ನ್ಯೂಜಿಲೆಂಡ್ ಸರಣಿಗೆ ಭಾರತ ವನಿತೆಯರ ತಂಡ ಪ್ರಕಟ; ನಾಯಕತ್ವ ಬದಲಾವಣೆ ಇಲ್ಲ!
ಒಂದೆಡೆ ಭಾರತ ತಂಡ ನ್ಯೂಜಿಲೆಂಡ್‌ಗೆ ಟೆಸ್ಟ್ ಸರಣಿಯಲ್ಲಿ ಪೈಪೋಟಿ ನೀಡುತ್ತಿದೆ. ಮತ್ತೊಂದೆಡೆ ಭಾರತ ಮಹಿಳಾ ತಂಡ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ಮಹಿಳಾ ತಂಡವನ್ನು ಎದುರಿಸಲು ಸಿದ್ಧತೆ ನಡೆಸಿದೆ. ಈ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ಭಾರತ ವನಿತೆಯರ ತಂಡ ಮತ್ತು ನ್ಯೂಜಿಲೆಂಡ್ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಅಹಮದಾಬಾದ್‌ನಲ್ಲಿ ಅಕ್ಟೋಬರ್ 24, 27 ಮತ್ತು 29 ರಂದು ಈ ಸರಣಿಯನ್ನು ನಡೆಸಲು ಎಲ್ಲಾ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅಲ್ಲದೆ, ಈ ಸರಣಿಗೆ 16 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಾಗಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ತಂಡ ಕೀವಿಸ್ ಮಣಿಸಲು ಸಜ್ಜಾಗುತ್ತಿದೆ. ಆದರೆ ತಂಡದಿಂದ ಸ್ಟಾರ್ ಆಟಗಾರ್ತಿ ದೂರ ಸರಿದಿದ್ದಾರೆ.

ವಿಕೆಟ್‌ಕೀಪರ್-ಬ್ಯಾಟರ್ ರಿಚಾ ಘೋಷ್ ಅವರ 12ನೇ ತರಗತಿ ಬೋರ್ಡ್ ಪರೀಕ್ಷೆಯಿಂದಾಗಿ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. 21 ವರ್ಷದ ಘೋಷ್ ಅವರು ತಂಡದ ಭರವಸೆ ಆಟಗಾರರಾಗಿದ್ದಾರೆ. ಅವರು ಕೇವಲ 16 ವರ್ಷ ವಯಸ್ಸಿನವರಾಗಿದ್ದಾಗ 2020 ರಿಂದ ಭಾರತ ತಂಡದ ಪ್ರಮುಖ ಬ್ಯಾಟಿಂಗ್ ಭಾಗವಾಗಿದ್ದಾರೆ. ಇದಕ್ಕಾಗಿ ಬಿಸಿಸಿಐ ಕೂಡ ಘೋಷ್ ಅವರಿಗೆ ಪರೀಕ್ಷೆಗೆ ಹಾಜರಾಗಲು ರಜೆ ಮಂಜೂರು ಮಾಡಿದೆ.
ಯುಎಇನಲ್ಲಿ ನಡೆಯುತ್ತಿರುವ 2024ರ ಐಸಿಸಿ ಮಹಿಳಾ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಕನಸು ಭಗ್ನವಾಗಿತ್ತು. ಇದಕ್ಕೆ ಆರಂಭಿಕ ಪಂದ್ಯದಲ್ಲಿ ಕೀವಿಸ್ ಎದುರು ಅನುಭವಿಸಿದ ಸೋಲು ಭಾರತ ಟೂರ್ನಿಯಿಂದ ಹೊರಗುಳಿಯುವ ದಾರಿ ಮಾಡಿ ಕೊಟ್ಟಿತ್ತು. ಟೂರ್ನಿಯಿಂದ ಹೊರ ಬಿದ್ದ ನಂತರ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿದ್ದವು ಇದೀಗ ನ್ಯೂಜಿಲೆಂಡ್ ವಿರುದ್ಧ ಸೇಡಿನ ಸಮರಕ್ಕೆ ಹರ್ಮನ್‌ಪ್ರೀತ್ ಪಡೆ ತಯಾರಾಗುತ್ತಿದೆ. ಮತ್ತೊಂದೆಡೆ ಹರ್ಮನ್‌ಪ್ರೀತ್ ತಮ್ಮ ನಾಯಕತ್ವದಲ್ಲಿ ಈ ಸರಣಿಯನ್ನು ಗೆಲ್ಲಿಸಲು ಪಣ ತೊಟ್ಟಿದ್ದಾರೆ.
ಭಾರತ ಮಹಿಳಾ ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಡಿ ಹೇಮಲತಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಉಮಾ ಛೆಟ್ರಿ (ವಿಕೆಟ್‌ಕೀಪರ್), ಸಯಾಲಿ ಸತ್ಗರೆ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ತೇಜಲ್ ಹಸ್ಸಾಬ್ನಿಸ್, ಸೈಮಾ ಠಾಕೂರ್, ಪ್ರಿಯಾ ಮಿಶ್ರಾ, ರಾಧಾ ಯಾದವ್, ಶ್ರೇಯಾಂಕ ಪಾಟೀಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications