Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Asian Games: ಬಾಂಗ್ಲಾದೇಶ ವಿರುದ್ಧ ಸೆಮಿಫೈನಲ್‌ಗೆ ಮುನ್ನ ರಿಲ್ಯಾಕ್ಸ್ ಮೂಡನಲ್ಲಿ ಟೀಂ ಇಂಡಿಯಾ ಆಟಗಾರರು

ಏಷ್ಯನ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಭರವಸೆ ಮೂಡಿಸಿರುವುದು ಕ್ರಿಕೆಟ್‌ ತಂಡ. ಈಗಾಗಲೇ ಮಹಿಳಾ ತಂಡ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದು, ಪುರುಷರ ಕ್ರಿಕೆಟ್ ತಂಡ ಕೂಡ ಅದೇ ಹಾದಿಯಲ್ಲಿದೆ. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದ ಭಾರತ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ.

ಬಾಂಗ್ಲಾದೇಶದ ವಿರುದ್ಧ ಸೆಮಿಫೈನಲ್‌ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಭಾರತಕ್ಕೆ ಏಷ್ಯನ್ ಗೇಮ್ಸ್‌ನಲ್ಲಿ ಮತ್ತೊಂದು ಪದಕ ಖಚಿತವಾಗಲಿದೆ. ಅಕ್ಟೋಬರ್ 6ರಂದು ಶುಕ್ರವಾರ ಚೀನಾದ ಹಾಂಗ್‌ಝೌನ ZJUT ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನ ಬೆಳಗ್ಗೆ 6.30ಕ್ಕೆ ಈ ಪಂದ್ಯ ಆರಂಭವಾಗಲಿದೆ.

asian-games-2023

ರಿಲ್ಯಾಕ್ಸ್ ಮೂಡ್‌ನಲ್ಲಿ ಭಾರತ ತಂಡ

ಬಾಂಗ್ಲಾದೇಶದ ವಿರುದ್ಧದ ಭಾರತದ ನಿರ್ಣಾಯಕ ಸೆಮಿಫೈನಲ್ ಪಂದ್ಯಕ್ಕೆ ಮುಂಚಿತವಾಗಿ, ಭಾರತೀಯ ಕ್ರಿಕೆಟ್ ತಂಡದ ಆಟಗಾರರ ಚೀನಾದಲ್ಲಿ ಸ್ವಯಂಸೇವಕರ ಗುಂಪಿನೊಂದಿಗೆ ಕ್ರಿಕೆಟ್ ಆಡುತ್ತಿರುವುದು ಕಂಡುಬಂದಿದೆ. ಕ್ವಾರ್ಟರ್-ಫೈನಲ್‌ನಲ್ಲಿ ನೇಪಾಳವನ್ನು ಆರಾಮವಾಗಿ ಸೋಲಿಸಿದ ನಂತರ, ರುತುರಾಜ್ ಗಾಯಕ್‌ವಾಡ್ ಸೆಮಿಫೈನಲ್ ಪಂದ್ಯ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಪಂದ್ಯಕ್ಕೆ ಒಂದು ದಿನ ಮೊದಲು, ಭಾರತೀಯ ಕ್ರಿಕೆಟ್ ತಂಡವು ಸ್ಥಳೀಯ ಸ್ವಯಂಸೇವಕರೊಂದಿಗೆ ತ್ವರಿತ ಕ್ರಿಕೆಟ್ ಪಂದ್ಯದಲ್ಲಿ ತೊಡಗಿಸಿಕೊಂಡಿದ್ದು, ಚೀನಾದ ಅಭಿಮಾನಿಗಳಿಗೆ ತುಂಬಾ ಸಂತೋಷವಾಯಿತು. ಭಾರತೀಯ ಕ್ರಿಕೆಟ್ ತಂಡವು ಚಿಕ್ಕ ಮಕ್ಕಳೊಂದಿಗೆ ತಂಡವು ಆಡುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ನೇಪಾಳ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಗಳಿಸಿದ್ದ ಯಶಸ್ವಿ ಜೈಸ್ವಾಲ್ ಅತ್ಯುತ್ತಮ ಪ್ರದರ್ಶನ ಮುಂದುವರೆಸುವ ಉತ್ಸಾಹದಲ್ಲಿದ್ದಾರೆ. ರಿಂಕು ಸಿಂಗ್ ಸ್ಫೋಟಕ ಬ್ಯಾಟಿಂಗ್‌ ಮಾಡಿದರೆ ಭಾರತ ಬೃಹತ್ ಮೊತ್ತ ಕಲೆಹಾಕುವುದರಲ್ಲಿ ಸಂಶಯ ಇಲ್ಲ. ನಾಯಕ ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ ಬಾಂಗ್ಲಾದೇಶದ ವಿರುದ್ಧ ಉತ್ತಮ ಪ್ರದರ್ಶನ ನೀಡಬೇಕಾಗಿದೆ.

ಪಿಚ್ ವರದಿ

ಮಂಗೋಲಿಯಾ ವಿರುದ್ಧ ನೇಪಾಳ ವಿಶ್ವದಾಖಲೆಯ 314 ರನ್ ಗಳಿಸಿದ್ದು ಇದೇ ಅಂಗಳದಲ್ಲಿ. ಚಿಕ್ಕ ಬೌಂಡರಿಗಳನ್ನು ಹೊಂದಿದ್ದು ರನ್ ಹೊಳೆಯೇ ಹರಿಯುವ ನಿರೀಕ್ಷೆ ಇದೆ. ಮೊದಲು ಬ್ಯಾಟಿಂಗ್ ಮಾಡುವ ತಂಡವೇ ಇಲ್ಲಿ ಹೆಚ್ಚಿನ ಪಂದ್ಯಗಳನ್ನು ಗೆದ್ದಿರುವ ಕಾರಣ ಟಾಸ್ ಗೆಲ್ಲುವ ತಂಡ ಮೊದಲು ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ.

ಭಾರತ ಸಂಭಾವ್ಯ ಆಡುವ ಬಳಗ : ರುತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ಶಿವಂ ದುಬೆ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಷದೀಪ್ ಸಿಂಗ್.

ಬಾಂಗ್ಲಾದೇಶ ಸಂಭಾವ್ಯ ಆಡುವ ಬಳಗ: ಪರ್ವೇಜ್ ಹೊಸೈನ್ ಎಮನ್, ಮಹಮ್ಮದುಲ್ ಹಸನ್ ಜಾಯ್, ಜಾಕಿರ್ ಹಸನ್, ಸೈಫ್ ಹಸನ್ (ನಾಯಕ), ಅಫೀಫ್ ಹೊಸೈನ್, ಶಹದತ್ ಹೊಸೈನ್, ಜಾಕರ್ ಅಲಿ (ವಿಕೆಟ್ ಕೀಪರ್), ರಿಶಾದ್ ಹೊಸೈನ್, ಸುಮನ್ ಖಾನ್, ರಾಕಿಬುಲ್ ಹಸನ್, ರಿಪಾನ್ ಮೊಂಡೋಲ್, ಮೊಸದ್ದೆಕ್ ಹೊಸೈನ್, ಯಾಸಿರ್ ಅಲಿ, ತನ್ವೀರ್ ಇಸ್ಲಾಂ, ಮೃತುಂಜೋಯ್ ಚೌಧರಿ, ತಂಜಿಮ್ ಹಸನ್ ಸಾಕಿಬ್.

Story first published: Thursday, October 5, 2023, 19:35 [IST]
Other articles published on Oct 5, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+