ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಗೆ ಭಾರತ ತಂಡ ಪ್ರಕಟ
ನವದೆಹಲಿ, ಆಕ್ಟೋಬರ್ 14 : ಇದೇ ಅಕ್ಟೋಬರ್ 22ರಿಂದ ಅ,29ರವರೆಗೆ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ಭಾರತ ಪ್ರವಾಸ ಕೈಗೊಂಡಿರುವ ನ್ಯೂಜಿಲೆಂಡ್ ಮೂರು ಏಕದಿನ ಪಂದ್ಯಗಳ ಸರಣಿ ಹಾಗೂ ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದ್ದು, ಮೊದಲು 3 ಏಕದಿನ ಪಂದ್ಯಗಳಿಗೆ ಬಿಸಿಸಿಐ ಶನಿವಾರ ಭಾರತ ತಂಡವನ್ನು ಪ್ರಕಟಿಸಿದೆ.

ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ. ಇನ್ನು ಭಾರತದ ಟಾಪ್ ಸ್ಪಿನ್ನರ್ ಗಳಾದ ಅಶ್ವಿನ್ ಹಾಗೂ ಜಡೇಜಾಗೆ ವಿಶ್ರಾಂತಿ ನೀಡಲಾಗಿದೆ. ಕನ್ನಡಿಗ ಕೆಲ್ ರಾಹುಲ್ ಅವರನ್ನು ಕೈಬಿಡಲಾಗಿದ್ದು, ಮನಿಷ್ ಪಾಂಡೆ ಹಾಗೂ ದಿನೇಶ್ ಕಾರ್ತಿಕ್ ಹಾಗೂ ಶರ್ದುಲ್ ಠಾಕೂರ್ ಗೆ ಅವಕಾಶ ನೀಡಲಾಗಿದೆ.
ಮುಂಬೈನ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾದಲ್ಲಿ ಕಿವೀಸ್ ತಂಡವು 2 ಅಭ್ಯಾಸ ಪಂದ್ಯಗಳನ್ನಾಡಲಿದೆ. ಅಕ್ಟೋಬರ್ 17 ಹಾಗೂ 19ರಂದು ಈ ಪಂದ್ಯಗಳು ನಿಗದಿಯಾಗಿವೆ.
ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ, ಶಿಖರ್ ದವನ್, ಅಜಿಂಕ್ಯಾ ರಹಾನ್, ಮನಿಷ್ ಪಾಂಡೆ, ಕೇದರ್ ಜಾದವ್, ದನೇಶ್ ಕಾರ್ತಿಕ್, ಎಂ.ಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಚಹಲ್, ಬುಮ್ರಾ, ಭುವನೇಶ್ವರ್ ಕುಮಾರ್, ಶರ್ದುಲ್ ಠಾಕೂರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications