಗ ಎಂಬ ಪ್ರಶ್ನೆ ಉದ್ಭವಿಸಿದೆ.
ಮಹಿಳಾ ಏಕದಿನ ವಿಶ್ವಕಪ್ ಬಳಿಕ ಭಾರತ ತಂಡ ಒಂದು ದೊಡ್ಡ ವಿರಾಮದ ಬಳಿಕ ಮೈದಾನಕ್ಕೆ ಇಳಿಯಲಿದೆ. ಇನ್ನು ಭಾರತ ಮಹಿಳಾ ತಂಡದ ಆಟಗಾರ್ತಿಯರು ಮುಂದಿನ ವರ್ಷ ಫೆಬ್ರವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕೆ ಇಳಿಯಲಿದೆ. ಈ ಸರಣಿಯಲ್ಲಿ ಆಡಲು ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ 3 ಟಿ20, 3 ಏಕದಿನ ಪಂದ್ಯಗಳು ನಡೆಯಲಿವೆ. ಅಲ್ಲದೆ ಇದೇ ವೇಳೆ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ.

ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಮೊದಲು ಟಿ20 ಸರಣಿಯನ್ನು ಆಡಲಿದೆ. ಈ ಸರಣಿ ಫೆ.15 ರಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಸಿಡ್ನಿಯಲ್ಲಿ ನಡೆಯಲಿದೆ. ಇನ್ನು ಎರಡನೇ ಪಂದ್ಯ ಫೆ.21 ರಂದು ಕ್ಯಾನ್‌ಬೆರಾದಲ್ಲಿ, 3ನೇ ಪಂದ್ಯ ಫೆ.21 ರಂದು ಆಡಿಲೇಡ್‌ನಲ್ಲಿ ನಡೆಯಲಿದೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಏಕದಿನ ಸರಣಿಯನ್ನು ಆಡಲಿದೆ. ಮೊದಲ ಪಂದ್ಯ ಫೆ.24 ರಂದು ಬ್ರಿಸ್ಬೇನ್‌ನಲ್ಲಿ, 2ನೇ ಪಂದ್ಯ ಫೆ.27 ರಂದು ಹೋಬಾರ್ಟ್‌ನಲ್ಲಿ, 3ನೇ ಪಂದ್ಯ ಮಾರ್ಚ್ 1 ರಂದು ಆಡಲಿದೆ. ಇನ್ನು ಈ ಪ್ರವಾಸದಲ್ಲಿ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯ ಮಾರ್ಚ್ 6 ರಂದು ಪರ್ತ್‌ನಲ್ಲಿ ನಡೆಯಲಿದೆ.
ಟಿ20 ವಿಶ್ವಕಪ್
ಆಸ್ಟ್ರೇಲಿಯಾ ಪ್ರವಾಸದ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಮಾಡಲಿದೆ. ಈ ವೇಳೆ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಮೇ 28 ರಿಂದ ಜೂನ್ 2ರ ವರೆಗೆ ನಡೆಯಲಿದೆ. ಈ ಸರಣಿಯ ಬಳಿಕ ಇಂಗ್ಲೆಂಡ್‌ನಲ್ಲೇ ಟಿ20 ವಿಶ್ವಕಪ್ ನಡೆಯಲಿದ್ದು, ಜೂನ್ 14 ರಂದು ಪಾಕ್ ವಿರುದ್ಧ ಹರ್ಮನ್ ಪ್ರೀತ್ ಕೌರ್ ಪಡೆ ಬರ್ಮಿಂಗ್‌ಹ್ಯಾಮ್‌ನಲ್ಲಿ ಹೋರಾಟ ನಡೆಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications