Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs ENG 1st ODI: ಆಂಗ್ಲರ ಬೇಟೆಯಾಡಿದ ಟೀಮ್ ಇಂಡಿಯಾ

ನಾಗ್ಪುರದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಗೆದ್ದು ಬೀಗಿದೆ. ಅದ್ಭುತ ಪ್ರದರ್ಶನ ನೀಡಿದ ರೋಹಿತ್ ಶರ್ಮಾ ಮುನ್ನಡೆಸುತ್ತಿರುವ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇತ್ತ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ಟಿ20 ಬಳಿಕ ಏಕದಿನ ಸರಣಿ ಕಳೆದುಕೊಳ್ಳುವ ಭೀತಿಯಲ್ಲಿದೆ.

ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಭಾರತ ತಂಡದಿಂದ ಅತ್ಯುತ್ತಮ ಬೌಲಿಂಗ್ ಕಂಡುಬಂದಿದೆ. ಇದರಿಂದಾಗಿ ಇಂಗ್ಲೆಂಡ್ ತಂಡವು ಕೇವಲ 248 ರನ್‌ಗಳಿಗೆ ಆಲೌಟಾಯಿತು. 249 ರನ್‌ಗಳ ಗುರಿ ಬೆನ್ನಟ್ಟಿದ ಭಾರತ 6 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.

India won the first ODI against England

ಟೀಮ್ ಇಂಡಿಯಾ ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ ಮತ್ತು ಅಕ್ಸರ್ ಪಟೇಲ್ ಅರ್ಧಶತಕ ಸಿಡಿಸಿ ಮಿಂಚಿದರು. ಈ ಮೂವರ ಅರ್ಧಶತಕದ ನೆರವಿನಿಂದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಭಾರತ ಮಣಿಸಿದೆ. ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ಮತ್ತು ಹರ್ಷಿತ್ ರಾಣಾ ತಲಾ 3 ವಿಕೆಟ್ ಪಡೆದು ಮಿಂಚಿದರೆ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್ ಮತ್ತು ರ್ ಪಟೇಲ್ ತಲಾ 1 ವಿಕೆಟ್ ಪಡೆದರು.

ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿದರು. ಜೈಸ್ವಾಲ್ ತಮ್ಮ ಚೊಚ್ಚಲ ಪಂದ್ಯದಲ್ಲಿ 15 ರನ್ ಗಳಿಸಿದರೆ, ಹಿಟ್‌ಮ್ಯಾನ್ (2) ತಮ್ಮ ಕಳಪೆ ಪ್ರದರ್ಶನವನ್ನು ಮುಂದುವರಿಸಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ಶುಭಮನ್ ಗಿಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು.

ಮತ್ತೊಂದೆಡೆ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ ಇಂಗ್ಲೆಂಡ್ ತಂಡದ ಬೌಲರ್‌ಗಳಿಗೆ ಬೆವರಿಳಿಸಿದರು. ಶ್ರೇಯಸ್ ಅಯ್ಯರ್ 36 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 59 ರನ್ ಗಳಿಸಿ ಔಟಾದರು, ಆದರೆ ಗಿಲ್ ತಮ್ಮ ಆಟ ಮುಂದುವರೆಸಿದರು.

ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಕೂಡ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದರು. ಸ್ಫೋಟಕ ಬ್ಯಾಟಿಂಗ್ ಮಾಡಿದ ಪಟೇಲ್ 52 ರನ್ ಗಳಿಸಿ ಟೀಮ್ ಇಂಡಿಯಾವನ್ನು ಗೆಲುವಿನ ಹೊಸ್ತಿಲಿಗೆ ತಂದರು. ಅಕ್ಸರ್ ತಮ್ಮ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ಬಾರಿಸಿದರು. ಆದರೆ ಆದಿಲ್ ರಶೀದ್ ಅವರ ಎಸೆತದಲ್ಲಿ ಅಕ್ಸರ್ ಪಟೇಲ್ ವಿಕೆಟ್ ಕಳೆದುಕೊಂಡರು.

ಶುಭಮನ್ ಗಿಲ್ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದರು. ಅವರು 96 ಎಸೆತಗಳಲ್ಲಿ 14 ಬೌಂಡರಿಗಳ ಸಹಾಯದಿಂದ 87 ರನ್ ಗಳಿಸಿದರು. ಅಕ್ಸರ್, ಶ್ರೇಯಸ್ ಮತ್ತು ಗಿಲ್ ಅವರ ಅರ್ಧಶತಕದ ಇನ್ನಿಂಗ್ಸ್‌ನಿಂದಾಗಿ, ಟೀಮ್ ಇಂಡಿಯಾ ಏಕದಿನ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸಿದೆ. ಮತ್ತೊಂದೆಡೆ, ಇಂಗ್ಲೆಂಡ್‌ ನಾಯಕ ಜೋಸ್ ಬಟ್ಲರ್ (52) ಮತ್ತು ಜಾಕೋಬ್ ಬೆಥೆಲ್ (51) ಅವರ ಕಠಿಣ ಪರಿಶ್ರಮ ವ್ಯರ್ಥವಾಯಿತು. ಈಗ ಮುಂದಿನ ಪಂದ್ಯ ಇಂಗ್ಲೆಂಡ್‌ಗೆ ಮಾಡು ಇಲ್ಲವೇ ಮಡಿ. ಎರಡೂ ತಂಡಗಳು ಫೆಬ್ರವರಿ 9 ರಂದು ಮುಖಾಮುಖಿಯಾಗಲಿವೆ.

Story first published: Thursday, February 6, 2025, 20:36 [IST]
Other articles published on Feb 6, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+