Asia Cup T20: ಸೂರ್ಯ ನಾಯಕ, ಗಿಲ್ ಉಪನಾಯಕ: ಕನ್ನಡಿಗರಿಗೆ ಇಲ್ಲ ಸ್ಥಾನ
ಬಹಿ ನಿರೀಕ್ಷಿತ ಏಷ್ಯಾ ಕಪ್‌ಗೆ ತಂಡವನ್ನು ಪ್ರಕಟಿಸಲಾಗಿದೆ. ಈ ವೇಳೆ ಬಿಸಿಸಿಐ ಆಯ್ಕೆ ಸಮಿತಿ ಅಳದು ತಂಡವನ್ನು ಪ್ರಕಟಿಸಲಾಗಿದೆ. ಈ ವೇಳೆ ಭವಿಷ್ಯದ ದೃಷ್ಟಿಯಿಂದ ತಂಡವನ್ನು ಕಟ್ಟುವ ಕಾಯಕಕ್ಕೆ ಬಿಸಿಸಿಐ ಚಿತ್ತ ನೆಟ್ಟಿದೆ. ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ದೃಷ್ದಿಯಿಂದ ತಂಡವನ್ನು ಕಟ್ಟು ನಿಟ್ಟಿನಲ್ಲಿ ಬಿಸಿಸಿಐ ನಿರತವಾಗಿದೆ. ಇಂಗ್ಲೆಂಡ್‌ನಲ್ಲಿ ನಡೆದ ಟೆಸ್ಟ್ ಸರಣಿಯ ವೇಳೆ ಸ್ಥಿರ ಪ್ರದರ್ಶನ ನೀಡಿದ ಆಟಗಾರರಿಗೆ ನಿರಾಸೆ ಕಾದಿದೆ.
ಗಾಯದಿಂದ ಚೇತರಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಪಟ್ಟ ಕಟ್ಟಲಾಗಿದೆ. ಇನ್ನು ಟೀಮ್ ಇಂಡಿಯಾದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದೆ. ಏಷ್ಯಾ ಕಪ್ ಟಿ20 ಟೂರ್ನಿ ಸೆಪ್ಟಂಬರ್ 9ರಿಂದ ಆರಂಭವಾಗಲಿದ್ದು, ಭಾರತ ಈ ಟೂರ್ನಿಯಲ್ಲಿ ತನ್ನ ಅಭಿಯಾನವ್ನು ಸೆ.10ರಿಂದ ಆರಂಭಿಸಲಿದೆ. ಸೆಪ್ಟಂಬರ್ 14 ರಂದು ಭಾರತ ಹಾಗೂ ಪಾಕಿಸ್ತಾನ ನಡುವಣ ಹೈ ವೋಲ್ಟೇಜ್ ಪಂದ್ಯ ನಡೆಯಲಿದೆ.

ತಡವಾಗಿ ನಡೆದ ಪತ್ರಿಕಾಗೋಷ್ಠಿ
ಇನ್ನು ಏಷ್ಯಾಕಪ್ ಟಿ20 ಟೂರ್ನಿಗೆ ಭಾರತ ತಂಡವನ್ನು 1.30ಕ್ಕೆ ಪತ್ರಿಕಾಗೋಷ್ಠಿಯ ಮುಖಾಂತರ ಪ್ರಕಟಿಸಬೇಕಿತ್ತು. ಆದರೆ ಮುಂಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗ ಮುಂಬೈ ಹೊರಗಡೆಯಿಂದ ಬರುವ ಅಧಿಕಾರಿಗಳಿಗೆ ಸಭೆಯಲ್ಲಿ ಸರಿಯಾದ ಸಮಯದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಅಜಿತ್ ಅಗರ್‌ಕರ್ ಹಾಗೂ ಸೂರ್ಯಕುಮಾರ್ ಯಾದವ್ ಮಾತ್ರ ಮುಂಬೈನಲ್ಲಿಯೇ ಇದ್ದರು. ಉಳಿದ ಅಧಿಕಾರಿಗಳು ಬೇರೆ ಸ್ಥಳದಿಂದ ಬರಬೇಕಿತ್ತು. ಅವರು ಬರುವುದು ತಡವಾಗಿದ್ದರಿಂದ ತಂಡ ಪ್ರಕಟಿಸುವುದು ತಡವಾಗಿದೆ.
ಕನ್ನಡಿಗರಿಗೆ ಇಲ್ಲ ಸ್ಥಾನ
ಏಷ್ಯಾ ಕಪ್ ತಂಡದಲ್ಲಿ ಒಬ್ಬನೇ ಒಬ್ಬ ಕನ್ನಡಿಗನಿಗೆ ಅವಕಾಶ ಲಭಿಸಿಲ್ಲ. ಇಂಗ್ಲೆಂಡ್ ಪ್ರವಾಸದಲ್ಲಿ ಮಿಂಚಿನ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ಅವರಿಗೆ ಟಿ20 ತಂಡದಲ್ಲಿ ಸ್ಥಾನ ಸಿಗಲಿಲ್ಲ. ಅಲ್ಲದೆ ಐಪಿಎಲ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿ ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿರುವ ಪ್ರಸಿದ್ಧ್ ಕೃಷ್ಣಾ ಅವರಿಗೂ ತಂಡದಲ್ಲಿ ಸ್ಥಾನ ಲಭಿಸಿಲ್ಲ.
ಇಬ್ಬರು ನುರಿತ ಸ್ಪಿನ್ನರ್ಸ್‌ಗೆ ಅವಕಾಶ
ಟೀಮ್ ಇಂಡಿಯಾದ ಪರ ಏಷ್ಯಾ ಕಪ್‌ಗೆ ಪ್ರಕಟಿತ ತಂಡದಲ್ಲಿ ಇಬ್ಬರು ನುರಿತ ಸ್ಪಿನ್ ಬೌಲರ್‌ಗಳಿಗೆ ಅವಕಾಶ ನೀಡಲಾಗಿದೆ. ವರುಣ್ ಚಕ್ರವರ್ತಿ ಹಾಗೂ ಕುಲ್‌ದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಶ್ರೇಯಸ್‌ಗೆ ಇಲ್ಲ ಚಾನ್ಸ್
ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಎಷ್ಯಾ ಕಪ್ ಟಿ20 ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಇವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಇವರಿಗೆ ಯುಎಇ ಪಿಚ್‌ಗಳಲ್ಲಿ ಆಡುವ ಅನುಭವ ಇದೆ. ಹೀಗಾಗಿ ಇವರನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಮಾತುಗಳು ಇದ್ದವು. ಆದರೆ ಈ ಆಸೆ ಮಣ್ಣು ಪಾಲಾಗಿದೆ.
ಏಷ್ಯಾ ಕಪ್‌ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ) ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ,
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications