Champions Trophy 2025: ಈ ದಿನ ಚಾಂಪಿಯನ್ಸ್ ಟ್ರೋಫಿಗೆ ತಂಡ ಪ್ರಕಟ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿ ಮುಗಿದಿದೆ. ಟೀಮ್ ಇಂಡಿಯಾದ ಆಟಗಾರರು ಸದ್ಯ ತವರಿನತ್ತ ಮುಖ ಮಾಡಿದ್ದಾರೆ. ಇನ್ನು ಕೆಲವು ಯುವ ಆಟಗಾರರು ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುವುದಕ್ಕೆ ತಮ್ಮ ತಮ್ಮ ರಾಜ್ಯಗಳ ತಂಡವನ್ನು ಸೇರಿಕೊಳ್ಳುತ್ತಿದ್ದಾರೆ. ಇದೆಲ್ಲದರ ನಡುವೆ ಚಾಂಪಿಯನ್ಸ್ ಟ್ರೋಫಿಗೆ ತಂಡವನ್ನು ಪ್ರಕಟಿಸುವುದು ಯಾವಗ ಎಂಬ ಪ್ರಶ್ನೆ ಉದ್ಭವಿಸಿದ್ದು, ಅದಕ್ಕೆ ಉತ್ತರ ಇಲ್ಲಿದೆ.
ಈ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸಲಿದೆ. ಆದರೆ ಭಾರತ ಪಾಕ್ ಪ್ರವಾಸ ಬೆಳೆಸದ ಕಾರಣ, ಈ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಇನ್ನು ಭಾರತ ಆಡಲಿರುವ ಎಲ್ಲ ಪಂದ್ಯಗಳು ಸಹ ಯುಎಇನಲ್ಲಿ ನಡೆಯಲಿವೆ. ಇದಕ್ಕಾಗಿ ಯುಎಇ ಸಿದ್ಧವಾಗುತ್ತಿದೆ. ಈ ಬೆನ್ನೆಲ್ಲೆ ಭಾರತ ತಂಡವನ್ನು ಪ್ರಕಟಿಸುವುದು ಯಾವಾಗ ಎಂಬ ಪ್ರಶ್ನೆ ಎಲ್ಲರೂ ಮನೆ ಮಾಡಿದೆ.

ತಂಡ ಪ್ರಕಟವಾಗುವುದು ಯಾವಗ?
ಈ ಬಾರಿ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿಯಲ್ಲಿ ಆರಂಭವಾಗಲಿದೆ. ಈ ಟೂರ್ನಿಗೆ ಭಾರತ ತಂಡ ತನ್ನ ಬಲಿಷ್ಠ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದೆ. ಬಿಸಿಸಿಐ ಅಧಿಕಾರಿಗಳ ಸಭೆ ಹಾಗೂ ಆಯ್ಕೆ ಸಮಿತಿಯ ಸಭೆಯನ್ನು ಇದೇ 11 ರಂದು ಮುಂಬೈನಲ್ಲಿ ಕರೆಯಲಾಗಿದೆ. ಇದೇ ವೇಳೆ ತಂಡದ ರಚನೆಯ ಬಗ್ಗೆ ಚರ್ಚೆ ನಡೆಯುತ್ತದೆ. ಅಲ್ಲದೆ ಇದೇ ದಿನದಂದು ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ.
ಯಾರಿಗೆ ಪಟ್ಟ?
ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿರುವ ಟೀಮ್ ಇಂಡಿಯಾವನ್ನು, ಈ ಬಾರಿಯೂ ಮೈದಾನದಲ್ಲಿ ರೋಹಿತ್ ಶರ್ಮಾ ಮುನ್ನಡೆಸುವ ಸಾಧ್ಯತೆ ಇದೆ. ಇನ್ನು ಟೀಮ್ ಇಂಡಿಯಾದ ಉಪನಾಯಕ ಪಟ್ಟ ಯಾರಿಗೆ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಈ ಎಲ್ಲ ಪ್ರಶ್ನೆಗೆ ತಂಡ ಪ್ರಕಟವಾದ ಮೇಲೆ ಉತ್ತರ ಸಿಗಲಿದೆ. ಅಲ್ಲದೆ ಈ ಬಾರಿ ತಂಡದಲ್ಲಿ ಸ್ವಿಂಗ್ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಸ್ಥಾನ ಲಭಿಸುತ್ತದಾ ಎಂಬ ಪ್ರಶ್ನೆಗೂ ಶನಿವಾರವೇ ಉತ್ತರ ಸಿಗುವ ಸಾಧ್ಯತೆ ಇದೆ.

ಇನ್ನು ದೇಶೀಯ ಟೂರ್ನಿಯಲ್ಲಿ ಅಬ್ಬರದ ಪ್ರದರ್ಶನ ನೀಡಿ ಆಯ್ಕೆದಾರರ ಗಮನ ಸೆಳೆದಿರುವ ಮಯಾಂಕ್ ಅಗರ್‌ವಾಲ್, ಕರುಣ್ ನಾಯರ್, ಶ್ರೇಯಸ್ ಅಯ್ಯರ್‌ಗೆ ಸ್ಥಾನ ಸಿಗುತ್ತದಾ ಎಂಬುದನ್ನು ಸಹ ಕಾದು ನೋಡಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications