For Quick Alerts
ALLOW NOTIFICATIONS  
For Daily Alerts
 

ICC Rankings: ಟಾಪ್‌ 10ರಲ್ಲಿ ಸ್ಥಾನ ಪಡೆದ ಶೆಫಾಲಿ ವರ್ಮಾ: ಸ್ಮೃತಿಗೆ 3ನೇ ಸ್ಥಾನ

ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್‌ ಪಂದ್ಯಗಳು ನಡೆಯುತ್ತಿವೆ. ಇದೇ ವೇಳೆ ಟೀಮ್ ಇಂಡಿಯಾದ ವನಿತೆಯರು ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯನ್ನು ಆಡಿತು. ಈ ಸರಣಿಯಲ್ಲಿ ಟೀಮ ಇಂಡಿಯಾ 5 ಪಂದ್ಯಗಳ ಟಿ20 ಸರಣಿಯನ್ನು 3-2ರಿಂದ ಗೆದ್ದುಕೊಂಡಿದೆ. ಭಾರತದ ಆಟಗಾರ್ತಿಯರು ಈ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಪರಿಣಾಮ ಶ್ರೇಯಾಂಕದಲ್ಲೂ ಬಡ್ತಿ ಆಗಿದೆ.

ಟೀಮ್ ಇಂಡಿಯಾದ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಇವರು ಈ ಸರಣಿಯಲ್ಲಿ ಆಡಿದ 5 ಪಂದ್ಯಗಳಲ್ಲಿ 35ರ ಸರಾಸರಿಯಲ್ಲಿ 176 ರನ್‌ ಕಲೆ ಹಾಕಿದ್ದಾರೆ. ಇವರ ಈ ಅಮೋಘ ಪ್ರದರ್ಶನದ ಫಲವಾಗಿ ಇವರ ಶ್ರೇಯಾಂಕದಲ್ಲೂ ಬಡ್ತಿ ಆಗಿದೆ. ಇವರು ಸ್ಥಿರ ಪ್ರದರ್ಶನದ ಫಲವಾಗಿ ಇವರು ಟಾಪ್‌ 10ರಲ್ಲಿ ಸ್ಥಾನ ಪಡೆದಿದ್ದಾರೆ. ಇವರು ನಾಲ್ಕು ಸ್ಥಾನ ಏರಿಕೆ ಕಂಡಿದ್ದು, ಸದ್ಯ ಇವರು 655 ರೇಟಿಂಗ್ ಪಾಯಿಂಟ್‌ಗಳೊಂದಿಗೆ 9ನೇ ಸ್ಥಾನ ತಲುಪಿದ್ದಾರೆ.

India Women s T20I Triumph Shafali Verma Enters Top 10 Mandhana Solid at No 3

ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧನಾ ಸಹ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ. ಇವರು ಇಂಗ್ಲೆಂಡ್‌ ವಿರುದ್ಧದ ಸರಣಿಯಲ್ಲಿ 5 ಪಂದ್ಯಗಳಲ್ಲಿ 44ರ ಸರಾಸರಿಯಲ್ಲಿ 221 ರನ್‌ ಕಲೆ ಹಾಕಿದ್ದಾರೆ. ಇದರ ಪರಿಣಾಮವೇ ಇವರು 767 ಅಂಕಗಳೊಂದಿಗೆ ಮೂರನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಇನ್ನು ಆಸ್ಟ್ರೇಲಿಯಾದ ಬೆತ್ ಮೂನಿ 794 ಅಂಕಗಳೊಂದಿಗೆ ಅಗ್ರ ಸ್ಥಾನ ಪಡೆದಿದ್ದಾರೆ. ವೆಸ್ಟ್‌ ಇಂಡೀಸ್ ತಂಡದ ಸ್ಟಾರ್ ಆಟಗಾರ್ತಿ ಹ್ಯಾಲಿ ಮ್ಯಾಥ್ಯೂಸ್ 774 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿ ಭದ್ರವಾಗಿದ್ದಾರೆ.

ಟೀಮ್ ಇಂಡಿಯಾದ ಭರವಸೆಯ ಆಟಗಾರ್ತಿ ಜೆಮಿಮಾ ರೋಡ್ರಿಗಸ್ 625 ಅಂಕಗಳೊಂದಿಗೆ 14, ನಯಕಿ ಹರ್ಮನ್ ಪ್ರೀತ್ ಕೌರ್ 613 ಅಂಕಗಳೊಂದಿಗೆ 15ನೇ ಸ್ಥಾನದಲ್ಲಿದ್ದಾರೆ.

ರಾಧಾ ಯಾದವ್‌ಗೆ ಬಡ್ತಿ

ಮಹಿಳೆಯರ ಬೌಲಿಂಗ್ ಶ್ರೇಯಾಂಕದಲ್ಲೂ ಟೀಮ್ ಇಂಡಿಯಾ ವನಿತೆಯರು ಸ್ಥಿರ ಪ್ರದರ್ಶನ ನೀಡಿದ್ದಾರೆ. ಟೀಮ್ ಇಂಡಿಯಾದ ಸ್ಪಿನ್ ಬೌಲರ್‌ ದೀಪ್ತಿ ಶರ್ಮಾ ಶ್ರೇಯಾಂಕದಲ್ಲಿ ಒಂದು ಸ್ಥಾನ ಇಳಿಕೆ ಕಂಡಿದ್ದಾರೆ. ಇವರು 732 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಇನ್ನು ಪಾಕಿಸ್ತಾನದ ಸಾದಿಯಾ ಇಕ್ಬಾಲ್‌ 746 ಅಂಕಗಳೊಂದಿಗೆ ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್ಲ್ಯಾಂಡ್ 736 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಭಾರತದ ರೇಣುಕಾ ಸಿಂಗ್ ಠಾಕೂರ್ 5 ಸ್ಥಾನ ಕುಸಿತ ಕಂಡಿದ್ದು, 11ನೇ ಸ್ಥಾನದಲ್ಲಿದ್ದಾರೆ. ವೇಗದ ಬೌಲರ್‌ ರಾಧಾ ಯಾದವ್ ಇಂಗ್ಲೆಂಡ್ ಬ್ಯಾಟರ್‌ಗಳನ್ನು ಕಾಡಿದ್ದರು. ಪರಿಣಾಮ ಇವರ ಶ್ರೇಯಾಂಕದಲ್ಲಿ ಏರಿಕೆ ಆಗಿದೆ. ಇವರು ಮೂರು ಸ್ಥಾನ ಏರಿಕೆ ಕಂಡಿದ್ದು, 15 ಸ್ಥಾನಕ್ಕೆ ತಲುಪಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿ ಬುಧವಾರದಿಂದ ಆರಂಭವಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಸೌತಾಂಪ್ಟನ್ನಲ್ಲಿ ನಡೆಯಲಿದೆ.

Story first published: Tuesday, July 15, 2025, 23:47 [IST]
Other articles published on Jul 15, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+