Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

2023ರ ವಿಶ್ವಕಪ್‌ಗೆ ಭಾರತ ತಂಡ ಪ್ರಕಟ; ಐಪಿಎಲ್‌ನ ಯಾವ ತಂಡದಿಂದ ಎಷ್ಟು ಆಟಗಾರರು ಆಯ್ಕೆ?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಮಂಗಳವಾರ, ಸೆಪ್ಟೆಂಬರ್ 5ರಂದು ಬಹು ನಿರೀಕ್ಷಿತ 2023ರ ಏಕದಿನ ವಿಶ್ವಕಪ್‌ಗಾಗಿ 15 ಸದಸ್ಯರ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿತು.

ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಮತ್ತು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಸುದ್ದಿಗೋಷ್ಠಿ ನಡೆಸಿ ತಂಡವನ್ನು ಘೋಷಿಸುವುದರೊಂದಿಗೆ ವಿಶ್ವಕಪ್‌ಗೆ ತಾವು ಸಿದ್ಧರಾಗಿದ್ದೇವೆ ಎಂಬ ಸಂದೇಶ ರವಾನಿಸಿದರು.

ಗಾಯದಿಂದ ಚೇತರಿಸಿಕೊಂಡು ಫಿಟ್ನೆಸ್‌ಗೆ ಮರಳಿದ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಭಾರತ ತಂಡದಲ್ಲಿ ಆಯ್ಕೆ ಮಾಡಲಾಗಿದೆ.

india-world-cup-squad-2023

ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಅವರಂತಹ ಸ್ಪೆಷಲಿಸ್ಟ್ ಬ್ಯಾಟರ್‌ಗಳು, ಆಲ್‌ರೌಂಡರ್‌ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಅವರನ್ನು ಸ್ಪೆಷಲಿಸ್ಟ್ ವೇಗಿಗಳಾಗಿ ಆಯ್ಕೆ ಮಾಡಿದ್ದರೆ, ಕುಲದೀಪ್ ಯಾದವ್ ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಸ್ಥಾನ ಪಡೆದಿದ್ದಾರೆ. ಇಶಾನ್ ಕಿಶನ್ ಮತ್ತು ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಆಯ್ಕೆಗಳಾಗಿದ್ದಾರೆ.

ಇನ್ನು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಇಂಡಿಯಾ ಪ್ರೀಮಿಯರ್ ಲೀಗ್ (ಐಪಿಎಲ್) ತಂಡವಾರು ಐಸಿಸಿ ಪಂದ್ಯಾವಳಿಗೆ ಯಾರು ಅವಕಾಶ ಪಡೆದುಕೊಂಡಿದ್ದಾರೆ ಎನ್ನುವುದನ್ನು ಪರಿಶೀಲಿಸುತ್ತಿದ್ದಾರೆ.

india-world-cup-squad-2023

ಗಮನಾರ್ಹವಾಗಿ, ವಿಶ್ವಕಪ್‌ಗಾಗಿ ಭಾರತ ರಾಷ್ಟ್ರೀಯ ತಂಡದಲ್ಲಿ ಮುಂಬೈ ಇಂಡಿಯನ್ಸ್ ತಂಡದಿಂದ 4 ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಇದು ಇತರ ಐಪಿಎಲ್ ತಂಡಗಳಿಗಿಂತ ಅಧಿಕವಾಗಿದೆ.

ನಂತರ ಗುಜರಾತ್ ಟೈಟನ್ಸ್ ತಂಡದ ಮೂವರು ಆಟಗಾರರು ಭಾರತದ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್, (ಕೆಕೆಆರ್), ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ), ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳಿಂದ ತಲಾ ಇಬ್ಬರು ಆಟಗಾರರು ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಇನ್ನು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳಿಂದ ಮಾತ್ರ ತಲಾ ಒಬ್ಬ ಆಟಗಾರರನ್ನು ವಿಶ್ವಕಪ್ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇದೇ ವೇಳೆ ಉಳಿದ ಐಪಿಎಲ್ ತಂಡಗಳಾದ ಪಂಜಾಬ್ ಕಿಂಗ್ಸ್, ರಾಜಸ್ಥಾನ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳಿಂದ ಯಾವುದೇ ಆಟಗಾರರು ಸ್ಥಾನ ಪಡೆದಿಲ್ಲ.

india-world-cup-squad-2023


ಭಾರತೀಯ ಆಯ್ಕೆ ಸಮಿತಿಯು ಏಷ್ಯಾ ಕಪ್ ತಂಡದಿಂದ ಮೂವರು ಆಟಗಾರರನ್ನು ಹೊರಗಿಡುವ ಮೂಲಕ ಇನ್ನುಳಿದ ಆಟಗಾರರ ತಂಡವನ್ನೇ ಉಳಿಸಿಕೊಂಡಿದೆ ಎಂದು ಹೇಳಬಹುದು. ಏಕೆಂದರೆ, ಯಾವುದೇ ಹೊಸ ಸೇರ್ಪಡೆಯಾಗಿಲ್ಲ.

ಏಷ್ಯಾ ಕಪ್ ಮುಖ್ಯ ತಂಡದಿಂದ ಪ್ರಸಿದ್ಧ್ ಕೃಷ್ಣ ಮತ್ತು ತಿಲಕ್ ವರ್ಮಾ ಅವರನ್ನು ಕೈಬಿಡಲಾಗಿದ್ದರೆ, ಮೀಸಲು ಆಟಗಾರನಾಗಿದ್ದ ಸಂಜು ಸ್ಯಾಮ್ಸನ್ ಕೂಡ 15 ಸದಸ್ಯರ ವಿಶ್ವಕಪ್ ತಂಡಕ್ಕೆ ಮರಳಲು ವಿಫಲರಾದರು.

2023ರ ಏಕದಿನ ವಿಶ್ವಕಪ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್.

ವಿಶ್ವಕಪ್‌ನಲ್ಲಿ ಸ್ಥಾನ ಪಡೆದ ಐಪಿಎಲ್ ತಂಡವಾರು ಆಟಗಾರರು

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ.

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ, ಶುಭ್ಮನ್ ಗಿಲ್, ಮೊಹಮ್ಮದ್ ಶಮಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ): ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್.

ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್): ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್.

ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ): ಅಕ್ಷರ್ ಪಟೇಲ್, ಕುಲದೀಪ್ ಯಾದವ್

ಲಕ್ನೋ ಸೂಪರ್‌ ಜೈಂಟ್ಸ್: ಕೆಎಲ್ ರಾಹುಲ್

ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ

Story first published: Tuesday, September 5, 2023, 15:27 [IST]
Other articles published on Sep 5, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+