WTC ಫೈನಲ್ ಹಾಗೂ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಗೆ ಭಾರತದ ತಂಡ ಪ್ರಕಟ

ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಮತ್ತು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಶುಕ್ರವಾರ ನಡೆದ ಟೀಮ್ ಇಂಡಿಯಾ ಆಯ್ಕೆ ಸಮಿತಿಯ ಸಭೆಯ ನಂತರ ಈ ತಂಡವನ್ನು ಘೋಷಿಸಲಾಗಿದೆ.
ವಿರಾಟ್ ಕೊಹ್ಲಿ ನೇತೃತ್ವದ 20 ಸದಸ್ಯರ ತಂಡವನ್ನು ಈ ಸರಣಿಗೆ ಪ್ರಕಟಿಸಲಾಗಿದೆ. ಆದರೆ ಕೆಎಲ್ ರಾಹುಲ್ ಹಾಗೂ ವೃದ್ಧಿಮಾನ್ ಸಾಹಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಈ ಇಬ್ಬರನ್ನು ಈ 20 ಆಟಗಾರರ ಬಳಗದಲ್ಲಿ ಹೆಸರಿಸಲಾಗುದ್ದರೂ ಫಿಟ್‌ನೆಸ್ ಪರೀಕ್ಷೆಯನ್ನು ಎದುರಿಸಿಬೇಕಿದೆ.
ಟೀಮ್ ಇಂಡಿಯಾಗೆ ಆಯ್ಕೆಯಾಗಿರುವ ಸಂಪೂರ್ಣ ತಂಡ ಹಾಗೂ ಇತರ ಪ್ರಮುಖ ಮಾಹಿತಿಗಳಿಗಾಗಿ ಮುಂದೆ ಓದಿ..

ಇಂಗ್ಲೆಂಡ್‌ಗೆ ಹಾರಲಿರುವ ಟೀಮ್ ಇಂಡಿಯಾ ಸ್ಕ್ವಾಡ್
ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್ ರಾಹುಲ್(ಫಿಟ್‌ನೆಸ್ ಪರೀಕ್ಷೆಗೆ ಒಳಪಡಬೇಕಿದೆ) ಮತ್ತು ವೃದ್ಧಿಮಾನ್ ಸಾಹಾ (ಫಿಟ್‌ನೆಸ್ ಪರೀಕ್ಷೆಗೆ ಒಳಪಡಬೇಕಿದೆ)

ನಾಲ್ವರು ಮೀಸಲು ಆಟಗಾರರು
ಈ ಸುದೀರ್ಘ ಪ್ರವಾಸಕ್ಕಾಗಿ ನಾಲ್ವರು ಮೀಸಲು ಆಟಗಾರರನ್ನು ಬಿಸಿಸಿಐ ಹೆಸರಿಸಿದೆ. ಟೀಮ್ ಇಂಡಿಯಾ ಸ್ಕ್ವಾಟ್ ಜೊತೆಗೆ ಈ ಆಟಗಾರರು ಕೂಡ ಇಂಗ್ಲೆಂಡ್‌ಗೆ ಪ್ರಯಾಣವನ್ನು ಬೆಳೆಸಲಿದ್ದಾರೆ. ಆ ಆಟಗಾರರೆಂದರೆ: ಅಭಿಮನ್ಯು ಈಶ್ವರನ್, ಪ್ರಸಿದ್ಧ್ ಕೃಷ್ಣ, ಆವೇಶ್ ಖಾನ್, ಅರ್ಜಾನ್ ನಾಗ್ವಾಸ್ವಲ್ಲಾ

ಸ್ಥಾನ ಪಡೆಯದ ಪ್ರಮುಖರು
ಈ ಸುದೀರ್ಘ ಹಾಗೂ ಪ್ರತಿಷ್ಠಿತ ಪ್ರವಾಸದಲ್ಲಿ ಯಾವುದೇ ಅಚ್ಚರಿಯ ಆಯ್ಕೆಗಳನ್ನು ಮಾಡಿಲ್ಲ. ಆದರೆ ಹಾರ್ದಿಕ್ ಪಾಂಡ್ಯ, ಟಿ ನಟರಾಜನ್, ಪೃಥ್ವಿ ಶಾ, ನವ್‌ದೀಪ್ ಸೈನಿ ಹಾಗೂ ಕುಲ್‌ದೀಪ್ ಯಾದವ್ ಈ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿಲ್ಲ.

ಇಂಗ್ಲೆಂಡ್ ಪ್ರವಾಸ
ಟೀಮ್ ಇಂಡಿಯಾ ಮೊದಲಿಗೆ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಜೂನ್ 18-22ರವರೆಗೆ ಸೌಥಾಂಪ್ಟನ್‌ನಲ್ಲಿ ನಡೆಯಲಿದೆ. ಅದಾದ ನಂತರ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಭಾಗಿಯಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications