ಜಾಗತಿಕ ಕ್ರೀಡೆಯಲ್ಲಿ ಭಾರತದ ಕೀರ್ತಿ ಪತಾಕೆ
ಈ ವರ್ಷ ಟೀಮ್ ಇಂಡಿಯಾ ಕ್ರೀಡಾಭಿಮಾನಿಗಳಿಗೆ ಖುಷಿ ನೀಡಿದ ವರ್ಷ. ಈ ವೇಳೆ ತಂಡದ ಪ್ರದರ್ಶನ ಹಾಗೂ ವೈಯಕ್ತಿಕ ಸಾಧನೆಗಳು ವಿಶ್ವಮಟ್ಟದಲ್ಲಿ ಸದ್ದು ಮಾಡಿವೆ. ಈ ವರ್ಷ ಕ್ರಿಕೆಟ್, ಅಥ್ಲೀಟಿಕ್ಸ್, ಚೆಸ್ ಹಾಗೂ ಹಾಕಿ ಕ್ರೀಡೆಯಲ್ಲಿ ಅಮೋಘ ಸಾಧನೆ ಮಾಡಿ ಬೀಗಿದ್ದಾರೆ. ಈ ಕ್ರೀಡೆಗಳಲ್ಲಿ ಭಾರತೀಯ ಆಟಗಾರರ ಬಹು ವರ್ಷಗಳ ಕನಸು ನನಸಾಗಿದೆ. ಹಾಗಿದ್ದರೆ ಈ ವರ್ಷ ಭಾರತದ ಕ್ರೀಡಾಪಟುಗಳು ಮಾಡಿದ ಸಾಧನೆ ಎಂತಹದ್ದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
12 ವರ್ಷಗಳಿಂದ ಟೀಮ್ ಇಂಡಿಯಾದ ಪುರುಷರ ಕ್ರಿಕೆಟ್ ತಂಡಕ್ಕೆ ಸಾಧ್ಯವಾಗದ ಸಾಧನೆಯನ್ನು ಈ ವರ್ಷ ರೋಹಿತ್ ಶರ್ಮಾ ಪಡೆ ಮಾಡಿದೆ. ಈ ವರ್ಷದ ಆರಂಭದಲ್ಲಿ ದುಬೈನಲ್ಲಿ ನಡೆದ ಏಕದಿನ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಅಮೋಘ ಸಾಧನೆ ಮಾಡಿದೆ. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ನ್ಯೂಜಿಲೆಂಡ್ ಮೊದಲು ಬ್ಯಾಟ್ ಮಾಡಿ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 251 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಭಾರತ 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಸಿಡಿಸಿ ಪ್ರಶಸ್ತಿ ಎತ್ತಿ ಸಂಭ್ರಮಿಸಿದೆ. ಈ ಮೂಲಕ ಬಹು ದಿನಗಳಿಂದ ಐಸಿಸಿ ಟ್ರೋಫಿ ಗೆಲ್ಲುವ ಭಾರತದ ಆಸೆ ಫಲಿಸಿದೆ.

ಭಾರತದ ಮಹಿಳಾ ತಂಡ ಸಹ ಈ ವರ್ಷ ಇತಿಹಾಸದ ಪುಟ ಸೇರಿದೆ. ಈ ವರ್ಷದಲ್ಲಿ ಟೀಮ್ ಇಂಡಿಯಾ ವನಿತೆಯರು ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಅಬ್ಬರದ ಪ್ರದರ್ಶನ ನೀಡಿ ಚೊಚ್ಚಲ ಬಾರಿಗೆ ಪ್ರಶಸ್ತಿಯನ್ನು ಗೆದ್ದು ಸಂಭ್ರಮಿಸಿದೆ. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಟೀಮ್ ಇಂಡಿಯಾ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 298 ರನ್ ಕಲೆ ಹಾಕಿತು. ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ಹಿಂಬಾಲಿಸಿದ ದಕ್ಷಿಣ ಆಫ್ರಿಕಾ 45.3 ಓವರ್‌ಗಳಲ್ಲಿ 246 ರನ್ ಸೇರಿಸಿ ಆಲೌಟ್ ಆಯಿತು.
ನೀರಜ್‌ಗೆ ಸ್ಮರಣೀಯ ವರ್ಷ
ಒಲಿಂಪಿಕ್ಸ್ ಕ್ರೀಡಾ ಕೂಟದಲ್ಲಿ ಭಾರತದ ಪರ ಬಂಗಾರ ಹಾಗೂ ಬೆಳ್ಳಿ ಸಾಧನೆ ಮಾಡಿರುವ ಜಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಅವರಿಗೆ ಈ ವರ್ಷ ಸ್ಮರಣೀಯ. ಈ ವರ್ಷ ಅವರು ತಮ್ಮ ಕನಸನ್ನು ಈಡೇರಿಸಿಕೊಂಡಿದ್ದಾರೆ. ನೀರಜ್ ಬಹು ವರ್ಷಗಳಿಂದ ಸಾಧಿಸಬೇಕು ಎಂದು ಅಂದುಕೊಂಡಿದ್ದ ಸಾಧನೆಯನ್ನು ಈ ಬಾರಿ ಮಾಡಿ ಬೀಗಿದ್ದಾರೆ. ಧೋಹಾ ಡೈಮಂಡ್ ಲೀಗ್‌ನಲ್ಲಿ ನೀರಜ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ 90.23 ಮೀಟರ್ ದೂರ ಜಾವೆಲಿನ್ ಎಸೆದು ಬೀಗಿದ್ದಾರೆ. ಈ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ದಿವ್ಯಾ ಇತಿಹಾಸ
ಭಾರತದ 20 ವರ್ಷದ ಯುವ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ, ಫಿಡೆ ಮಹಿಳಾ ಚೆಸ್ ವಿಶ್ವಕಪ್‌ನಲ್ಲಿ ಇವರು ಇತಿಹಾಸ ನಿರ್ಮಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ದಿವ್ಯಾ, ಕೊನೆರೂ ಹಂಪಿ ಅವರನ್ನು ಮಣಿಸಿ ಬೀಗಿದರು. ಈ ಮೂಲಕ ದಿವ್ಯಾ ವಿಶ್ವಕಪ್ ಹಾಗೂ ಗ್ರಾಂಡ್ ಮಾಸ್ಟರ್ ಗೌರವವನ್ನು ತಮ್ಮದಾಗಿಸಿಕೊಂಡರು.
ಭಾರತಕ್ಕೆ ಕಂಚು
ಭಾರತದಲ್ಲಿ ನಡೆದಿದ್ದ ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯಲ್ಲಿ ಆತಿಥೇಯ ತಂಡ ಅಮೋಘ ಪ್ರದರ್ಶನ ನೀಡಿದೆ. ಕಂಚಿನ ಪದಕ್ಕಾಗಿ ನಡೆದ ಹೋರಾಟದಲ್ಲಿ ಭಾರತ 4-2 ರಿಂದ ಅರ್ಜೆಂಟೀನಾ ತಂಡವನ್ನು ಮಣಿಸಿ ಅಬ್ಬರಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications