ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ 2007ರ ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ

Indian cricketer 2007 world cup winning member Joginder Sharma retired from all formats of cricket

ಭಾರತದ ಮಧ್ಯಮ ಕ್ರಮಾಂಕದ ವೇಗದ ಬೌಲರ್ ಜೋಗಿಂದರ್ ಶರ್ಮಾ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2007ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿದ್ದ ಜೋಗಿಂದರ್ ಶರ್ಮಾ ಶುಕ್ರವಾರ ತಮ್ಮ ನಿವೃತ್ತಿ ಘೋಷಣೆ ಮಾಡಿದ್ದಾರೆ. ಟ್ವಿಟ್ಟರ್‌ನಲ್ಲಿ ಅವರು ತಮ್ಮ ನಿವೃತ್ತಿಯನ್ನು ಖಚಿತಪಡಿಸಿದ್ದಾರೆ.

2007ರಲ್ಲಿ ನಡೆದ ಚೊಚ್ಚಲ ವಿಶ್ವಕಪ್‌ನ ಫೈನಲ್ ಪಂದ್ಯದ ಅಂತಿಮ ಓವರ್ ಎಸೆದಿದ್ದ ಜೋಗಿಂದರ್ ಶರ್ಮಾ ಪಾಕಿಸ್ತಾನದ ನಾಯಕ ಮಿಸ್ಬಾ ಉಲ್ ಹಕ್ ವಿಕೆಟ್ ಕಿತ್ತು ಭಾರತದ ಗೆಲುವಿಗೆ ಕಾರಣವಾಗಿದ್ದರು. ಈ ಮೂಲಕ ಚೊಚ್ಚಲ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿತ್ತು. ಆದರೆ ಅದಾದ ಬಳಿಕ ಭಾರತ ತಂಡದಲ್ಲಿ ಜೋಗಿಂದರ್ ಶರ್ಮಾ ಮತ್ತೊಮ್ಮೆ ಆಡುವ ಅವಕಾಶ ಪಡೆಯಲಿಲ್ಲ. ಆದರೆ ದೇಶೀಯ ಕ್ರಿಕೆಟ್‌ನಲ್ಲಿ ಅವರು ಸಕ್ರಿಯವಾಗಿದ್ದರು.

ಕಮ್‌ಬ್ಯಾಕ್‌ಗೆ ಸಜ್ಜಾದ ಬೂಮ್ರಾ: ಎನ್‌ಸಿಎನಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ ಭಾರತದ ವೇಗಿಕಮ್‌ಬ್ಯಾಕ್‌ಗೆ ಸಜ್ಜಾದ ಬೂಮ್ರಾ: ಎನ್‌ಸಿಎನಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ ಭಾರತದ ವೇಗಿ

2007ರಲ್ಲಿ ಜೊಹನ್ಸ್‌ಬರ್ಗ್‌ನಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಜೋಗಿಂದರ್ ಶರ್ಮಾ ಎಸೆದ ಅಂತಿಮ ಓವರ್‌ನಲ್ಲಿ ಪಾಕಿಸ್ತಾನ ತಂಡಕ್ಕೆ ಗೆಲ್ಲಲು 13 ರನ್‌ಗಳ ಅಗತ್ಯವಿದ್ದರೆ ಭಾರತಕ್ಕೆ ಗೆಲ್ಲಲು ಒಂದು ವಿಕೆಟ್‌ನ ಅಗತ್ಯವಿತ್ತು. ಕ್ರೀಸ್‌ನಲ್ಲಿ ಪಾಕಿಸ್ತಾನದ ಅಂದಿನ ನಾಯಕ ಮಿಸ್ಬಾ ಉಲ್ ಹಕ್ ಇದ್ದರು. ಮೊದಲ ಎಸೆತದಲ್ಲಿ ಮಿಸ್ಬಾ ರನ್ ಗಳಿಸಲು ವಿಫಲವಾಗಿದ್ದರೂ ಎರಡನೇ ಎಸೆತದಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಪಾಕಿಸ್ತಾನದ ಗೆಲುವಿಗೆ 4 ಎಸೆತಗಳಲ್ಲಿ 6 ರನ್‌ಗಳ ಅಗತ್ಯವಿತ್ತು. ನಂತರದ ಎಸೆತವನ್ನು ಮಿಸ್ಬಾ ಸ್ಪೂಪ್ ಮಾಡುವ ಪ್ರಯತ್ನದಲ್ಲಿ ವಿಫಲವಾಗಿ ಶ್ರೀಶಾಂತ್‌ಗೆ ಕ್ಯಾಚ್ ನೀಡಿದ್ದರು. ಈ ಮೂಲಕ ಭಾರತ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿತ್ತು.

ಇನ್ನು ಜೋಗಿಂದರ್ ಶರ್ಮಾ ಸದ್ಯ ಹರ್ಯಾಣ ಪೊಲೀಸ್ ಇಲಾಖೆಯಲ್ಲಿ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಟ್ವೀಟ್‌ನಲ್ಲಿ ನಿವೃತ್ತಿಯ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು ನಿವೃತ್ತಿ ಪತ್ರವನ್ನು ಕೂಡ ಹಂಚಿಕೊಂಡಿದ್ದಾರೆ.

2015ರ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಜೊತೆಗಿನ ಜಗಳದ ಬಗ್ಗೆ ಆಘಾತಕಾರಿ ವಿಷಯ ಬಿಚ್ಚಿಟ್ಟ ಪಾಕ್ ಮಾಜಿ ವೇಗಿ2015ರ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಜೊತೆಗಿನ ಜಗಳದ ಬಗ್ಗೆ ಆಘಾತಕಾರಿ ವಿಷಯ ಬಿಚ್ಚಿಟ್ಟ ಪಾಕ್ ಮಾಜಿ ವೇಗಿ

ಈ ಪತ್ರದಲ್ಲಿ ಜೋಗಿಂದರ್ ಶರ್ಮಾ "2002-2017ರ ವರೆಗಿನ ನನ್ನ ಪ್ರಯಾಣ ನನ್ನ ಜೀವನದ ಅತ್ಯಂತ ಸುಂದರ ವರ್ಷಗಳಾಗಿದೆ. ಈ ಸಂದರ್ಭದಲ್ಲಿ ಭಾರತವನ್ನು ಅತ್ಯುನ್ನತ ಮಟ್ಟದಲ್ಲಿ ಕ್ರೀಡೆಯನ್ನು ಪ್ರತಿನಿಧಿಸುವ ಅವಕಾಶ ದೊರೆತಿರುವುದು ನನಗೆ ದೊರೆತ ಗೌರವವಾಗಿದೆ. ಈ ಅವಕಾಶ ನೀಡಿದ ಬಿಸಿಸಿಐ ಹಾಗೂ ಹರ್ಯಾಣ ಕ್ರಿಕೆಟ್ ಅಸೊಸಿಯೇಶನ್‌, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹರ್ಯಾಣ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ" ಎಂದು ಬರೆದುಕೊಂಡಿದ್ದಾರೆ ಜೋಗಿಂದರ್ ಶರ್ಮಾ.

ಹರ್ಯಾಣದ ರೋಹ್ಟಕ್‌ನಲ್ಲಿ ಹುಟ್ಟಿ ಬೆಳೆದ ಜೋಗಿಂದರ್ ಶರ್ಮಾ, ದೇಶೀಯ ಕ್ರಿಕೆಟ್‌ನಲ್ಲಿ ಹರ್ಯಾಣ ತಂಡವನ್ನು ಪ್ರತಿನಿಧಿಸಿದ್ದಾರೆ. 2004ರಲ್ಲಿ ಚಿತ್ತಗಾಂಗ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಅವರು 4 ಏಕದಿನ ಮತ್ತು 4 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು 5 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. 2007ರ ವಿಶ್ವಕಪ್‌ನ ಫೈನಲ್ ಪಂದ್ಯ ಜೋಗಿಂದರ್ ಶರ್ಮಾ ಅವ ಅಂತಿಮ ಅಂತಾರಾಷ್ಟ್ರೀಯ ಪಂದ್ಯವಾಗಿದೆ.

Story first published: Friday, February 3, 2023, 13:52 [IST]
Other articles published on Feb 3, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X