ಭಾರತದ 5 ನಗರಗಳಲ್ಲಿ ಟಿ20 ವಿಶ್ವಕಪ್: ಅಹಮದಾಬಾದ್‌ನಲ್ಲಿ ಫೈನಲ್: ಬೆಂಗಳೂರಿಗೆ ಇಲ್ಲ ಆತಿಥ್ಯ
ಮುಂದಿನ ವರ್ಷ ಭಾರತದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಈ ವೇಳೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೈದಾನಗಳನ್ನು ಆಯ್ಕೆ ಮಾಡಿದೆ. ಅಹಮದಾಬಾದ್, ದೆಹಲಿ, ಕೋಲ್ಕತ್ತಾ, ಚೆನ್ನೈ ಮತ್ತು ಮುಂಬೈ ನಗರಗಳು ಟಿ20 ವಿಶ್ವಕಪ್‌ಗೆ ಆತಿಥ್ಯವನ್ನು ವಹಿಸಲಿವೆ. ಅಲ್ಲದೆ ಅಹಮದಾಬಾದ್‌ನಲ್ಲಿ ಫೈನಲ್ ಪಂದ್ಯಕ್ಕೆ ಆತಿಥ್ಯ ಸಿಗುವ ಸಾಧ್ಯತೆ ದಟ್ಟವಾಗಿದೆ.
ಟಿ20 ವಿಶ್ವಕಪ್ 2026ಕ್ಕೆ ಭಾರತ ಆತಿಥ್ಯ ವಹಿಸಲಿದೆ. ಈ ವೇಳೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಒಂದೇ ಒಂದು ಪಂದ್ಯ ನಡೆಯುವುದು ನಿಜಕ್ಕೂ ಅಭಿಮಾನಿಗಳಿಗೆ ಬೇಸರದ ವಿಷಯವಾಗಿದೆ. ಐಪಿಎಲ್ 18ನೇ ಆವೃತ್ತಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಆರ್‌ಸಿಬಿ ತಂಡ ವಿಕ್ಟರಿ ಪೆರೆಡ್ ವೇಳೆ, ಕಾಲ್ತುಳಿತ ಸಂಭವಿಸಿತ್ತು. ಈ ವೇಳೆ 11 ಜನರು ಸಾವನ್ನಪ್ಪಿದ್ದರು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘವು ಅಗತ್ಯ ಅನುಮೋದನೆಗಳನ್ನು ಪಡೆಯುವಲ್ಲಿ ವಿಫಲವಾದ ನಂತರ ಮಹಿಳಾ ಏಕದಿನ ವಿಶ್ವಕಪ್ ಆತಿಥ್ಯ ಪಡೆಯುವಲ್ಲಿ ವಿಫಲವಾಗಿದೆ.

2023ರಲ್ಲಿ ಏಕದಿನ ವಿಶ್ವಕಪ್ ಫೈನಲ್‌ಗೆ ಅಹಮದಬಾದ್ ಆತಿಥ್ಯ ನೀಡಿತ್ತು. ಏಕದಿನ ವಿಶ್ವಕಪ್‌ನ್ನು ಭಾರತದ 10 ನಗರಗಳಲ್ಲಿ ನಡೆಸಲಾಗಿತ್ತು. ಈ ಬಾರಿ 5 ನಗರಗಳಲ್ಲಿ ಟಿ20 ವಿಶ್ವಕಪ್ ಆಡಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಭಾರತವು ಹಾಲಿ ಚಾಂಪಿಯನ್ ಆಗಿ ತವರಿನಲ್ಲಿ ವಿಶ್ವಕಪ್ ಪ್ರವೇಶಿಸಲಿದೆ. ಬಿಸಿಸಿಐ ಮತ್ತು ಪಿಸಿಬಿ ಒಪ್ಪಂದದಂತೆ ಉಭಯ ದೇಶಗಳ ಐಸಿಸಿ ಹಾಗೂ ಎಸಿಸಿ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಿಸಲು ನಿರ್ಧರಿಸಲಾಗಿದೆ. ಪಾಕ್ ತಂಡ ತನ್ನ ಎಲ್ಲ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಈ ಪಂದ್ಯಗಳನ್ನು ಕ್ಯಾಂಡಿ ಮತ್ತು ಕೊಲಂಬೊ ಸೇರಿದಂತೆ ಶ್ರೀಲಂಕಾದ ಮೂರು ಸ್ಥಳಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. ಪಾಕಿಸ್ತಾನ ಫೈನಲ್ ತಲುಪಿದರೆ, ಫೈನಲ್ ಅನ್ನು ಶ್ರೀಲಂಕಾದಲ್ಲಿ ಆಡಲಾಗುತ್ತದೆ. ಐಸಿಸಿಗಳ ಮೂಲಗಳ ಪ್ರಕಾರ ಪಾಕ್ ಸೆಮಿಫೈನಲ್ ಹಾಗೂ ಫೈನಲ್ ಹಂತವನ್ನು ತಲುಪಿದರೆ, ಈ ಪಂದ್ಯಗಳನ್ನು ಕೊಲಂಬೊದಲ್ಲಿ ಆಡುವ ಸಾಧ್ಯತೆ ಇದೆ.
ಎಷ್ಟು ತಂಡಗಳು ಭಾಗಿ?
2026ರಲ್ಲಿ ನಡೆಯಲಿರವು ವಿಶ್ವಕಪ್‌ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿವೆ. ಪ್ರತಿ ಗುಂಪಿನ ಅಗ್ರ 2 ತಂಡಗಳು ಸೂಪರ್ 8ಗೆ ಅರ್ಹತೆ ಪಡೆಯಲಿವೆ. ಇನ್ನು ಸೂಪರ್ 8 ಹಂತದಲ್ಲಿ ಸ್ಥಿರ ಪ್ರದರ್ಶನ ನೀಡಿದ ಈ ಹಂತದಲ್ಲೂ 8 ತಂಡಗಳನ್ನು 2 ಗುಂಪುಗಳಲ್ಲಿ ವಿಂಗಡಿಸಲಾಗುತ್ತದೆ. ಫೆಬ್ರವರಿ 7 ರಿಂದ ಮಾರ್ಚ್ 8ರ ವರೆಗೆ ಟೂರ್ನಿ ನಡೆಯಲಿದೆ. ಐಸಿಸಿ ಈ ಬಗ್ಗೆ ಇನ್ನು ಅಧಿಕೃತ ಮಾಹಿತಿಯನ್ನು ನೀಡುವುದು ಬಾಕಿ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications