For Quick Alerts
ALLOW NOTIFICATIONS  
For Daily Alerts
 

India's Golden Era: 617 ದಿನಗಳಲ್ಲಿ 6 ಐಸಿಸಿ ಪ್ರಶಸ್ತಿ ಗೆದ್ದ ಭಾರತ

ಭಾರತ ವಿಶ್ವ ಕ್ರಿಕೆಟ್‌ನಲ್ಲಿ ಸದ್ಯ ಹೆಜ್ಜೆಯ ಗುರುತನ್ನು ಮೂಡಿಸುತ್ತಲೇ ಸಾಗಿದೆ. ಭಾನುವಾರ ಅಹಮದಾಬಾದ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿ 96 ರನ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿತು. ಈ ಮೂಲಕ ಟಿ20 ವಿಶ್ವಕಪ್‌ನ್ನು ಸತತ ಎರಡನೇ ಬಾರಿಗೆ, ಮೂರನೇ ಬಾರಿಗೆ ಟಿ20 ವಿಶ್ವಕಪ್‌ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ. ಭಾರತ ಕಳೆದ ಕೆಲವು ವರ್ಷಗಳಲ್ಲಿ ಐಸಿಸಿ ಈವೆಂಟ್‌ಗಳಲ್ಲಿ ತನ್ನ ಛಾಪು ಮೂಡಿಸುತ್ತಲೇ ಸಾಗಿದೆ.

ಭಾರತ ಬಾರ್ಬಡೋಸ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಜಯ ಸಾಧಿಸಿ ಇತಿಹಾಸ ನಿರ್ಮಿಸಿತು. ಈ ಮೂಲಕ ರೋಹಿತ್ ಶರ್ಮಾ ಪಡೆ ಇತಿಹಾಸ ನಿರ್ಮಿಸಿತು. ಈ ಟೂರ್ನಿಯಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿದ್ದ ಭಾರತ, ಅಬ್ಬರಿಸಿತ್ತು. ಜೂನ್‌ 29, 2024 ರಂದು ನಡೆದ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ 177 ರನ್‌ಗಳ ಗುರಿಯನ್ನು ದಕ್ಷಿಣ ಆಫ್ರಿಕಾ ತಂಡಕ್ಕೆ ನೀಡಿತ್ತು. ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 7 ರನ್‌ಗಳಿಂದ ಜಯ ಸಾಧಿಸಿತು. ಈ ಮೂಲಕ ಹಲವು ವರ್ಷಗಳ ಐಸಿಸಿ ಟ್ರೋಫಿ ಬರಕ್ಕೆ ಭಾರತ ತೆರೆ ಎಳೆಯಿತು. ಇಲ್ಲಿಂದ ಭಾರತ ಇತಿಹಾಸ ನಿರ್ಮಿಸುತ್ತಲೇ ಸಾಗಿತು.

India s Golden Era

ಭಾರತ ಆ ಬಳಿಕ ಐಸಿಸಿ ಅಂಡರ್‌ 19 ಟಿ20 ವಿಶ್ವಕಪ್‌ನಲ್ಲೂ ಇತಿಹಾಸ ನಿರ್ಮಿಸಿತು. ಕೌಲಾಲಂಪುರದಲ್ಲಿ ನಡೆದ ಪಂದ್ಯದಲ್ಲಿ ಭಾರತ 9 ವಿಕೆಟ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿತು. ಫೆಬ್ರವರಿ 2 ರಂದು ನಡೆದ ಮಹಿಳಾ ಅಂಡರ್ 19 ಟಿ20 ವಿಶ್ವಕಪ್‌ನಲ್ಲಿ ಮೊದಲು ಬ್ಯಾಟ್ ಮಾಡಿದ್ದ ದಕ್ಷಿಣ ಆಫ್ರಿಕಾ 82 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಭಾರತ 11.2 ಓವರ್‌ಗಳಲ್ಲಿ 1 ವಿಕೆಟ್‌ಗೆ 84 ರನ್‌ ಸೇರಿಸಿ ಜಯ ಸಾಧಿಸಿತು.

ಟಿ20 ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ Sanju Samson: ಸಿಕ್ಸರ್‌ಗೆ ಹೊಸ ಸುಲ್ತಾನ್‌ಟಿ20 ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ Sanju Samson: ಸಿಕ್ಸರ್‌ಗೆ ಹೊಸ ಸುಲ್ತಾನ್‌

ರೋಹಿತ್ ಶರ್ಮಾ ದಾಖಲೆ

ರೋಹಿತ್ ಶರ್ಮಾ ಅವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಏಕದಿನ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 7 ವಿಕೆಟ್‌ಗೆ 251 ರನ್‌ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಭಾರತ 49 ಓವರ್‌ಗಳಲ್ಲಿ 6 ವಿಕೆಟ್‌ಗೆ 254 ರನ್‌ ಸೇರಿಸಿ ಜಯ ಸಾಧಿಸಿ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ 2ನೇ ಐಸಿಸಿ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿತು.

ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ರೆಕಾರ್ಡ್‌

ಮುಂಬೈ ಡಿವೈ ಪಾಟೀಲ್‌ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 298 ರನ್ ಸೇರಿಸಿತು. ಸವಾಲಿನ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 45.3 ಓವರ್‌ಗಳಲ್ಲಿ 246 ರನ್‌ಗಳಿ ಸರ್ವಪತನ ಹೊಂದಿತು. ಈ ಮೂಲಕ ಭಾರತ ಮಹಿಳಾ ತಂಡ ಇತಿಹಾಸ ನಿರ್ಮಿಸಿತು.

ತವರಿನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಆಗಲು ಕಾರಣರಾದ 5 ಆಟಗಾರರುತವರಿನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಆಗಲು ಕಾರಣರಾದ 5 ಆಟಗಾರರು

ಆಯುಷ್ ಮಾತ್ರೆ ಪಡೆ ಚಾಂಪಿಯನ್

ಇದೆ ವರ್ಷದ ಆರಂಭದಲ್ಲಿ ಭಾರತ ತಂಡ ಜಿಂಬಾಬ್ವೆಯಲ್ಲಿ ನಡೆದ ಅಂಡರ್ 19 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 9 ವಿಕೆಟ್‌ ನಷ್ಟಕ್ಕೆ 411 ರನ್‌ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಇಂಗ್ಲೆಂಡ್ 40.2 ಓವರ್‌ಗಳಲ್ಲಿ 311 ರನ್‌ ಸೇರಿಸಿ ಸೋಲು ಕಂಡಿತು.

ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ, ನ್ಯೂಜಿಲೆಂಡ್ ತಂಡವನ್ನು ಮಣಿಸಿ ಆರ್ಭಟಿಸಿತು. ಈ ಮೂಲಕ ಭಾರತ 1 ವರ್ಷ 8 ತಿಂಗಳು 9 ದಿನಗಳ ಅಂತರದಲ್ಲಿ 6ನೇ ಐಸಿಸಿ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿತು.

Story first published: Monday, March 9, 2026, 14:58 [IST]
Other articles published on Mar 9, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+