ಪತ್ನಿ ಧನಶ್ರೀ ಜೊತೆಗಿನ ವಿಚ್ಛೇದನ ವದಂತಿ: ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಪ್ರತಿಕ್ರಿಯೆ ಏನು?

ಯುಜ್ವೇಂದ್ರ ಚಹಾಲ್ ಭಾರತ ಕ್ರಿಕೆಟ್ ಕಂಡ ಅತ್ಯುತ್ತಮ ಲೆಗ್ ಸ್ಪಿನ್ ಬೌಲರ್‌ಗಳಲ್ಲಿ ಒಬ್ಬರು. 2016ರಲ್ಲಿ ಟೀಮ್ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಯುಜ್ವೇಂದ್ರ ಚಹಲ್ ಸಿಕ್ಕ ಅವಕಾಶವನ್ನು ಪಡೆದುಕೊಳ್ಳುವುದರ ಮೂಲಕ ತಂಡದ ಖಾಯಂ ಸದಸ್ಯನೆಂದು ಗುರುತಿಸಿಕೊಂಡರು.
ಇನ್ನು ಯುಜುವೇಂದ್ರ ಚಹಾಲ್ 2020ರಲ್ಲಿ ಧನಶ್ರೀ ವರ್ಮಾ ಎಂಬ ಸುಂದರಿಯ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ವೃತ್ತಿಯಲ್ಲಿ ನೃತ್ಯ ಸಂಯೋಜಕಿಯಾಗಿದ್ದ ಧನಶ್ರೀ ವರ್ಮಾ ಮತ್ತು ಕ್ರಿಕೆಟಿಗ ಯುಜುವೇಂದ್ರ ಚಹಾಲ್ ಇಬ್ಬರೂ ಸಹ ಪರಸ್ಪರ ಪ್ರೀತಿಸಿ ಮದುವೆಯಾದವರು.
ಈ ಜೋಡಿಯು ಎಲ್ಲರ ಮೆಚ್ಚುಗೆಯನ್ನು ಪಡೆದುಕೊಳ್ಳುತ್ತಿತ್ತು. ಇದೀಗ ಈ ಜೋಡಿ ವಿವಾದವೊಂದಕ್ಕೆ ಸಿಲುಕಿದೆ. ಯುಜ್ವೇಂದ್ರ ಚಾಹಲ್ ಹಾಗೂ ಧನಶ್ರೀ ವರ್ಮಾ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಗಂಭೀರ ವಿಚಾರವೊಂದು ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿತ್ತು. ಹೀಗಾಗಿ ಖುದ್ದು ಯುಜ್ವೇಂದ್ರ ಚಾಹಲ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಭಾರತೀಯ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಅವರು ಪತ್ನಿ ಧನಶ್ರೀ ವರ್ಮಾ ಅವರೊಂದಿಗಿನ "ವಿಚ್ಛೇದನ'ಕ್ಕೆ ಸಂಬಂಧಿಸಿದ ಪೋಸ್ಟ್‌ಗಳೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ನಮ್ಮ ವೈವಾಹಿಕ ಜೀವನದ ಬಗ್ಗೆ ವದಂತಿಗಳನ್ನು ನಂಬಬೇಡಿ ಎಂದು ಅವರ ಅಭಿಮಾನಿಗಳಿಗೆ ವಿನಂತಿಸಿಕೊಂಡಿದ್ದಾರೆ.
ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಯುಜ್ವೇಂದ್ರ ಚಹಾಲ್ ಹೀಗೆ ಬರೆದಿದ್ದಾರೆ, "ನಮ್ಮ ಸಂಬಂಧಕ್ಕೆ ಸಂಬಂಧಿಸಿದ ಯಾವುದೇ ರೀತಿಯ ವದಂತಿಗಳನ್ನು ನಂಬಬೇಡಿ ಎಂದು ನಿಮಗೆಲ್ಲರಲ್ಲಿ ವಿನಮ್ರ ವಿನಂತಿ. ದಯವಿಟ್ಟು, ಅದನ್ನು ಇಲ್ಲಿಗೆ ಕೊನೆಗೊಳಿಸಿ. ಎಲ್ಲರಿಗೂ ಪ್ರೀತಿ ಮತ್ತು ಬೆಳಕು ಸಿಗಲಿ," ಎಂದಿದ್ದಾರೆ.
ಯುಜ್ವೇಂದ್ರ ಚಹಾಲ್ ಮತ್ತು ಅವರ ಪತ್ನಿ ಧನಶ್ರೀ ಅವರು ಒಟ್ಟಿಗೆ ವಿಡಿಯೋಗಳನ್ನು ಪೋಸ್ಟ್ ಮಾಡುವುದರಿಂದ ಸಾಮಾಜಿಕ ಮಾಧ್ಯಮದಲ್ಲಿ ಅತ್ಯಂತ ಜನಪ್ರಿಯರಾಗಿದ್ದಾರೆ.

ಧನಶ್ರೀ ವರ್ಮಾ ಯುಟ್ಯೂಬರ್ ಮತ್ತು ನೃತ್ಯ ನೃತ್ಯ ಸಂಯೋಜಕಿ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾದ ಅನುಯಾಯಿಗಳನ್ನು ಹೊಂದಿದ್ದಾರೆ. ಮತ್ತೊಂದೆಡೆ ಚಹಾಲ್ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತದ ಪ್ರಮುಖ ಸ್ಪಿನ್ ಬೌಲರ್‌ಗಳಲ್ಲಿ ಒಬ್ಬರು ಮತ್ತು ಐಪಿಎಲ್‌ನಲ್ಲಿ ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡಿದ್ದರು ಮತ್ತು ಸದ್ಯ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಆಡುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications