Rohit Sharma Most Sixes: ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ
ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ 2023ರ ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ಭಾರ ತಂಡಕ್ಕೆ ಸ್ಪೋಟಕ ಆರಂಭ ನೀಡಿದ್ದಾರೆ. ಈ ಪಂದ್ಯದಲ್ಲಿ ಸಿಕ್ಸರ್ ಸಿಡಿಸುವ ಮೂಲ ಏಕನ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ರೋಹಿತ್ ಶರ್ಮಾ ಅತ್ಯಂತ ವಿಶೇಷ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಂತಾಗಿದೆ.
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನ ಇತಿಹಾಸದಲ್ಲಿ 50 ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಈ ಹಿಂದೆ 27 ಪಂದ್ಯಗಳಲ್ಲಿ 49 ಸಿಕ್ಸರ್ ಸಿಡಿಸಿದ್ದ ಕ್ರಿಸ್ ಗೇಲ್ ದಾಖಲೆ ಹಿಂದಿಕ್ಕಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ರೋಹಿತ್ ಶರ್ಮಾ ಮತ್ತೊಂದು ಕ್ರಿಸ್ ಗೇಲ್ ದಾಖಳೆ ಹಿಂದಿಕ್ಕಿದ್ದಾರೆ. ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಡಿಸಿದ ದಾಖಲೆಯನ್ನು ಕೂಡ ಕ್ರಿಸ್ ಗೇಲ್ ಹೊಂದಿದ್ದರು. 2015ರ ವಿಶ್ವಕಪ್ ಆವೃತ್ತಿಯಲ್ಲಿ ಗೇಲ್ 26 ಸಿಕ್ಸರ್ ಸಿಡಿಸಿದ್ದರು. ಈ ದಾಖಲೆಯನ್ನು ಕೂಡ ರೋಹಿತ್ ಶರ್ಮಾ ಹಿಂದಿಕ್ಕಿದ್ದಾರೆ.

ಇದಕ್ಕೂ ಮುನ್ನ ರೋಹಿತ್ ಶರ್ಮಾ ಏಕದಿನ ವಿಶ್ವಕಪ್‌ನಲ್ಲಿ ಕಪಿಲ್ ದೇವ್ ಅವರ ವೇಗದ ಶತಕದ ದಾಖಲೆಯನ್ನು ಮುರಿದರು. ಆದರೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರನ್ನು ಹಿಂದಿಕ್ಕಿದ್ದರಿಂದ ಅವರ ನಿರಾಸೆಗೆ ಈ ದಾಖಲೆ ಹೆಚ್ಚು ಕಾಲ ಉಳಿಯಲಿಲ್ಲ.
ಇನ್ನು ಇದರ ಜೊತೆಗೆ 36ರ ಹರೆಯದ ರೋಹಿತ್ ಶರ್ಮಾ ಕ್ಯಾಲೆಂಡರ್ ವರ್ಷದಲ್ಲಿ ಏಕದಿನ ಮಾದರಿಯಲ್ಲಿ50 ಸಿಕ್ಸರ್ ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪ್ರಸ್ತುತ ವಿಶ್ವಕಪ್‌ನಲ್ಲಿ ರೋಹಿತ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ರೋಹಿತ್ ಶರ್ಮಾ ಅಬ್ಬರದ ಪ್ರದರ್ಶನದಿಂದಾಗಿ ಟೀಮ್ಇಂಡಿಯಾ ಅದ್ಭುತ ಆರಂಭ ಪಡೆದುಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕ ಮಡಿಕೊಂಡಿದೆ. ಕೇವಲ 29 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 47 ರನ್ ಬಾರಿಸಿ ವಿಕೆಟ್ ಕಳೆದುಕೊಂಡಿದ್ದಾರೆ. ಶುಬ್ಮನ್ ಗಿಲ್ ಜೊತೆಗೆ ಸೇರಿಕೊಂಡು ಮೊದಲ ವಿಕೆಟ್‌ಗೆ ರೋಹಿತ್ ಶರ್ಮ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications