ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಎಡ್ಜ್‌ಬಸ್ಟನ್‌ನಲ್ಲಿ ಗುರುವಾರದಿಂದ ಆರಂಭವಾಗಲಿದೆ. ಈ ಪಂದ್ಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಮಾಡಿದ ತಪ್ಪನ್ನು ಎರಡನೇ ಟೆಸ್ಟ್ ಪಂದ್ಯದಲ್ಲಿ ಮಾಡಬಾರದು ಎಂಬ ಉದ್ದೇಶ ಟೀಮ್ ಇಂಡಿಯಾದ್ದಾಗಿದೆ. ಹೀಗಾಗಿ ಮಾಸ್ಟರ್ ಪ್ಲ್ಯಾನ್ ಒಂದನ್ನು ರೂಪಿಸಿಕೊಂಡಿದೆ. ಆ ಯೋಜನೆಯ ಬಗ್ಗೆ ವರದಿ ಇಲ್ಲಿದೆ.
ಭಾರತ ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತ್ತು. ಆದರೆ ಮಧ್ಯಮ ಹಾಗ ಕೆಳ ಮಧ್ಯಮಕ್ರಮಾಂಕದ ಬ್ಯಾಟರ್‌ಗಳು ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿರಲಿಲ್ಲ. ಈ ಚಿಂತೆ ತಂಡದ ಮ್ಯಾನೇಜ್ಮೆಂಟ್‌ಗೆ ಬಹುವಾಗಿ ಕಾಡಿತ್ತು. ಈಗ ಈ ಸಂಬಂಧ ಟೀಮ್ ಮ್ಯಾನೇಜ್ಮೆಂಟ್ ಸಹ ಬಿಗ್ ಪ್ಲ್ಯಾನ್ ಮಾಡಿಕೊಂಡಿದೆ. ಈ ಪ್ಲ್ಯಾನ್‌ನ ಬ್ಲ್ಯೂ ಪ್ರಿಂಟ್ ಏನು ಎಂಬ ಕಲ್ಪನೆ ನೆಟ್ಸ್‌ನಲ್ಲಿ ಅಭಿಮಾನಿಗಳಿಗೆ ಸಿಕ್ಕಿದೆ.

ಭಾರತದ ಸ್ಟಾರ್ ಬ್ಯಾಟರ್‌ಗಳ ಎರಡೂ ಇನಿಂಗ್ಸ್‌ಗಳಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಿದ್ದರು. ಆದರೂ ಸಹ ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲು ಕಂಡಿತ್ತು. ಈ ವೇಳೆ ಟೀಮ್ ಇಂಡಿಯಾದ ಕೆಳ ಕ್ರಮಾಂಕದ ಬ್ಯಾಟರ್‌ಗಳ ಆಟದ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 41 ರನ್‌ಗಳ ಒಳಗೆ ಆರು ವಿಕೆಟ್‌ಗಳನ್ನು, ಎರಡನೇ ಇನ್ನಿಂಗ್ಸ್‌ನಲ್ಲಿ 31 ರನ್‌ಗಳ ಒಳಗೆ 6 ವಿಕೆಟ್ ಕಳೆದುಕೊಂಡಿತು. ಹೀಗಾಗಿ ಈ ಬ್ಯಾಟಿಂಗ್ ಲೈನ್ ಅಪ್ ಮೇಲೆ ಪ್ರಶ್ನೆಗಳು ಇದ್ದವು.
ಮೊದಲ ಟೆಸ್ಟ್ ಪಂದ್ಯದಲ್ಲಿ ಮಾಡಿದ ತಪ್ಪನ್ನು ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮಾಡಬಾರದು ಎಂಬ ಲೆಕ್ಕಾಚಾರವನ್ನು ಹಾಕಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾ ಬೌಲರ್ಸ್ ಬ್ಯಾಟ್ ಹಿಡಿದು ಮೈದಾನಕ್ಕೆ ಇಳಿದಿದ್ದಾರೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಪಂದ್ಯಕ್ಕೂ ಮೊದಲು, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಆಕಾಶ್‌ದೀಪ್ ಮತ್ತು ಪ್ರಸಿದ್ಧ್ ಕೃಷ್ಣ ಸೇರಿದಂತೆ ಎಲ್ಲಾ ಬೌಲರ್‌ಗಳು ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡಿದ್ದಾರೆ. ಇದೇ ವೇಳೆ ಸ್ಟಾರ್ ಬೌಲರ್ ಸಿರಾಜ್ ನಾನು ಸಹ ಬ್ಯಾಟಿಂಗ್‌ನಿಂದ ಸಾಧ್ಯವಾದಷ್ಟು ಕೊಡುಗೆ ನೀಡಲು ಬಯಸುತ್ತಿರುವುದಾಗಿ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿರುವ ಆಕಾಶ್ ದೀಪ್ ನಾವು ಬ್ಯಾಟಿಂಗ್‌ಗೆ ಬರುವಾಗ್ಗೆ ತಂಡದ ಸ್ಥಿತಿ ಯಾವ ರೀತಿ ಇರುತ್ತದೆ ಎಂಬುದನ್ನು ಹೇಳುವುದು ಅಸಾಧ್ಯ. ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಮಾಡಿ ತಂಡದ ಮೊತ್ತ ಹೆಚ್ಚಿಸುವುದೇ ಗುರಿ ಎಂದು ತಿಳಿಸಿದ್ದಾರೆ.
ಎರಡನೇ ಟೆಸ್ಟ್‌ನಲ್ಲಿ ಬೌಲರ್‌ಗಳು ಸಹ ಬ್ಯಾಟಿಂಗ್‌ನಿಂದ ತಂಡಕ್ಕೆ ಕೊಂಚ ನೆರವಾದಲ್ಲಿ ತಂಡಕ್ಕೆ ಒಳ್ಳೆಯದು. ಅಲ್ಲದೆ ಎಡ್ಜ್‌ಬಸ್ಟನ್‌ನಲ್ಲಿ ಜಯ ಸಾಧಿಸುವ ಭಾರತದ ಆಸೆ ಫಲಿಸುತ್ತದೆ. ಇಂಗ್ಲೆಂಡ್ ಪ್ರವಾಸದಲ್ಲಿ ಭಾರತೀಯ ಬೌಲರ್ಸ್, ಕೊಡುಗೆಯನ್ನು ಬ್ಯಾಟಿಂಗ್‌ನಲ್ಲೂ ನೀಡುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ಗೆಲುವಿನ ಕನಸು ನನಸಾಗುತ್ತದೆ.