ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌ನಲ್ಲಿ ಬಹಳ ತಂಡಗಳಿಗೆ ಆಘಾತ ನೀಡಲಿರುವ ತಂಡವನ್ನು ಹೆಸರಿಸಿದ ಅಜಯ್ ಜಡೇಜಾ

Indian Former cricketer Ajay Jadeja said South Africa team surprise a lot of teams in T20 World Cup 2022

ಟಿ20 ವಿಶ್ವಕಪ್‌ನ ಆರಂಭಕ್ಕೆ ಕೆಲವೇ ದಿನಗಳು ಮಾತ್ರವೇ ಬಾಕಿಯಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಮೂಲಕ ಭಾರತ ತಂಡ ಈ ಪ್ರತಿಷ್ಠಿತ ಟೂರ್ನಿಗೆ ಅಂತಿಮ ಹಂತದ ಸಿದ್ಧತೆಯನ್ನು ಮಾಡಿಕೊಳ್ಳಲಿದೆ. ಈ ಸರಣಿಯಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಎರಡು ತಂಡಗಳು ಕೂಡ ವಿಶ್ವಕಪ್‌ಗೆ ಪೂರಕವಾದ ಕೆಲ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದು ಆ ಮೂಲಕ ಪ್ರತಿಷ್ಠಿತ ಟೂರ್ನಿಗೆ ಸಿದ್ಧತೆ ನಡೆಸಲಿದೆ.

ಈ ಸಂದರ್ಭದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ವಿಶ್ವಕಪ್‌ ಟೂರ್ನಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಮುಖ ತಂಡಗಳಿಗೆ ಒಂದು ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ. ಈ ಬಾರಿಯ ವಿಶ್ವಕಪ್‌ನಲ್ಲಿ ಪ್ರಮುಖ ತಂಡಗಳಿಗೆ ಆಘಾತ ನೀಡಬಲ್ಲ ಒಂದು ತಂಡವನ್ನು ಅಜಯ್ ಜಡೇಜಾ ಹೆಸರಿಸಿದ್ದು ಕೆಲ ಅಚ್ಚರಿಗಳಿಗೆ ಈ ತಂಡ ಕಾರಣವಾಗಲಿದೆ ಎಂದಿದ್ದಾರೆ.

ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾದ ಆಡುವ ತಂಡದಲ್ಲಿ ಈತ ಸ್ಥಾನ ಪಡೆಯಲಿ: ಆಡಮ್ ಗಿಲ್‌ಕ್ರಿಸ್ಟ್ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾದ ಆಡುವ ತಂಡದಲ್ಲಿ ಈತ ಸ್ಥಾನ ಪಡೆಯಲಿ: ಆಡಮ್ ಗಿಲ್‌ಕ್ರಿಸ್ಟ್

ದಕ್ಷಿಣ ಆಫ್ರಿಕಾದಿಂದ ಇತರ ತಂಡಗಳಿಗೆ ಕಂಟಕ

ದಕ್ಷಿಣ ಆಫ್ರಿಕಾದಿಂದ ಇತರ ತಂಡಗಳಿಗೆ ಕಂಟಕ

ಭಾರತದ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಹೆಸರಿಸಿದ ಆ ತಂಡ ಬೇರೆ ಯಾವುದೂ ಅಲ್ಲ. ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ. ಇತ್ತೀಚಿನ ದಿನಗಳಲ್ಲಿ ಸ್ಥಿರ ಪ್ರದರ್ಶನ ನೀಡಿಕೊಂಡು ಬಂದಿರುವ ದಕ್ಷಿಣ ಆಫ್ರಿಕಾ ಬಲಿಷ್ಠ ಆಟಗಾರರ ಪಡೆಯನ್ನು ಹೊಂದಿದೆ. ಹೀಗಾಗಿ ಕಠಿಣ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಇದೇ ಅಂಶವನ್ನು ಅಜಯ್ ಜಡೇಜಾ ಕೂಡ ಉಲ್ಲೇಖಿಸಿದ್ದು ಟೂರ್ನಿಯಲ್ಲಿ ಇತರ ಬಲಿಷ್ಠ ತಂಡಗಳಿಗೆ ದಕ್ಷಿಣ ಆಫ್ರಿಕಾ ತಂಡ ಖಂಡಿತವಾಗಿಯೂ ಆಘಾತ ನೀಡಲಿದೆ ಎಂದಿದ್ದಾರೆ. ಅಲ್ಲದೆ ದುರದೃಷ್ಟವಶಾತ್ ದಕ್ಷಿಣ ಆಫ್ರಿಕಾ ತಂಡ ಭಾರತ ಇರುವ ಗುಂಪಿನಲ್ಲಿಯೇ ಇದೆ ಎಂದು ಟೀಮ್ ಇಂಡಿಯಾಗೂ ಎಚ್ಚರಿಕೆ ನೀಡಿದ್ದಾರೆ.

ಗ್ರೂಪ್ 2ರಲ್ಲಿನ ತಂಡಗಳು

ಗ್ರೂಪ್ 2ರಲ್ಲಿನ ತಂಡಗಳು

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಒಂದೇ ಗುಂಪಿನಲ್ಲಿದೆ. ಸೂಪರ್ 12 ಹಂತದಲ್ಲಿ ಎರಡು ಗುಂಪುಗಳಲ್ಲಿ ತಲಾ ಆರು ತಂಡಗಳಿದ್ದು ಗ್ರೂಪ್ 2ರಲ್ಲಿ ಭಾರತ, ದಕ್ಷಿಣ ಆಫ್ರಿಕಾದ ಜೊತೆಗೆ ಶಕೀಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ಹಾಗೂ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡಗಳಿದೆ. ಎರಡು ತಂಡಗಳು ಕ್ವಾಲಿಫೈಯರ್ ಹಂತವನ್ನು ದಾಟಿ ಪ್ರವೇಶ ಪಡೆದುಕೊಳ್ಳಲಿದೆ.

ರಾಹುಲ್, ಅಶ್ವಿನ್ ಮೇಲೆ ಜಡೇಜಾಗೆ ಭರವಸೆ

ರಾಹುಲ್, ಅಶ್ವಿನ್ ಮೇಲೆ ಜಡೇಜಾಗೆ ಭರವಸೆ

ಇನ್ನು ಈ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ಇಬ್ಬರು ಆಟಗಾರರ ಮೇಲೆ ರವೀಂದ್ರ ಜಡೇಜಾ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಆರಂಭಿಕ ಆಟಗಾರ ಕೆಎಲ್ ರಾಹುಲ್ ಹಾಗೂ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಬಹುದಾದ ಇಬ್ಬರು ಆಟಗಾರರು ಎಂದಿದ್ದಾರೆ ಅಜಯ್ ಜಡೇಜಾ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ತಿರುವನಂತಪುರಂನಲ್ಲಿ ಆಯೋಜನೆಯಾಗಿದ್ದು ಪಂದ್ಯ ಕುತೂಹಲ ಮೂಡಿಸಿದೆ.

ಭಾರತ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಅರ್ಷದೀಪ್ ಸಿಂಗ್
ಬೆಂಚ್: ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಾಲ್, ಶಹಬಾಜ್ ಅಹ್ಮದ್, ಉಮೇಶ್ ಯಾದವ್

ದಕ್ಷಿಣ ಆಫ್ರಿಕಾ ಸ್ಕ್ವಾಡ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಿಲೀ ರೋಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ
ಬೆಂಚ್: ಡ್ವೈನ್ ಪ್ರಿಟೋರಿಯಸ್, ರೀಜಾ ಹೆಂಡ್ರಿಕ್ಸ್, ಲುಂಗಿ ಎನ್ಗಿಡಿ, ಹೆನ್ರಿಚ್ ಕ್ಲಾಸೆನ್

Story first published: Wednesday, September 28, 2022, 19:33 [IST]
Other articles published on Sep 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X