ಸಂಜು ಸ್ಯಾಮ್ಸನ್ ಸ್ಪೋಟಕ ಬ್ಯಾಟಿಂಗ್: ಇಂಗ್ಲೆಂಡ್‌ಗೆ 254 ಗುರಿ ನೀಡಿದ ಭಾರತ
ಮುಂಬೈ: ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ 260 ರನ್‌ಗಳ ಗುರಿಯನ್ನು ಇಂಗ್ಲೆಂಡ್ ತಂಡಕ್ಕೆ ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಆರಂಭ ಕಳಪೆಯಾಗಿತ್ತು. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಟಿ20 ವಿಶ್ವಕಪ್‌ನಲ್ಲಿ ತಮ್ಮ ಕಳಪೆ ಪ್ರದರ್ಶನ ಮುಂದುವರೆಸಿದರು. 2 ಬೌಂಡರಿ ಸಹಾಯದಿಂದ 9 ರನ್ ಬಾರಿಸಿದ ಅಭಿಷೇಕ್ ಶರ್ಮಾ ಇಲ್ಲದ ಹೊಡೆತಕ್ಕೆ ಮುಂದಾಗಿ ವಿಲ್ ಜಾಕ್ಸ್ ಎಸೆತದಲ್ಲಿ ಫಿಲ್ ಸಾಲ್ಟ್‌ಗೆ ಕ್ಯಾಚ್ ನೀಡಿದರು.

20 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಹಾಗೂ ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಆಧಾರವಾದರು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಇಂಗ್ಲೆಂಡ್ ಬೌಲರ್‌ಗಳು ವಿಫಲರಾದರು. ಈ ಜೋಡಿ ಪವರ್ ಪ್ಲೇನಲ್ಲಿ 1 ವಿಕೆಟ್ ಕಳೆದುಕೊಂಡು 67 ರನ್ ಸೇರಿಸಿತು.
ಎರಡನೇ ವಿಕೆಟ್‌ಗೆ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಜೋಡಿ 45 ಎಸೆತಗಳಲ್ಲಿ 97 ರನ್ ಸಿಡಿಸಿದರು. ಈ ಹಂತದಲ್ಲಿ ಇಶಾನ್ ಕಿಶನ್ 216 ಸ್ಟ್ರೈಕ್ ರೇಟ್‌ನಲ್ಲಿ 39 ರನ್ ಬಾರಿಸಿದರು. ಈ ಕ್ಲಾಸಿಕ್ ಇನಿಂಗ್ಸ್‌ನಲ್ಲಿ 4 ಬೌಂಡರಿ, 2 ಸಿಕ್ಸರ್ ಸೇರಿವೆ.
ಸಂಜು ಸ್ಯಾಮ್ಸನ್ 89 ರನ್
ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರಿಸಿದ್ದ ಸಂಜು ಸ್ಯಾಮ್ಸನ್ ಇದೇ ಫಾರ್ಮನ್ನು ಮುಂದುವರೆಸಿದ ಅವರು ಆರ್ಭಟಸಿದರು. ಆರಂಭದಲ್ಲಿ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಬಿಟ್ಟ ಕ್ಯಾಚ್‌ನ ಸಂಪೂರ್ಣ ಲಾಭ ಪಡೆದು ಬ್ಯಾಟ್ ಮಾಡಿದ ಸಂಜು, ಬಿಗ್ ಹಿಟ್ ಮೂಲಕ ರನ್ ವೇಗಕ್ಕೆ ಚುರುಕು ಮುಟ್ಟಿಸಿದರು. ಇವರು 42 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ ಸಹಾಯದಿಂದ 89 ರನ್ ಬಾರಿಸಿ ಅಬ್ಬರಿಸಿದರು. ಈ ಮೂಲಕ ಒತ್ತಡದ ಸನ್ನಿವೇಶ ಹಾಗೂ ಮಹತ್ವದ ಪಂದ್ಯದಲ್ಲಿ ಬಿಗ್ ಇನಿಂಗ್ಸ್ ಕಟ್ಟಿದ ಸಂಜು ಆರ್ಭಟಿಸಿದರು.
ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಶಿವಂ ದುಬೆ 25 ಎಸೆತಗಳಲ್ಲಿ 1 ಬೌಂಡರಿ, 4 ಸಿಕ್ಸರ್ ಸಹಾಯದಿಂದ 43 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ನಾಯಕ ಸೂರ್ಯಕುಮಾರ್ ಯಾದವ್ 1 ಬೌಂಡರಿ ಸಹಾಯದಿಂದ 11 ರನ್ ಸಿಡಿಸಿ ಪೆವಿಲಿಯನ್ ಸೇರಿದರು. ತಿಲಕ್ ವರ್ಮಾ ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಿದರು. ಈ ವೇಳೆ ತಿಲಕ್ ವರ್ಮಾ ಜಸ್ಟ್ 7 ಎಸೆತಗಳಲ್ಲಿ 3 ಸಿಕ್ಸರ್ ಸಹಾಯದಿಂದ 21 ರನ್ ಬಾರಿಸಿ ಔಟ್ ಆದರು.
ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಅನುಭವ ಬಳಸಿಕೊಂಡು ಬ್ಯಾಟ್ ಮಾಡಿದರು. ಇವರು 12 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ನೆರವಿನಿಂದ 27 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಟೀಮ್ ಇಂಡಿಯಾ ಅಂತಿಮವಾಗಿ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 253 ರನ್ ಸೇರಿಸಿತು. ಇಂಗ್ಲೆಂಡ್ ತಂಡದ ಯಾವೊಬ್ಬ ಬೌಲರ್ ಎಕಾನಮಿ ಸಿಂಗಲ್ ಡಿಜಿಟ್‌ನಲ್ಲಿ ಇರಲಿಲ್ಲ.
ಸ್ಟಾರ್‌ಗಳ ಉಪಸ್ಥಿತಿ
ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಸೆಮಿಫೈನಲ್ ಪಂದ್ಯವನ್ನು ನೋಡಲು ಮುಂಬೈನ ವಾಂಖೆಡೆ ಮೈದಾನದಲ್ಲಿ ಸ್ಟಾರ್‌ಗಳ ದಂಡೇ ಇತ್ತು. ಬಾಲಿವುಡ್‌ನ ನಟ ಅನಿಲ್ ಕಪೂರ್ ಹಾಜರಿದ್ದರು. ಮಾಜಿ ಕ್ರಿಕೆಟ್ ಆಟಗಾರರಾದ ರೋಹಿತ್ ಶರ್ಮಾ, ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಪಂದ್ಯವನ್ನು ನೋಡಿ ಎಂಜಾಯ್ ಮಾಡಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications