ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಡೋ-ಆಸಿಸ್ ಟೆಸ್ಟ್ : ಸರಣಿಗೂ ಮುನ್ನ ಟೀಮ್ ಇಂಡಿಯಾ ಆಟಗಾರರಿಗೆ ಕ್ವಾರಂಟೈನ್

Indian Test Squad May Be Asked To Quarantine In Adelaide Before Australia Series

ವರ್ಷಾಂತ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ಆಸ್ಟ್ರೇಲಿಯಾ ನೆಲದಲ್ಲಿ ನಡೆಯಲಿರುವ ಈ ಸರಣಿಯ ಮೇಲೆ ಎಲ್ಲ ಕ್ರಿಕೆಟ್ ಪ್ರೇಮಿಗಳು ದೃಷ್ಟಿಯನ್ನಿಟ್ಟಿದ್ದಾರೆ. ಆದರೆ ಕೊರೊನಾ ವೈರಸ್ ಕಾರಣದಿಂದಾಗಿ ಭಾರತ ಕ್ರಿಕೆಟ್ ತಂಡ ಸರಣಿ ಆರಂಭಕ್ಕೂ ಎರಡು ವಾರಗಳ ಮುನ್ನ ಕ್ವಾರಂಟೈನ್ ಪೂರೈಸಿಕೊಳ್ಳಬೇಕಾದ ಸಾಧ್ಯತೆ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದೆ.

ಈ ವಿಚಾರವಾಗಿ ಕ್ರಿಕೆಟ್ ಆಸ್ಟ್ರೇಲಿಯಾದ ಮುಖ್ಯಸ್ಥ ನಿಕ್ ಹಾಕ್ಲೇ ಈ ಬಗ್ಗೆ ಹೇಳಿಕೆಯನ್ನು ನೀಡಿದ್ದಾರೆ. ಭಾರತೀಯ ಕ್ರಿಕೆಟಿಗರು ಹಾಗೂ ಸಿಬ್ಬಂದಿಗಳು ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನ ಎರಡು ವಾರಗಳ ಕಾಲ ಕ್ವಾರಂಟೈ್ ಅವಧಿಯನ್ನು ಪೂರೈಸುವ ಬಗ್ಗೆ ಕೇಳಿಕೊಳ್ಳಲಾಗುತ್ತದೆ ಎಂದಿದ್ದಾರೆ.

ಇಂಗ್ಲೆಂಡ್ vs ವೆಸ್ಟ್ ಇಂಡೀಸ್, 2ನೇ ಟೆಸ್ಟ್: ಕೆರಿಬಿಯನ್ನರ ಮಣಿಸಿದ ಆಂಗ್ಲರುಇಂಗ್ಲೆಂಡ್ vs ವೆಸ್ಟ್ ಇಂಡೀಸ್, 2ನೇ ಟೆಸ್ಟ್: ಕೆರಿಬಿಯನ್ನರ ಮಣಿಸಿದ ಆಂಗ್ಲರು

ಈಎಸ್‌ಪಿಎನ್ ಕ್ರಿಕ್‌ಇನ್ಪೋ ಈ ಬಗ್ಗೆ ವರದಿಯನ್ನು ಮಾಡಿದ್ದು ಅಡಿಲೇಡ್ ಓವಲ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡ ಕ್ವಾರಂಟೈನ್‌ಗೆ ಒಳಗಾಗುವ ಸಾಧ್ಯತೆಯನ್ನು ತಿಳಿಸಿದೆ. ಡಿಸೆಂಬರ್‌ 4 ರಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಆರಂಭವಾಗಲಿದೆ.

ಅಡಿಲೇಡ್ ಸ್ಟೇಡಿಯಮ್‌ ಹೋಟೆಲ್ ವ್ಯವಸ್ಥೆಯನ್ನು ಕೂಡ ಹೊಂದಿದೆ. ಓಲ್ಡ್ ಟ್ರಾಫರ್ಡ್ ಹಾಗೂ ಏಜಸ್ ಬೌಲ್‌ನಂತೆಯೇ ಕ್ರಿಡಾಂಗಣಕ್ಕೆ ಈ ಹೋಟೆಲ್ ಹೊಂದಿಕೊಂಡಂತಿರುವುದರಿಂದ ಅನುಕೂಲವಾಗಿದೆ ಎಂದು ನಿಕ್ ಹಾಕ್ಲೆ ತಿಳಿಸಿದ್ದಾರೆ.

ಐಪಿಎಲ್‌ ದಾರಿಯಿನ್ನು ಸುಲಭ, ಐಸಿಸಿ ಟಿ20 ವಿಶ್ವಕಪ್ ಮುಂದೂಡಿಕೆಐಪಿಎಲ್‌ ದಾರಿಯಿನ್ನು ಸುಲಭ, ಐಸಿಸಿ ಟಿ20 ವಿಶ್ವಕಪ್ ಮುಂದೂಡಿಕೆ

ಎರಡು ವಾರಗಳ ಕ್ವಾರಂಟೈನ್ ಸಾಕಷ್ಟು ವ್ಯವಸ್ಥಿತವಾಗಿದೆ. ಈ ಅವಧಿಯಲ್ಲಿ ಕ್ರಿಕೆಟ್ ಆಟಗಾರರಿಗೆ ಅಭ್ಯಾಸಕ್ಕೆ ಪೂರಕವಾಗಿಯೇ ವ್ಯವಸ್ಥೆಗಳು ಇರಲಿದೆ. ಅದಕ್ಕೆ ಅನುವಾಗುವಂತೆ ವ್ಯವಸ್ಥೆ ಮಾಡಲು ನಾವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಕ್ ಹ್ಯಾಕ್ಲೆ ಹೇಳಿಕೆಯನ್ನು ನೀಡಿದ್ದಾರೆ.

Story first published: Tuesday, July 21, 2020, 15:44 [IST]
Other articles published on Jul 21, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X