ಭಾರತ vs ನ್ಯೂಜಿಲೆಂಡ್: ಪ್ರಮುಖ ವಿಶ್ವದಾಖಲೆ ಮೇಲೆ ಭುವನೇಶ್ವರ್ ಕುಮಾರ್ ಕಣ್ಣು

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಶುಕ್ರವಾರದಿಂದ ಮೂರು ಪಂದ್ಯಗಳ ಚುಟುಕು ಸರಣಿ ಆರಂಭವಾಗಲಿದ್ದು ಕೆಲ ಅನುಭವಿಗಳ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಇನ್ನು ಈ ಸರಣಿಯಲ್ಲಿ ಟೀಮ್ ಇಂಡಿಯಾದ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಪ್ರಮುಖ ಟಿ20 ದಾಖಲೆಯೊಂದನ್ನು ಬರೆಯುವ ಸನಿಹದಲ್ಲಿದ್ದಾರೆ.
ಈ ವರ್ಷ ಟಿ20 ಕ್ರಿಕೆಟ್ ಮಾದರಿಯಲ್ಲಿ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅದ್ಭುತ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಟಿ20 ವಿಶ್ವಕಪ್‌ನಲ್ಲಿ ಭುವಿ ಪ್ರದರ್ಶನ ಸಾಧಾರಣವಾಗಿತ್ತು. ಆದರಲ್ಲೂ ಸೆಮಿಫೈನಲ್ ಪಂದ್ಯದಲ್ಲಿ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡಲು ಸಂಪೂರ್ಣವಾಗಿ ವಿಫಲವಾಗಿದ್ದರು. ಈ ಹಿನ್ನಡೆಯ ಮಧ್ಯೆಯೂ ಟಿ20ಐ ಮಾದರಿಯಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯುವ ಅದ್ಭುತ ಅವಕಾಶ ಭುವಿ ಮುಂದಿದೆ.

ವಿಶ್ವದಾಖಲೆಯ ಸನಿಹ ಭುವನೇಶ್ವರ್ ಕುಮಾರ್
ಈ ವರ್ಷ ಟಿ20 ಮಾದರಿಯಲ್ಲಿ ಭುವನೇಶ್ವರ್ ಕುಮಾರ್ ಈವರೆಗೆ ಒಟ್ಟು 36 ವಿಕೆಟ್ ಪಡೆದು ಮಿಂಚಿದ್ದಾರೆ. ಇದೀಗ ಕ್ಯಾಲೆಂಡರ್ ವರ್ಷದಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವದಾಖಲೆಯನ್ನು ಭುವನೇಶ್ವರ್ ಕುಮಾರ್ ತಮ್ಮ ಹೆಸರಿಗೆ ಬರೆಯುವ ಅವಕಾಶವಿದೆ. ಐರ್ಲೆಂಡ್ ತಂಡದ ಎಡಗೈ ವೇಗಿ ಶೋಶುವಾ ಲಿಟಲ್ 26 ಪಂದ್ಯಗಳಲ್ಲಿ 39 ವಿಕೆಟ್ ಪಡೆದುಕೊಂಡಿದ್ದು ಈ ಸಾಧನೆಯನ್ನು ಮಾಡಿದ್ದಾರೆ. ಈ ದಾಖಲೆಯನ್ನು ಮುರಿಯಲು ಭುವಿಗೆ ಕೇವಲ 4 ವಿಕೆಟ್‌ಗಳ ಅಗತ್ಯವಿದೆ.

ಆಸಿಸ್ ನೆಲದಲ್ಲಿ ಸಾಧಾರಣ ಪ್ರದರ್ಶನ
ಟಿ20 ವಿಶ್ವಕಪ್‌ನಲ್ಲಿ ಭುವನೇಶ್ವರ್ ಕುಮಾರ್ ಸಾಧಾರಣ ಪ್ರದರ್ಶನ ನೀಡಿದ್ದಾರೆ. ಅದೆರಲ್ಲೂ ವಿಕೆಟ್ ಪಡೆಯುವ ವಿಚಾರದಲ್ಲಿ ಅನುಭವಿ ಬೌಲರ್ ನಿರೀಕ್ಷಿತ ಯಶಸ್ಸು ಸಾಧಿಸಲಿಲ್ಲ. ಆಡಿರುವ ಆರು ಪಂದ್ಯಗಳಲ್ಲಿ ಭುವಿ ಪಡೆದುಕೊಂಡಿದ್ದು ಕೇವಲ ನಾಲ್ಕು ವಿಕೆಟ್ ಮಾತ್ರ. ಆದರೆ ಭಾರತದ ಪರವಾಗಿ ಅತ್ಯಂತ ಎಕನಾಮಿಕಲ್ ಬೌಲರ್ ಎನಿಸಿಕೊಂಡಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ಭುವಿ 6.16ರ ಎಕಾನಮಿಯಲ್ಲಿ ಬೌಲಿಂಗ್ ನಡೆಸಿದ್ದರು.

100 ವಿಕೆಟ್‌ಗೆ ಸನಿಹ ಭುವಿ
ಇನ್ನು ಟೀಮ್ ಇಂಡಿಯಾ ಪರವಾಗಿ ಮತ್ತೊಂದು ಮಹತ್ತರ ಮೈಲಿಗಲ್ಲಿನ ಸನಿಹದಲ್ಲಿದ್ದಾರೆ ಭುವನೇಶ್ವರ್ ಕುಮಾರ್. ಅಂತಾರಾಷ್ಟ್ರೀಯ ಟಿ20 ಮಾದರಿಯಲ್ಲಿ 100 ವಿಕೆಟ್ ಪಡೆದ ಮೊದಲ ಬೌಲರ್ ಎನಿಸಿಕೊಳ್ಳಲು ಭುವಿ ಮತ್ತಷ್ಟು ಹತ್ತಿರವಾಗಿದ್ದಾರೆ. ಈ ಸಾಧನೆ ಮಾಡಲು ಭುವನೇಶ್ವರ್ ಕುಮಾರ್‌ಗೆ ಇನ್ನು 11 ವಿಕೆಟ್‌ಗಳ ಅಗತ್ಯವಿದೆ. ಸದ್ಯ ಚುಟುಕು ಮಾದರಿಯಲ್ಲಿ ಭಾರತದ ಪರವಾಗಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ ಭುವನೇಶ್ವರ್ ಕುಮಾರ್.
ನ್ಯೂಜಿಲೆಂಡ್ ಪ್ರವಾಸದಲ್ಲಿ ಭಾರತ ತಂಡ ಮೂರು ಪಂದ್ಯಗಳ ಟಿ20 ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗಿಯಾಗಲಿದೆ. ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ನಾಯಕನಾಗಿ ತಂಡವನ್ನು ಮುನ್ನಡೆಸಿದರೆ ಬಳಿಕ ಏಕದಿನ ಸರಣಿಗೆ ಅನುಭವಿ ಆಟಗಾರ ಶಿಖರ್ ಧವನ್ ಮುನ್ನಡೆಸಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications