ಮುಂಬೈ ಟೆಸ್ಟ್ ನಂತರ ದ. ಆಪ್ರಿಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ: ಅನುಭವಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತ

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಅಂತ್ಯವಾಗುತ್ತಾ ಬಂದಿದ್ದು ಪಂದ್ಯದಲ್ಲಿ ಗೆಲುವು ಸಾಧಿಸುವ ಸನಿಹದಲ್ಲಿದೆ. ಈ ಸಂದರ್ಭ ಟೀಮ್ ಇಂಡಿಯಾದ ದಕ್ಷಿಣ ಆಪ್ರಿಕಾ ಪ್ರವಾಸ ಈಗ ಸಾಕಷ್ಟು ಚರ್ಚೆಯಾಗುತ್ತಿದೆ. ಕೊರೊನಾವೈರಸ್‌ನ ಹೊಸ ರೂಪಾಂತರಿಯ ಅಟ್ಟಹಾಸದಿಂದ ನಲುಗಿರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಮ್ ಇಂಡಿಯಾ ಪ್ರವಾಸ ಕೈಗೊಳ್ಳಬೇಕೋ ಬೇಡವೋ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದು ಸದ್ಯ ಹತ್ತು ದಿನಗಳ ಕಾಲ ಸರಣಿಯನ್ನು ಮುಂದೂಡಲಾಗಿದ್ದು ಪ್ರವಾಸ ಕೈಗೊಳ್ಳುವ ನಿರ್ಧಾರವನ್ನು ತೆಗೆದುಕೊಂಡಿದೆ.

ಇದೀಗ ದಕ್ಷಿಣ ಆಫ್ರಿಕಾಗೆ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾದ ಆಯ್ಕೆ ಯಾವಾಗ ಎಂಬ ಪ್ರಶ್ನೆಗೆ ಉತ್ತರ ದೊರೆತಿದೆ. ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಅಂತ್ಯವಾದ ಬಳಿಕ ಆಯ್ಕೆ ಸಮಿತಿ ಸಭೆ ನಡೆಸಲಿದ್ದು ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ತಳಿದು ಬಂದಿದೆ.

ಭಾರತ-ನ್ಯೂಜಿಲೆಂಡ್ 2ನೇ ಟೆಸ್ಟ್‌: ಡಿಕ್ಲೇರ್ ಘೋಷಿಸಿದ ಟೀಂ ಇಂಡಿಯಾ, ಭಾರತಕ್ಕೆ 539 ರನ್‌ಗಳ ಮುನ್ನಡೆಭಾರತ-ನ್ಯೂಜಿಲೆಂಡ್ 2ನೇ ಟೆಸ್ಟ್‌: ಡಿಕ್ಲೇರ್ ಘೋಷಿಸಿದ ಟೀಂ ಇಂಡಿಯಾ, ಭಾರತಕ್ಕೆ 539 ರನ್‌ಗಳ ಮುನ್ನಡೆ

ಅಜಿಂಕ್ಯಾ ರಹಾನೆ ಸ್ಥಾನದ ಬಗ್ಗೆ ಭಾರೀ ಚರ್ಚೆ: ಇನ್ನು ಟೀಮ್ ಇಂಡಿಯಾ ಟೆಸ್ಟ್ ತಂಡದ ಉಪ ನಾಯಕನಾಗಿರುವ ಅಜಿಂಕ್ಯಾ ರಹಾನೆ ಆಯ್ಕೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದೆ. ಈಗಾಗಲೇ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅಜಿಂಕ್ಯಾ ರಹಾನೆಯ ಉಪ ನಾಯಕ ಸ್ಥಾನ ಕೈ ತಪ್ಪುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಈಗ ದೊರೆತಿರುವ ಮಾಹಿತಿಯ ಪ್ರಕಾರ ಟೀಮ್ ಇಂಡಿಯಾದ ಈ ಅನುಭವಿ ಆಟಗಾರನ ಸ್ಥಾನವೇ ಈಗ ತೂಗುಯ್ಯಾಲೆಯಲ್ಲಿದೆ ಎನ್ನಲಾಗಿದೆ.

ರಹಾನೆ ಸೇರ್ಪಡೆ ಮೇಲೆ ಆಯ್ಕೆ ಸಮಿತಿಗೆ ಇಲ್ಲ ಒಲವು?: ಅನುಭವಿ ಆಟಗಾರ ಅಜಿಂಕ್ಯಾ ರಹಾನೆ ಸತತವಾಗಿ ವೈಫಲ್ಯವನ್ನು ಅನುಭವಿಸಿದ ನಂತರ ಗಾಯದ ಕಾರಣದಿಂದಾಗಿ ಮುಂಬೈ ಟೆಸ್ಟ್‌ನಿಂದ ರಹಾನೆ ಹೊರಗುಳಿದಿದ್ದಾರೆ. ಎರಡನೇ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ರಹಾನೆ ಸ್ಥಾನವನ್ನು ತುಂಬಿದ್ದಾರೆ. ಈಗ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಬಿಸಿಸಿಐನ ಆಯ್ಕೆ ಸಮಿತಿ ಅಜಿಂಕ್ಯಾ ರಹಾನೆಯನ್ನು ಆಯ್ಕೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಸೋಮವಾರ ಅಥವಾ ಮಂಗಳವಾರ ಆಯ್ಕೆ ಸಮಿತಿ ಸಭೆ ನಡೆಯಲಿದ್ದು ಅಲ್ಲಿ ಅಜಿಂಕ್ಯಾ ರಹಾಣೆ ವಿಚಾರವಾಗಿ ಸಾಕಷ್ಟು ಚರ್ಚೆ ನಡೆಯಲಿದೆ.

ನ್ಯೂಜಿಲೆಂಡ್ 62ರನ್‌ಗೆ ಆಲೌಟ್ ಆದ್ರೂ, ಭಾರತ ಏಕೆ ಫಾಲೋ ಆನ್ ಹೇರಲಿಲ್ಲ? ದಿನೇಶ್ ಕಾರ್ತಿಕ್ ಉತ್ತರನ್ಯೂಜಿಲೆಂಡ್ 62ರನ್‌ಗೆ ಆಲೌಟ್ ಆದ್ರೂ, ಭಾರತ ಏಕೆ ಫಾಲೋ ಆನ್ ಹೇರಲಿಲ್ಲ? ದಿನೇಶ್ ಕಾರ್ತಿಕ್ ಉತ್ತರ

ತಂಡದ ಮ್ಯಾನೇಜ್‌ಮೆಂಟ್‌ಗೆ ಬಿಟ್ಟ ವಿಚಾರ: ಇನ್ನು ಅಜಿಂಕ್ಯಾ ರಹಾನೆಯ ಟೀಮ್ ಇಂಡಿಯಾದ ಭವಿಷ್ಯದ ಬಗ್ಗೆ ಬಿಸಿಸಿಐನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. "ಇದೊಂದು ಕಠಿಣವಾದ ನಿರ್ಧಾರವಾಗಿರಲಿದೆ. ಆತ ಸಾಕಷ್ಟು ಪರದಾಟವನ್ನು ನಡೆಸುತ್ತಿದ್ದಾರೆ. ಆದರೆ ತಂಡದ ಮ್ಯಾನೇಜ್‌ಮೆಂಟ್ ರಹಾನೆ ಬೆಂಬಲಕ್ಕೆ ನಿಂತಿದೆ. ಆತನದ್ದು ನಿಜಕ್ಕೂ ಅದ್ಭುತವಾದ ವೃತ್ತಿ ಜೀವನ. ಟೀಮ್ ಮ್ಯಾನೇಜ್‌ಮೆಂಟ್ ನಿರ್ಧಾರದ ಮೇಲೆ ಆತನ ಆಯ್ಕೆ ನಡೆಯಲಿದೆ ಎಂದಿದ್ದಾರೆ" ಎಂದು ಬಿಸಿಸಿಐನ ಮೂಲಗಳು ಮಾಹಿತಿ ನೀಡಿದೆ.

Ashwin Bold ಆದ ನಂತರ ಮಾಡಿಕೊಂಡ ಎಡವಟ್ಟೇನು | Oneindia Kannada

For Quick Alerts
ALLOW NOTIFICATIONS
For Daily Alerts
Story first published: Sunday, December 5, 2021, 20:57 [IST]
Other articles published on Dec 5, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X