ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್: ಭಾರತದ ವಿರುದ್ಧ ಕನ್ನಡಿಗ ರಚಿನ್ ಕಣಕ್ಕಿಳಿಯುವ ಸಾಧ್ಯತೆ

Indian origin player Rachin Ravindra picked by New Zealand for WTC Final

ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಬಿಸಿಸಿಐ ಈಗಾಗಲೇ 20 ಆಟಗಾರರ ಭಾರತ ತಂಡವನ್ನು ಪ್ರಕಟಿಸಿದೆ. ಅತ್ತ 20 ಆಟಗಾರರನ್ನೊಳಗೊಂಡ ನ್ಯೂಜಿಲೆಂಡ್ ತಂಡ ಈಗಾಗಲೇ ಇಂಗ್ಲೆಂಡ್ ತಲುಪಿದೆ.

ಸ್ಮಿತ್ ಆಟಗಾರರನ್ನು ಬೆಳೆಯಲು ಬಿಡುವುದಿಲ್ಲ ಎಂದ ತ್ಸೊತ್ಸೊಬೆ ; ಎಬಿಡಿ ಹೆಸರು ಕೂಡ ಉಲ್ಲೇಖಸ್ಮಿತ್ ಆಟಗಾರರನ್ನು ಬೆಳೆಯಲು ಬಿಡುವುದಿಲ್ಲ ಎಂದ ತ್ಸೊತ್ಸೊಬೆ ; ಎಬಿಡಿ ಹೆಸರು ಕೂಡ ಉಲ್ಲೇಖ

ವಿಶೇಷವೆಂದರೆ ಇಂಗ್ಲೆಂಡ್ ತಲುಪಿರುವ 20 ಆಟಗಾರರ ನ್ಯೂಜಿಲೆಂಡ್ ತಂಡದಲ್ಲಿ ಕರ್ನಾಟಕದ 21ರ ಹರೆಯದ ಹುಡುಗ ರಚಿನ್ ರವೀಂದ್ರ ಸ್ಥಾನ ಪಡೆದುಕೊಂಡಿದ್ದಾರೆ. ರಚಿನ್ ರವೀಂದ್ರ ಅವರ ಪೋಷಕರು ಮೂಲತಃ ಕರ್ನಾಟಕದವರಾಗಿದ್ದರೂ ಸಹ ನ್ಯೂಜಿಲೆಂಡ್‌ನಲ್ಲಿ ನೆಲೆಸಿದ್ದು ಸಾಫ್ಟ್ ವೇರ್ ಇಂಜಿನಿಯರ್‌ಗಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಭಾರತೀಯ ಪುರುಷ, ಮಹಿಳಾ ತಂಡ ಜೊತೆಯಾಗಿ ಮುಂಬೈಗೆ ಪ್ರಯಾಣಭಾರತೀಯ ಪುರುಷ, ಮಹಿಳಾ ತಂಡ ಜೊತೆಯಾಗಿ ಮುಂಬೈಗೆ ಪ್ರಯಾಣ

ಆಲ್‌ರೌಂಡರ್ ಆಟಗಾರನಾಗಿರುವ ರಚಿನ್ ರವೀಂದ್ರ 18 ವರ್ಷವಿದ್ದಾಗಲೇ ನ್ಯೂಜಿಲೆಂಡ್ ಪರ ಪ್ರಥಮ ದರ್ಜೆ ಕ್ರಿಕೆಟ್ ಆಡಿ ಇದುವರೆಗೂ 3 ಶತಕ ಮತ್ತು 9 ಅರ್ಧಶತಕಗಳನ್ನು ಸಿಡಿಸಿ ಮಿಂಚಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ಇದುವರೆಗೂ 1470 ರನ್ ಗಳಿಸಿರುವ ರಚಿನ್ 22 ವಿಕೆಟ್‍ಗಳನ್ನು ಪಡೆದುಕೊಂಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ಉತ್ತಮ ಪ್ರದರ್ಶನ ತೋರಿದ ಕಾರಣಕ್ಕೆ ರಚಿನ್ ರವೀಂದ್ರ ಅವರಿಗೆ ನ್ಯೂಜಿಲೆಂಡ್ ಆಯ್ಕೆ ಸಮಿತಿ ಅವಕಾಶವನ್ನು ನೀಡಿದ್ದು ಮುಂಬರುವ ಭಾರತದ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Story first published: Thursday, May 20, 2021, 14:36 [IST]
Other articles published on May 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X