ಲಾಹೋರ್‌ನಲ್ಲಿ ಮೊಳಗಿದ ಭಾರತದ ರಾಷ್ಟ್ರಗೀತೆ: ಕಾರಣವೇನು?
ಸದ್ಯ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯುತ್ತಿದೆ. ಬಹು ವರ್ಷಗಳ ಬಳಿಕ ಐಸಿಸಿ ಟೂರ್ನಿಯನ್ನು ಆಯೋಜಿಸುವ ಹಕ್ಕು ಪಾಕ್‌ಗೆ ಸಿಕ್ಕಿದೆ. ಈ ನಿಟ್ಟಿನಲ್ಲಿ ಪಾಕ್ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಆದರೆ ಚಾಂಪಿಯನ್ಸ್ ಟ್ರೋಫಿಯ "ಬಿ" ಗುಂಪಿನ ಪಂದ್ಯದ ವೇಳೆ ಅಚಾತುರ್ಯ ಒಂದು ನಡೆದು ಬಿಟ್ಟಿದೆ. ಇದರಿಂದ ಪಿಸಿಬಿಗೆ ಮುಖಭಂವಾಗಿದೆ.
ಭಾರತ ಸಹ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುತ್ತಿದೆ. ಆದರೆ ಪಾಕಿಸ್ತಾದಲ್ಲಿ ಭದ್ರತಾ ಕಾರಣಗಳಿಂದ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಪ್ರವಾಸವನ್ನು ಬೆಳೆಸಲಿಲ್ಲ. ಹೀಗಾಗಿ ಈ ಬಾರಿಯ ಟೂರ್ನಿ ಹೈ ಬ್ರೀಡ್ ಮಾದರಿಯಲ್ಲಿ ನಡೆಯುತ್ತಿದೆ. ಭಾರತ ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಆದರೆ ಪಾಕಿಸ್ತಾನದಲ್ಲಿ ಭಾರತದ ರಾಷ್ಟ್ರಗೀತಿಯನ್ನು ಹೇಗೆ ಮೊಳಗಿತು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುವುದು ಸಹಜ ಅದಕ್ಕೆ ಉತ್ತರ ಇಲ್ಲಿದೆ.

ಭಾರತದ ರಾಷ್ಟ್ರಗೀತೆ
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಹೈ ವೋಲ್ಟೇಜ್ ಫೈಟ್ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿತು. ಐಸಿಸಿ ಟೂರ್ನಿಗಳಲ್ಲಿ ಎರಡು ತಂಡಗಳು ಮೈದಾನಕ್ಕೆ ಇಳಿಯುವಾಗ ಆಯಾ ದೇಶದ ರಾಷ್ಟ್ರಗೀತೆಯನ್ನು ಹಾಕಲಾಗುತ್ತದೆ. ಅದರಂತೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಪಂದ್ಯದ ವೇಳೆಯೂ ಹಾಕಲಾಯಿತು.
ಲಾಹೋರ್‌ನಲ್ಲಿ ನಡೆದ ಪಂದ್ಯದ ವೇಳೆ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ರಾಷ್ಟ್ರಗೀತೆಗಾಗಿ ಮೈದಾನಕ್ಕೆ ಬಂದವು. ಆ ಸಮಯದಲ್ಲಿ ಇಂಗ್ಲೆಂಡ್ ರಾಷ್ಟ್ರಗೀತೆಯ ಬದಲಿಗೆ ಭಾರತೀಯ ರಾಷ್ಟ್ರಗೀತೆ ನುಡಿಸಲು ಪ್ರಾರಂಭಿಸಲಾಯಿತು. ಈ ದೃಶ್ಯ ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಚಾಂಪಿಯನ್ಸ್ ಟ್ರೋಫಿಯ ವೇಳೆ ಈ ರೀತಿ ಎಡವಟ್ಟು ಆಗಿದ್ದು ಇದೇ ಮೊದಲೇನಲ್ಲ. ಇದಕ್ಕೂ ಮೊದಲು ಪಾಕಿಸ್ತಾನದ ಮೈದಾನದಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ದೇಶಗಳ ಧ್ವಜವನ್ನು ಹಾರಿಸಲಾಗಿತ್ತು. ಆದರೆ ಇದರಲ್ಲಿ ಭಾರತದ ಧ್ವಜ ಇರಲಿಲ್ಲ. ಆಗಲೂ ವಿವಾದ ಸೃಷ್ಟಿಸಿಕೊಂಡಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications