ಖ್ಯಾತ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿಗೆ ಮಾತೃ ವಿಯೋಗ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಇದೀಗ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ (63) ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ
ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೇದಾಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ ಅವರನ್ನು ಕಡೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿತ್ತು. 4 ದಿನಗಳ ಹಿಂದೆ ಕಡೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚೆಲುವಾಂಬ ಅವರು ಚಿಕಿತ್ಸೆ ಫಲಿಸದ ಕಾರಣ ಅಸುನೀಗಿದ್ದಾರೆ.
ಕಳೆದ ಜನವರಿ 12ರಂದು ಚೆಲುವಾಂಬ ಅವರು ತಮ್ಮ ಪತಿ ಹಾಗೂ ಮಗಳು ವೇದಾಕೃಷ್ಣಮೂರ್ತಿ ಅವರ ಜೊತೆಗೆ ತಮ್ಮ 63ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಸಂಭ್ರಮಿಸಿದ್ದರು. ಇಂದು ಚೆಲುವಾಂಬ ಅವರು ಪತಿ ಮತ್ತು ಮಗಳು ವೇದಾ ಕೃಷ್ಣಮೂರ್ತಿ ಅವರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
Story first published: Saturday, April 24, 2021, 13:14 [IST]
Other articles published on Apr 24, 2021
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications